Homeಅಂತರಾಷ್ಟ್ರೀಯಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ : 10 ಮಂದಿ ಸಾವು, ಹಲವರಿಗೆ ಗಾಯ

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ : 10 ಮಂದಿ ಸಾವು, ಹಲವರಿಗೆ ಗಾಯ

- Advertisement -
- Advertisement -

ಉತ್ತರ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಹತ್ತು ಜನರು ಸಾವನ್ನಪ್ಪಿದ್ದು, 260 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಇಂದು (ನ.3,2025) ಬೆಳಗಿನ ಜಾವ ಭೂಕಂಪ ಸಂಭವಿಸಿದ್ದು, ದೇಶದ ವಾಯುವ್ಯ, ಮಧ್ಯ, ಪಶ್ಚಿಮ, ಉತ್ತರ, ಈಶಾನ್ಯ ಮತ್ತು ಪೂರ್ವ ವಲಯಗಳು ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ.

ಮಝಾರ್-ಎ-ಶರೀಫ್ ನಗರದ ಬಳಿಯ ಖೋಲ್ಮ್‌ನಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದ್ದು, ಅಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ ಎಂದು. ಗಾಯಗೊಂಡವರಲ್ಲಿ ಅನೇಕರಿಗೆ ಚಿಕಿತ್ಸೆ ನೀಡಲಾಗಿದ್ದು, ನಂತರ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಅಫ್ಘಾನಿಸ್ತಾನದ ಭೂಕಂಪವು ಭೂಮಿಯ 23 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ದೃಢಪಡಿಸಿದೆ. ಉಜ್ಬೇಕಿಸ್ತಾನ್, ತಜಿಕಿಸ್ತಾನ್ ಮತ್ತು ಪಾಕಿಸ್ತಾನದಲ್ಲೂ ಕಂಪನದ ಅನುಭವವಾಗಿದೆ ಎಂದು ಹೇಳಿದೆ.

ಪ್ರಮುಖ ದೋಷ ರೇಖೆಗಳಲ್ಲಿ ಅಫ್ಘಾನಿಸ್ತಾನ ಇರುವುದರಿಂದ ಅಲ್ಲಿ ಆಗಾಗ್ಗೆ ಭೂಕಂಪಗಳು ಸಂಭವಿಸುತ್ತಿರುತ್ತದೆ. ಈ ವರ್ಷದ ಆಗಸ್ಟ್ 31ರಂದು ಪೂರ್ವ ಅಫ್ಘಾನಿಸ್ತಾನದ ಪಾಕಿಸ್ತಾನ ಗಡಿಯ ಬಳಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ 2, 200ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.

ಮೆಕ್ಸಿಕೊ | ಸೂಪರ್ ಮಾರ್ಕೆಟ್‌ನಲ್ಲಿ ಸ್ಪೋಟ : ಕನಿಷ್ಠ 23 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...