Homeಮುಖಪುಟಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

ಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ 25 ಲಕ್ಷ ಅಥವಾ ರಾಜ್ಯದ ಒಟ್ಟು ಮತದಾರರಲ್ಲಿ ಶೇಕಡ 12ರಷ್ಟು ‘ನಕಲಿ ಮತಗಳು’ ಚಲಾವಣೆಯಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಬುಧವಾರ (ನ.5) ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ ಅವರು, ಕಾಂಗ್ರೆಸ್ ಗೆಲುವನ್ನು ಸೋಲಾಗಿ ಪರಿವರ್ತಿಸಲು ‘ವ್ಯವಸ್ಥಿತ ಷಡ್ಯಂತ್ರ’ ನಡೆದಿದೆ ಎಂದು ಹೇಳಿದ್ದಾರೆ.

“ಹರಿಯಾಣದಲ್ಲಿ 2 ಕೋಟಿ ಮತದಾರರಿದ್ದಾರೆ, ಅವರಲ್ಲಿ 25 ಲಕ್ಷ ನಕಲಿ ಮತದಾರರು. ನಮ್ಮ ತಂಡ 5.21 ಲಕ್ಷ ನಕಲಿ ಮತದಾರರ ಮಾಹಿತಿಯನ್ನು ಪತ್ತೆಹಚ್ಚಿದೆ. ಹರಿಯಾಣದ ಪ್ರತಿ ಎಂಟು ಮತದಾರರಲ್ಲಿ ಒಬ್ಬರು ನಕಲಿ” ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

ಮತದಾರರ ಪಟ್ಟಿಯಲ್ಲಿನ ಆಪಾದಿತ ವ್ಯತ್ಯಾಸಗಳನ್ನು ರಾಹುಲ್ ಗಾಂಧಿ ಸ್ಕ್ರೀನ್ ಮೂಲಕ ವಿವರಿಸಿದ್ದಾರೆ. ಅದರಲ್ಲಿ ಅವರು ತೋರಿಸಿದ ಮಹಿಳೆಯೊಬ್ಬರ ಫೋಟೋ ಗಮನಾರ್ಹವಾಗಿತ್ತು.

“ತಾನು ತೋರಿಸಿರುವುದು ಬ್ರೆಝಿಲ್‌ನ ಮಾಡೆಲ್ ಒಬ್ಬರ ಫೋಟೋ. ಸೀಮಾ, ಸ್ವೀಟಿ, ಸರಸ್ವತಿ, ರಶ್ಮಿ, ವಿಮಲಾ ಮುಂತಾದ ವಿಭಿನ್ನ ಹೆಸರುಗಳಲ್ಲಿ ಈ ಮಹಿಳೆಯ ಫೋಟೋ ಹರಿಯಾಣದ ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಕಾಣಿಸಿಕೊಂಡಿದೆ. ಇವರು ಹರಿಯಾಣದ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಬುಡಮೇಲು ಮಾಡಲು ಬಿಜೆಪಿ ‘ಯೋಜಿತ ಕಾರ್ಯಾಚರಣೆ’ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಎಲ್ಲಾ ಎಕ್ಸಿಟ್‌ ಪೋಲ್‌ಗಳು ಕಾಂಗ್ರೆಸ್ ಗೆಲ್ಲುತ್ತದೆ ಎಂದು ಹೇಳಿದ್ದರೂ, ನಮ್ಮ ಪಕ್ಷಕ್ಕೆ ಸೋಲಾಯಿತು. ಹರಿಯಾಣದ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಪತ್ರಗಳು ಚಲಾವಣೆಯಾದ ಮತಗಳಿಗೆ ಹೊಂದಾಣಿಕೆಯಾಗಿಲ್ಲ. ಕಾಂಗ್ರೆಸ್‌ನ ಅಭೂತಪೂರ್ವ ಗೆಲುವನ್ನು ಸೋಲಾಗಿ ಪರಿವರ್ತಿಸಲು ದೊಡ್ಡ ಷಡ್ಯಂತ್ರ ನಡೆಸಲಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಚುನಾವಣೆಯ ನಂತರ ಹರಿಯಾಣದ ಹಾಲಿ ಸಿಎಂ ನಯಾಬ್ ಸಿಂಗ್ ಸೈನಿ ಅವರು ನಗು ನಗುತ್ತಾ ಸುದ್ದಿಗೋಷ್ಠಿ ನಡೆಸಿದ ವಿಡಿಯೋ ತೋರಿಸಿದ ರಾಹುಲ್ ಗಾಂಧಿ, “ಕಾಂಗ್ರೆಸ್ ಫುಲ್ ಸ್ವೀಪ್ ಗಳಿಸುತ್ತದೆ ಎಂದು ವರದಿಗಳು ಬಂದರೂ, ಸೈನಿ ಅವರ ಮುಖದಲ್ಲಿ ನಗು ಮತ್ತು ಅವರು ಮಾತನಾಡಿ ರೀತಿ ಗಮನಿಸಿ. ಇದು ಚುನಾವಣೆಯ ಎರಡು ದಿನಗಳ ನಂತರದ ವಿಡಿಯೋ” ಎಂದಿದ್ದಾರೆ.

ಉತ್ತರ ಪ್ರದೇಶ ಮತ್ತು ಹರಿಯಾಣ ಎರಡರಲ್ಲೂ ಸಾವಿರಾರು ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮನೆ ಸಂಖ್ಯೆ 150ರಲ್ಲಿ ವಾಸಿಸುವ ಪಲ್ವಾಲ್ ಜಿಲ್ಲಾ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಬಿಜೆಪಿ ನಾಯಕನ ವಿಳಾಸದಲ್ಲಿ 66 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿಯ ಮನೆಯಲ್ಲಿ 500 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕ ದಾಲ್ಚಂದ್ ಅವರು ಯುಪಿ ಮತ್ತು ಹರಿಯಾಣ ಎರಡರಲ್ಲೂ ಮತ ಚಲಾಯಿಸುತ್ತಿದ್ದಾರೆ. ಮಥುರಾದ ಬಿಜೆಪಿ ಸರಪಂಚ್ ಪ್ರಹ್ಲಾದ್ ಕೂಡ ಅದನ್ನೇ ಮಾಡುತ್ತಿದ್ದಾರೆ. ಈ ರೀತಿಯ ಸಂಖ್ಯೆ ಸಾವಿರಾರು ಇದೆ ಎಂದಿದ್ದಾರೆ.

‘ಮನೆ ಸಂಖ್ಯೆ. ಶೂನ್ಯ’ ಎಂದು ಪಟ್ಟಿ ಮಾಡಲಾದ ವಿಳಾಸಗಳಲ್ಲಿನ ಅಕ್ರಮಗಳ ಬಗ್ಗೆಯೂ ರಾಹುಲ್ ಗಾಂಧಿ ಗಮನಸೆಳೆದಿದ್ದಾರೆ. ಮನೆ ಸಂಖ್ಯೆ ಶೂನ್ಯ ಎನ್ನುವುದು ವಸತಿ ರಹಿತರಿಗೆ ಮೀಸಲಾದ ಪದನಾಮವಾಗಿದೆ.

ಹರಿಯಾಣ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ : ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...