Homeಮುಖಪುಟತಮಿಳುನಾಡು | ಎಸ್‌ಐಆರ್ ವಿರುದ್ಧ ನಿರ್ಣಯ ಅಂಗೀಕರಿಸಿದ ಸರ್ವಪಕ್ಷ ಸಭೆ : ಸುಪ್ರೀಂ ಕೋರ್ಟ್ ಮೆಟ್ಟಿಲೇರಲು...

ತಮಿಳುನಾಡು | ಎಸ್‌ಐಆರ್ ವಿರುದ್ಧ ನಿರ್ಣಯ ಅಂಗೀಕರಿಸಿದ ಸರ್ವಪಕ್ಷ ಸಭೆ : ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧಾರ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯು 2026ರ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ.ಚುನಾವಣಾ ಆಯೋಗ ಎಸ್‌ಐಆರ್‌ ಪ್ರಕ್ರಿಯೆ ನಿಲ್ಲಿಸದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಭೆ ನಿರ್ಧರಿಸಿದೆ.

ಸಭೆಯು ಎಸ್‌ಐಆರ್‌ನ ವಿವಿಧ ಪ್ರಾಯೋಗಿಕ ಸಮಸ್ಯೆಗಳನ್ನು ಉಲ್ಲೇಖಿಸಿದ್ದು, ಸಂವಿಧಾನಾತ್ಮಕವಾಗಿ,ಜವಾಬ್ದಾರಿಯುತವಾಗಿ ಮತ್ತು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಪರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

ಬಿಹಾರದ ಎಸ್‌ಐಆರ್‌ಗೆ ಸಂಬಂಧಿಸಿದ ಪ್ರಕರಣವು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಯಲ್ಲಿರುವಾಗ, ಅಕ್ಟೋಬರ್ 27ರ ಅಧಿಸೂಚನೆಯ ಪ್ರಕಾರ ತಮಿಳುನಾಡಿನಲ್ಲಿ ಎಸ್‌ಐಆರ್ ಮುಂದುವರಿಸುವ ಚುನಾವಣಾ ಆಯೋಗದ ನಿರ್ಧಾರವು ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿ ಮತ್ತು ತಮಿಳುನಾಡಿನ ಜನರ ಮತದಾನದ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ಸಭೆಯ ನಿರ್ಣಯ ಹೇಳಿದೆ.

ಎಸ್‌ಐಆರ್ ಸ್ವೀಕಾರಾರ್ಹವಲ್ಲ ಎಂದು ಹೇಳಿದ ಸರ್ವಪಕ್ಷ ಸಭೆ, ಪ್ರಸ್ತುತ ಘೋಷಣೆ ಮಾಡಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಚುನಾವಣಾ ಆಯೋಗ ತನ್ನ ಅಧಿಸೂಚನೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಬೇಕು. ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಸ್ಪಷ್ಟವಾಗಿ ಪಾಲಿಸಬೇಕು. ಎಸ್‌ಐಆರ್ ಪ್ರಕ್ರಿಯೆಗೆ ಸಾಕಷ್ಟು ಸಮಯವನ್ನು ನೀಡಬೇಕು ಮತ್ತು 2026ರ ಚುನಾವಣೆಗಳ ನಂತರವೇ ಸಂಪೂರ್ಣವಾಗಿ ನಿಷ್ಪಕ್ಷಪಾತ ಮತ್ತು ಸ್ವತಂತ್ರ ರೀತಿಯಲ್ಲಿ ಎಸ್‌ಐಆರ್ ನಡೆಸಬೇಕು ಸಭೆಯ ಎಂದು ನಿರ್ಣಯವು ಆಗ್ರಹಿಸಿದೆ.

ರಾಜಕೀಯ ಪಕ್ಷಗಳು ಎತ್ತಿದ ಕಳವಳಗಳನ್ನು ಚುನಾವಣಾ ಆಯೋಗ ನಿರಾಕರಿಸಿರುವುದರಿಂದ, ತಮಿಳುನಾಡಿನ ಎಲ್ಲಾ ಮತದಾರರ ಮತದಾನದ ಹಕ್ಕುಗಳನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಮೊರೆ ಹೋಗುವುದು ಬಿಟ್ಟು ಬೇರೆ ಪರ್ಯಾಯವಿಲ್ಲ. ಆದ್ದರಿಂದ,ಚುನಾವಣಾ ಪ್ರಜಾಪ್ರಭುತ್ವವನ್ನು ರಕ್ಷಿಸಲು ತಮಿಳುನಾಡಿನ ರಾಜಕೀಯ ಪಕ್ಷಗಳು ಜಂಟಿಯಾಗಿ ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಸಲ್ಲಿಸುತ್ತವೆ ಎಂದು ಸರ್ವಪಕ್ಷ ಸಭೆ ನಿರ್ಧರಿಸಿದೆ.

ಡಿಎಂಕೆ ಕರೆದಿದ್ದ ಈ ಸಭೆಯಲ್ಲಿ ಡಿಎಂಕೆಯ ಮೈತ್ರಿ ಪಕ್ಷಗಳು ಸೇರಿದಂತೆ 49 ರಾಜಕೀಯ ಪಕ್ಷಗಳು ಭಾಗವಹಿಸಿದ್ದವು.

ಪಟ್ಟಾಲಿ ಮಕ್ಕಳ್ ಕಚ್ಚಿ, ತಮಿಳು ಮಾನಿಲ ಕಾಂಗ್ರೆಸ್, ಎಎಂಎಂಕೆ, ನಾಮ್ ತಮಿಳರ್ ಕಚ್ಚಿ, ಪುದಿಯ ತಮಿಳಗಂ, ಇಂಡಿಯಾ ಜನನಯ ಕಚ್ಚಿ, ಮತ್ತು ಪೆರುಂತಲೈವರ್ ಮಕ್ಕಳ್ ಕಚ್ಚಿ ಪಕ್ಷಗಳು ಸಭೆಯನ್ನು ಬಹಿಷ್ಕರಿಸಿತ್ತು.

ಟಿವಿಕೆ ಹೇಳಿಕೆ ಬಿಡುಗೆ ಮಾಡಿ ಎಸ್‌ಐಆರ್ ಅನ್ನು ಬಲವಾಗಿ ವಿರೋಧಿಸಿದೆ. ವಿವಿಧ ನ್ಯೂನತೆಗಳನ್ನು ಉಲ್ಲೇಖಿಸಿ, ಡಿಎಂಕೆ ಉದ್ದೇಶಗಳನ್ನು ಪ್ರಶ್ನಿಸಿ ಮತ್ತು ‘ವಿಳಂಬಿತ ನಡೆ’ ಎಂದು ಕರೆದು ಸಭೆಯಿಂದ ತಪ್ಪಿಸಿಕೊಂಡಿದೆ.

ಕಿರುಕುಳದಿಂದ ಮನನೊಂದು ಮುಸ್ಲಿಂ ವ್ಯಾಪಾರಿ ಆತ್ಮಹತ್ಯೆ ಆರೋಪ : ತನಿಖೆಗೆ ಆದೇಶಿಸಿದ ಅಲ್ಪಸಂಖ್ಯಾತರ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...