Homeಮುಖಪುಟವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

- Advertisement -
- Advertisement -

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗಮನಾರ್ಹ ಅಜೇಯ ಶತಕದೊಂದಿಗೆ ಭಾರತವನ್ನು ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಭಾರತೀಯ ಕ್ರಿಕೆಟ್‌ ತಾರೆ ಜೆಮಿಮಾ ರೊಡ್ರಿಗಸ್, ಪಂದ್ಯದ ನಂತರದ ಭಾಷಣದಲ್ಲಿ ಸಾರ್ವಜನಿಕವಾಗಿ ಯೇಸುವಿಗೆ ಧನ್ಯವಾದ ಹೇಳಿದ ನಂತರ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಆನ್‌ಲೈನ್ ದ್ವೇಷಕ್ಕೆ ಗುರಿಯಾಗಿದ್ದಾರೆ.

ಪ್ಲೇಯರ್ ಆಪ್‌ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ 25 ವರ್ಷದ ಬ್ಯಾಟರ್, ಸೆಮಿಫೈನಲ್ ಗೆಲುವಿನ ನಂತರ ತನ್ನ ಧಾರ್ಮಿಕ ನಂಬಿಕೆಗೆ ಕೃತಜ್ಞತೆ ಸಲ್ಲಿಸಿದರು. “ನಾನು ಯೇಸುವಿಗೆ ಧನ್ಯವಾದ ಹೇಳಲು ಬಯಸುತ್ತೇನೆ; ಇದನ್ನು ನಾನೇ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಪಂದ್ಯದ ಬಳಿಕ ನಡೆದ ಸಮಾರಂಭದಲ್ಲಿ ಹೇಳಿದರು. “ಆಟ ಆಡುವಾಗ ನಾನು ಬೈಬಲ್‌ ಗ್ರಂಥವನ್ನು ಉಲ್ಲೇಖಿಸುತ್ತಿದ್ದೆ, ಸ್ಥಿರವಾಗಿ ನಿಲ್ಲಲು ಮತ್ತು ದೇವರು ನನಗಾಗಿ ಹೋರಾಡುತ್ತಾನೆ” ಎಂದು ಹೇಳಿದ್ದರು.

ಜೆಮಿಮಾ ಅವರ ವೈಯಕ್ತಿಕ ನಂಬಿಕೆಗಳನ್ನು ಪ್ರತಿಬಿಂಬಿಸುವ ಹೇಳಿಕೆಗಳಿಗೆ ಆನ್‌ಲೈನ್‌ನಲ್ಲಿ ಬಲಪಂಥೀಯವಾದಿ ಬಳಕೆದಾರರಿಂದ ನಿಂದನೆ ಎದುರಿಸುವಂತಾಗಿದೆ. “ಅವರು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುತ್ತಿದ್ದಾರೆ, ಮತಾಂತರಗಳಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.

ಹಲವಾರು ಬಲಪಂಥೀಯ ಖಾತೆಗಳಲ್ಲಿ, ಜೆಮಿಮಾ ಅವರು ತಮ್ಮ ತಂದೆ ಇವಾನ್ ರಾಡ್ರಿಗಸ್ ಅವರೊಂದಿಗೆ ಚರ್ಚ್ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರುವ ಹಳೆಯ ವೀಡಿಯೊಗಳನ್ನು ಈಗ ವೈರಲ್ ಮಾಡಲಾಗುತ್ತಿದೆ. ಅವರು ಸಮುದಾಯ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಜೆಮಿಮಾ ರಾಡ್ರಿಗಸ್ ಕ್ರಿಕೆಟ್ ಅನ್ನು ಸಾಮೂಹಿಕ ಮತಾಂತರಕ್ಕೆ ಸಾಧನವಾಗಿ ಬಳಸಿದ್ದಾರೆ. ಧಾರ್ಮಿಕ ಮತಾಂತರಕ್ಕಾಗಿ ಅಂತಹ ನಾಟಕ ಮಾಡಿದ ಒಬ್ಬ ಭಾರತೀಯನನ್ನು ನನಗೆ ತೋರಿಸಿ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ಅವರನ್ನು ‘ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ ಅವರ  ಪ್ರತಿ’ ಎಂದು ಕರೆದು ಅಪಹಾಸ್ಯ ಮಾಡಿದ್ದಾರೆ. ಹಿಂದೂ ಆಟಗಾರರು ವಿಜಯಗಳ ನಂತರ ‘ಭಗವಾನ್ ಅಥವಾ ಭಗವದ್ಗೀತೆಯನ್ನು ಎಂದಿಗೂ ಪ್ರಾರ್ಥಿಸುವುದಿಲ್ಲ’ ಎಂದು ಆರೋಪಿಸಿದ್ದಾರೆ.

ಕೆಲವು ಬಳಕೆದಾರರು ರಾಡ್ರಿಗಸ್ ಕ್ರಿಶ್ಚಿಯನ್ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸುತ್ತಿರುವ ಹಳೆಯ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ಅವಹೇಳನಕಾರಿ ಶೀರ್ಷಿಕೆ ನೀಡಿದ್ದು, “ಅಕ್ಕಿ ಚೀಲ ಮತಾಂತರ” ದಂತಹ ನಿಂದನಾತ್ಮಕ ಪದ ಬಳಸಿದ್ದಾರೆ. ಭಾರತದ ವಿಶ್ವಕಪ್ ಗೆಲುವಿನ ನಂತರ ಕೆಲವರು ಅವರ ನಂಬಿಕೆಯನ್ನು ಅಪಹಾಸ್ಯ ಮಾಡಿದ್ದಾರೆ. ‘ಯೇಸು ಫೈನಲ್‌ನಲ್ಲಿ ಸಹಾಯ ಮಾಡಲು ಬರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಆನ್‌ಲೈನ್ ಪ್ರತಿಕ್ರಿಯೆಯ ಹೊರತಾಗಿಯೂ, ರಾಡ್ರಿಗಸ್ ಅವರ ಆಟವು ಭಾರತದ ಅಭಿಯಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಅವರ ಅಜೇಯ ಶತಕವು ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು, ಅಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದರು.

299 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಲಾರಾ ವೋಲ್ವಾರ್ಡ್ ಅವರ ಹೋರಾಟದ ಶತಕದ ಹೊರತಾಗಿಯೂ 246 ರನ್‌ಗಳಿಗೆ ಆಲೌಟ್ ಆಯಿತು.

ಉತ್ತರ ಪ್ರದೇಶ| ದಲಿತ ಸಮುದಾಯದ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದ ಭೂಮಾಲೀಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...