Homeಮುಖಪುಟಮತಗಳ್ಳತನದ ವಿರುದ್ಧ 'ಮಹಾ'ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್...

ಮತಗಳ್ಳತನದ ವಿರುದ್ಧ ‘ಮಹಾ’ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್ ಠಾಕ್ರೆ

- Advertisement -
- Advertisement -

ಥಾಣೆಯ ಕಲ್ಯಾಣ್ ಗ್ರಾಮೀಣ, ಡೊಂಬಿವಲಿ, ಭಿವಂಡಿ ಮತ್ತು ಮುರ್ಬಾದ್ ಕ್ಷೇತ್ರಗಳಲ್ಲಿ ನೋಂದಾಯಿಸಲ್ಪಟ್ಟ 4,500 ಮತದಾರರು ಕಳೆದ ವರ್ಷದ ಚುನಾವಣೆಯಲ್ಲಿ ಮುಂಬೈನ ಮಲಬಾರ್ ಹಿಲ್‌ನಲ್ಲೂ ಮತ ಚಲಾಯಿಸಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್‌) ನಾಯಕ ರಾಜ್ ಠಾಕ್ರೆ ಶನಿವಾರ (ನ.1) ಆರೋಪಿಸಿದ್ದಾರೆ.

ಕಳೆದ ವರ್ಷದ ಲೋಕಸಭಾ ಚುನಾವಣೆಯನ್ನು ಉಲ್ಲೇಖಿಸಿ ಆರೋಪ ಮಾಡಿದ್ದೋ..ಅಥವಾ ವಿಧಾನಸಭಾ ಚುನಾವಣೆಯ ಬಗ್ಗೆ ಆರೋಪಿಸಿದ್ದೋ ಎಂಬುದನ್ನು ರಾಜ್‌ಠಾಕ್ರೆ ಸ್ಪಷ್ಟಪಡಿಸಿಲ್ಲ.

“ಅವರು (4,500 ಜನರು) ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ಉದ್ದವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಜೊತೆ ರಾಜ್ಯದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ವಿರುದ್ಧ ಮುಂಬೈ ನಗರದಲ್ಲಿ ಶನಿವಾರ ಆಯೋಜಿಸಿದ್ದ ರ‍್ಯಾಲಿಯಲ್ಲಿ ರಾಜ್ ಠಾಕ್ರೆ ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಎರಡೆರಡು ಬಾರಿ ಮತದಾನ ಮಾಡಿರುವ ಲಕ್ಷಾಂತರ ಮತದಾರರಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಎಂಎನ್‌ಎಸ್‌ ಮತ್ತು ಎಂವಿಎ ಜೊತೆಯಾಗಿ ‘ಸತ್ಯಚಾ ಮೋರ್ಚಾ’ ಅಥವಾ ಸತ್ಯಕ್ಕಾಗಿ ಮೆರವಣಿಗೆ ಎಂಬ ಹೆಸರಿನ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು. ಇದರಲ್ಲಿ ಉದ್ಧವ್ ಠಾಕ್ರೆ, ರಾಜ್ ಠಾಕ್ರೆ, ಆದಿತ್ಯ ಠಾಕ್ರೆ, ಶರದ್ ಪವಾರ್, ಸುಪ್ರಿಯಾ ಸುಳೆ, ರೋಹಿತ್ ಪವಾರ್ ಮತ್ತು ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಭಾಗವಹಿಸಿದ್ದರು.

ಮುಂಬೈನ ಮತದಾರರ ಪಟ್ಟಿಗಳಲ್ಲಿ ವ್ಯತ್ಯಾಸಗಳನ್ನು ನಮ್ಮ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಜುಲೈ 1ರವರೆಗೆ ನೋಂದಾಯಿಸಲಾದ ಒಟ್ಟು ಮತದಾರರು 17,29,456 ಆಗಿದ್ದು, ಅದರಲ್ಲಿ 62,370 ಜನರು ‘ಅನುಮಾನಾಸ್ಪದ’ ಮತದಾರರು ಎಂದಿದ್ದಾರೆ.

ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಒಟ್ಟು 16,74,861 ಮತದಾರರಿದ್ದು, ಅವರಲ್ಲಿ 7,231 ಜನರು ‘ಅನುಮಾನಾಸ್ಪದರು’ ಎಂದು ಪಕ್ಷದ ಕಾರ್ಯಕರ್ತರು ಕಂಡುಕೊಂಡಿದ್ದಾರೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ಮುಂಬೈ ಈಶಾನ್ಯ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 15,90,710 ಇದೆ. ಈ ಪೈಕಿ 92,983 ಮತದಾರರು ‘ಅನುಮಾನಾಸ್ಪದರು’. ಮುಂಬೈ ಉತ್ತರ ಕೇಂದ್ರ ಕ್ಷೇತ್ರದ ಒಟ್ಟು 1,68,148 ಮತದಾರರಿದ್ದು, ಅದರಲ್ಲಿ 63,740 ಮಂದಿ ‘ಅನುಮಾನಾಸ್ಪದರು’ ಎಂದು ರಾಜ್ ಠಾಕ್ರೆ ವಿವರಿಸಿದ್ದಾರೆ.

ಜುಲೈನಲ್ಲಿ ಚುನಾವಣಾ ಆಯೋಗವು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯಡಿಯಲ್ಲಿ ‘ಅನುಮಾನಾಸ್ಪದ’ ಮತದಾರರು ಎಂಬ ವರ್ಗವಿಲ್ಲ ಎಂದು ಹೇಳಿದೆ.

ಮತದಾರರ ಪಟ್ಟಿಯಲ್ಲಿ ‘ನಕಲಿ ಮತದಾರರು’ ಇರುವಾಗ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಬಾರದು. ಮತದಾರರ ಪಟ್ಟಿಯನ್ನು ಮೊದಲು ಸ್ವಚ್ಛಗೊಳಿಸಿ ಎಂದು ರಾಜ್ ಠಾಕ್ರೆ ರ‍್ಯಾಲಿಯಲ್ಲಿ ಆಗ್ರಹಿಸಿದ್ದಾರೆ.

ಉದ್ದವ್ ಠಾಕ್ರೆ ಕೂಡ ರಾಜ್ ಠಾಕ್ರೆ ಆರೋಪಗಳನ್ನೇ ಪುನರುಚ್ಚರಿಸಿದ್ದಾರೆ.

ತಮ್ಮ ವರ್ಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸಗಳಿವೆ ಎಂದು ಕೆಲ ದಿನಗಳ ಹಿಂದೆ ಆದಿತ್ಯ ಠಾಕ್ರೆ ಆರೋಪಿಸಿದ್ದರು.

ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯ ನಡುವೆ ವರ್ಲಿಯಲ್ಲಿ 16,043 ಮತದಾರರನ್ನು ಸೇರಿಸಲಾಗಿದೆ ಮತ್ತು 5,661 ಹೆಸರುಗಳನ್ನು ಅಳಿಸಲಾಗಿದೆ ಎಂದು ಅದಿತ್ಯ ಠಾಕ್ರೆ ಸೋಮವಾರ ಹೇಳಿದ್ದರು.

“502 ಮತದಾರರ ಹೆಸರುಗಳು ಅವರ ತಂದೆಯಂತೆ ಇದೆ. 720 ಮತದಾರರ ತಂದೆಯ ಹೆಸರು ಬೇರೆ ಜಾತಿಯೊಂದಿಗೆ ತಳುಕು ಹಾಕಿಕೊಂಡಿದೆ. ಒಂದೇ ವೋಟರ್ ಐಡಿ ಸಂಖ್ಯೆಯಲ್ಲಿ 133 ಹೆಸರುಗಳು ಎರಡೆರಡು ಬಾರಿ ಇವೆ. 643 ಮತದಾರರ ಹೆಸರುಗಳಲ್ಲಿ ಲಿಂಗ ವ್ಯತ್ಯಾಸಗಳಿವೆ. 100 ವರ್ಷ ದಾಟಿದ 113 ಮತದಾರರಿದ್ದಾರೆ. 4,177 ಮತದಾರರ ವಿಳಾಸಗಳು ಸರಿಯಾಗಿಲ್ಲ ಅಥವಾ ಅವರು ಸೂಚಿಸಿದಂತಹ ವಿಳಾಸವೇ ಇಲ್ಲ. 3,335 ಮತದಾರರು 214 ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಇವು ಪ್ರಮುಖ ಅನುಮಾನಗಳು” ಎಂದು ಆದಿತ್ಯ ಠಾಕ್ರೆ ವಿವರಿಸಿದ್ದರು.

ಮಹಾರಾಷ್ಟ್ರ ಚುನಾವಣೆಗೆ ನೋಂದಾಯಿತ ಮತದಾರರ ಸಂಖ್ಯೆ (9.7 ಕೋಟಿ) ರಾಜ್ಯದ ವಯಸ್ಕ ಜನಸಂಖ್ಯೆಗಿಂತ (9.5 ಕೋಟಿ) ಹೆಚ್ಚಿರುವುದು ಹೇಗೆ ಎಂಬುವುದನ್ನು ವಿವರಿಸುವಂತೆ ಕಾಂಗ್ರೆಸ್ ಕಳೆದ ಫೆಬ್ರವರಿಯಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು.

ಇದಕ್ಕೆ ಉತ್ತರಿಸಿದ್ದ ಚುನಾವಣಾ ಆಯೋಗ, ಮತದಾರರಿಂದ ಪ್ರತಿಕೂಲವಾದ ತೀರ್ಪು ಪಡೆದ ಪಕ್ಷಗಳು ತನ್ನನ್ನು ಕೆಣಕಲು ಪ್ರಯತ್ನಿಸುವುದು ‘ಸಂಪೂರ್ಣವಾಗಿ ಅಸಂಬದ್ಧ’ ಎಂದು ಹೇಳಿತ್ತು.

ಬಿಹಾರದ ಒಂದೇ ಎಂಜಿನ್ ಸರ್ಕಾರ ಕೇಂದ್ರದಿಂದ ನಡೆಸಲ್ಪಡುತ್ತಿದೆ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...