ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಹೆಚ್.ವೈ ಮೇಟಿ ಇಂದು (ನ.4) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಾಗಲಕೋಟೆಯ ಹಾಲಿ ಶಾಸಕರಾಗಿರುವ ಮೇಟಿ ಅವರನ್ನು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,”ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ ಮೇಟಿ ಅವರ ನಿಧನವಾರ್ತೆ ನೋವುಂಟು ಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ ಎಂದಿದ್ದಾರೆ.
ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ ಎಂದು ಹೇಳಿದ್ದಾರೆ.
ವಿಜಯಪುರದಲ್ಲಿ ಲಘು ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲು


