Homeಮುಖಪುಟಪಶ್ಚಿಮ ಬಂಗಾಳ 'ಎಸ್‌ಐಆರ್‌': ಎರಡು ದಿನಗಳಲ್ಲಿ 1.10 ಕೋಟಿ ಜನರಿಗೆ ಗಣತಿ ನಮೂನೆ ವಿತರಣೆ

ಪಶ್ಚಿಮ ಬಂಗಾಳ ‘ಎಸ್‌ಐಆರ್‌’: ಎರಡು ದಿನಗಳಲ್ಲಿ 1.10 ಕೋಟಿ ಜನರಿಗೆ ಗಣತಿ ನಮೂನೆ ವಿತರಣೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಪ್ರಾರಂಭವಾದ ಭಾರತ ಚುನಾವಣಾ ಆಯೋಗದ (ಇಸಿಐ) ಮೂರು ಹಂತದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನ ಮೊದಲ ಹಂತದ ಮೊದಲ ಎರಡು ದಿನಗಳಲ್ಲಿ ಒಟ್ಟು 1.10 ಕೋಟಿ ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದೆ.

ಮಂಗಳವಾರ ಬೆಳಿಗ್ಗೆಯಿಂದ ಬಿಎಲ್‌ಒಗಳು ಮತದಾರರ ಮನೆ ಬಾಗಿಲಿಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಲು ಪ್ರಾರಂಭಿಸಿದರು. ಬುಧವಾರ ರಾತ್ರಿ 8 ಗಂಟೆಯವರೆಗೆ ಒಟ್ಟು 1,10 ಕೋಟಿ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯ ಒಳಗಿನವರು ಬುಧವಾರ ರಾತ್ರಿ ದೃಢಪಡಿಸಿದರು.

“ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳು ಉತ್ತಮವಾಗಿ, ವೇಳಾಪಟ್ಟಿಯ ಪ್ರಕಾರ ನಡೆಯುತ್ತಿವೆ” ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಕ್ಟೋಬರ್ 27, 2025 ರಂದು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಲ್ಲಿ 7,66,37,529 ಮತದಾರರಿದ್ದು, 2002 ರಲ್ಲಿ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ಕೊನೆಯ ತೀವ್ರ ಪರಿಷ್ಕರಣೆಯಲ್ಲಿ ಈಗಾಗಲೇ ಹೆಸರು ಇರುವವರು ಎಣಿಕೆ ನಮೂನೆಗಳಲ್ಲಿ ವಿವರಗಳನ್ನು ಸಲ್ಲಿಸಬೇಕು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಉಳಿಸಿಕೊಳ್ಳಲು ಈ ಮತದಾರರು ಯಾವುದೇ ಇತರ ಪೋಷಕ ದಾಖಲೆಗಳನ್ನು ಸಲ್ಲಿಸಬೇಕಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಕೊನೆಯ ಎಸ್‌ಐಆಅರ್‌ ಅನ್ನು 2002 ರಲ್ಲಿ ನಡೆಸಲಾಯಿತು.

2002 ರ ಪಟ್ಟಿಯಲ್ಲಿ ತಮ್ಮ ಅಥವಾ ಅವರ ಪೋಷಕರ ಹೆಸರನ್ನು ಹೊಂದಿರದ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಉಳಿಸಿಕೊಳ್ಳಲು ಆಯೋಗವು ನಿರ್ದಿಷ್ಟಪಡಿಸಿದ 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಬೇಕಾಗುತ್ತದೆ.

ಸುಪ್ರೀಂ ಕೋರ್ಟ್‌ನ ಆದೇಶವನ್ನು ಅನುಸರಿಸಿ, ಆಧಾರ್ ಕಾರ್ಡ್ ಅನ್ನು ಪಟ್ಟಿಯಲ್ಲಿ 12 ನೇ ದಾಖಲೆಯಾಗಿ ಸೇರಿಸಲಾಗಿದೆ. ಆದರೆ ಆಯೋಗವು, ಆಧಾರ್ ಕಾರ್ಡ್ ಅನ್ನು ಒದಗಿಸುವುದು ಸಾಕಾಗುವುದಿಲ್ಲ, ಸಂಬಂಧಪಟ್ಟ ಮತದಾರರು ಆಯೋಗವು ನಿರ್ದಿಷ್ಟಪಡಿಸಿದ 11 ಇತರ ದಾಖಲೆಗಳಲ್ಲಿ ಒಂದನ್ನು ಸಲ್ಲಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ಮುಂದಿನ ವರ್ಷ ಮಾರ್ಚ್ ವೇಳೆಗೆ ಎಸ್‌ಐಆರ್ ಪ್ರಕ್ರಿಯೆಯು ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಿರ್ಣಾಯಕ ವಿಧಾನಸಭಾ ಚುನಾವಣೆ ನಡೆಯಲಿದೆ.

ಹಿಮಾಚಲ ಪ್ರದೇಶ| ಮತ್ತೊಂದು ದಲಿತ ಮಗುವಿನ ಮೇಲೆ ದೈಹಿಕ ಶಿಕ್ಷಕರಿಂದ ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಹಿಲ್ ವಕೋಡ್ ಸಾವಿನ ಪ್ರಕರಣ: ಐಐಟಿ ಬಾಂಬೆ ನಿರ್ದೇಶಕರ ರಾಜೀನಾಮೆಗೆ 84 ಸಂಘಟನೆಗಳ ಆಗ್ರಹ

ಜಾತಿ ತಾರತಮ್ಯದ ಆರೋಪ ಎದುರಿಸುತ್ತಿರುವ ಡೀನ್‌ಗೆ ಸಂಸ್ಥೆಯ ಬೆಂಬಲ, ವಿದ್ಯಾರ್ಥಿಯ ವಿರುದ್ಧ ಮಾಧ್ಯಮಗಳಿಗೆ ಹೇಳಿಕೆ, ಸಿಸಿಟಿವಿ ದೃಶ್ಯಾವಳಿ ಸೋರಿಕೆ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ಆರೋಪ ಮುಂಬೈ: ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿ ಸಾಹಿಲ್...

ಕರ್ನಾಟಕದಲ್ಲಿ ಐದು ವರ್ಷಗಳಲ್ಲಿ 629 ವರದಕ್ಷಿಣೆ ಕಿರುಕುಳದ ಸಾವು; ಶಿಕ್ಷೆಯಾಗಿದ್ದು ಕೇವಲ ಏಳು ಪ್ರಕರಣಗಳಲ್ಲಿ: ವರದಿ 

ವರದಕ್ಷಿಣೆ ಕಿರುಕುಳ ಮತ್ತು ಸಾವುಗಳ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಶಿಕ್ಷೆಯ ಪ್ರಮಾಣ; ತನಿಖೆ, ಸಾಕ್ಷ್ಯ ಸಂಗ್ರಹ ಮತ್ತು ನ್ಯಾಯಾಂಗ ವಿಳಂಬದ ವಿರುದ್ಧ ತಜ್ಞರ ಕಳವಳ ಕರ್ನಾಟಕದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಸಾವುಗಳಂತಹ ಗಂಭೀರ ಅಪರಾಧಗಳ...

ಅರುಣಾಚಲ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆ ವಿರುದ್ಧ ಭುಗಿಲೆದ್ದ ಜನಾಕ್ರೋಶ; ಕೇಂದ್ರದಿಂದ ಆರ್‌ಎಎಫ್‌ನ ಎರಡು ತುಕಡಿ ರವಾನೆ

ಪ್ರಸ್ತಾವಿತ 11,200 ಮೆಗಾವ್ಯಾಟ್ ಸಾಮರ್ಥ್ಯದ ಸಿಯಾಂಗ್ ಅಪ್ಪರ್ ಮಲ್ಟಿಪರ್ಪಸ್ ಪ್ರಾಜೆಕ್ಟ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪಾಸಿಘಾಟ್‌ನಲ್ಲಿ ಹಿಂಸಾಚಾರ ಸಂಭವಿಸಿದ ಹಿನ್ನೆಲೆ, ಕೇಂದ್ರ ಸರ್ಕಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ರಾಪಿಡ್ ಆಕ್ಷನ್...

ನ್ಯಾಯಾಧೀಶರ ನೇಮಕಾತಿಗೆ ಕೊಲಿಜಿಯಂ ಚರ್ಚಿಸುವ ಮುನ್ನವೇ ಸಿಜೆಐ ಚಂದ್ರಚೂಡ್ ಸರ್ಕಾರದ ಪೂರ್ವಾನುಮತಿ ಪಡೆಯುತ್ತಿದ್ದರು: ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ (ಸಿಜೆಯ) ಡಿ.ವೈ. ಚಂದ್ರಚೂಡ್ ಅವರು ನ್ಯಾಯಾಧೀಶರ ನೇಮಕಾತಿಗಾಗಿ ಪ್ರಸ್ತಾಪಿಸಲಾದ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಅಧಿಕೃತವಾಗಿ ಚರ್ಚಿಸುವ ಮುನ್ನವೇ ಸರ್ಕಾರದೊಂದಿಗೆ ಚರ್ಚಿಸುವ ಅಭ್ಯಾಸವನ್ನು ಹೊಂದಿದ್ದರು ಎಂದು...

ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಕರ್ನಾಟಕ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರಿನ ಐಟಿ ವಲಯ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ಉದ್ಯೋಗಾವಕಾಶ ನಿರಾಕರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ...

“ಕೇವಲ ದುಷ್ಟರಿಗಷ್ಟೇ ಧರ್ಮ ಬೇಕು”: ಪ್ರಧಾನಿ ಮೋದಿ-ಚಿನ್ಮಯಾನಂದ ಎಐ ಸಂವಾದದ ನಡುವೆ ಸ್ವಾಮಿ ಚಿನ್ಮಯಾನಂದರ ಹಳೆಯ ಕ್ರಾಂತಿಕಾರಿ ಹೇಳಿಕೆ ಈಗ ಮುನ್ನೆಲೆಗೆ!

ದೆಹಲಿಯ ಭಾರತ್ ಮಂಟಪಂನಲ್ಲಿ ಆಯೋಜಿಸಿದ್ದ ‘ಚಿನ್ಮಯ ಅಮೃತ ಮಹೋತ್ಸವ’ ಜಾಗತಿಕ ಸಮ್ಮೇಳನದ ವೇದಿಕೆ ಇತ್ತೀಚೆಗೆ ವಿಶಿಷ್ಟ ತಾಂತ್ರಿಕ ಪ್ರದರ್ಶನವೊಂದಕ್ಕೆ ಸಾಕ್ಷಿಯಾಯಿತು. 1993ರಲ್ಲೇ ಇಹಲೋಕ ತ್ಯಜಿಸಿದ್ದ ಚಿನ್ಮಯ ಮಿಷನ್ ಸಂಸ್ಥಾಪಕ ಸ್ವಾಮಿ ಚಿನ್ಮಯಾನಂದ ಅವರ...

ಜೀವನ ವೆಚ್ಚ, ಶಾಲಾ ನಿಧಿ ಕಡಿತದ ವಿರುದ್ಧ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು, ಜಲಫಿರಂಗಿ ಪ್ರಯೋಗ

ಫ್ರಾನ್ಸ್‌ನಲ್ಲಿ ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ರಾಜಧಾನಿ ಪ್ಯಾರಿಸ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು...

‘ಒಂದೇ ಹೆಸರಿನಲ್ಲಿ 13 ವೋಟ್’ : ಉತ್ತರ ಪ್ರದೇಶ ಆಝಂಗಢದಲ್ಲಿ ಮತದಾರರ ಪಟ್ಟಿ ಅಕ್ರಮ; 9 ಅಧಿಕಾರಿಗಳ ವಿರುದ್ಧ ಕ್ರಮ

ಆಝಂಗಢ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ 13 ಪ್ರತ್ಯೇಕ ಸ್ಥಳಗಳಲ್ಲಿ ವಿಕಾಸ್ ಯಾದವ್ ಎಂಬ ಹೆಸರು ತಪ್ಪಾಗಿ ದಾಖಲಾಗಿರುವುದು ಆಂತರಿಕ ತನಿಖೆಯಿಂದ ತಿಳಿದುಬಂದ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)...

ಎಸ್‌ಆರ್‌ಎಫ್‌ಟಿಐ ವಿದ್ಯಾರ್ಥಿಗಳ ಹೋರಾಟಕ್ಕೆ ನಾಸಿರುದ್ದೀನ್ ಶಾ, ಪಾಯಲ್ ಕಪಾಡಿಯಾ ಬೆಂಬಲ; ಬಿಜೆಪಿ ವಿರುದ್ಧ ನಟನ ವಾಗ್ದಾಳಿ

ಕೋಲ್ಕತ್ತಾ: ಕೋಲ್ಕತ್ತಾದ ಸತ್ಯಜಿತ್ ರೇ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಸ್‌ಆರ್‌ಎಫ್‌ಟಿಐ)ಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಹಿರಿಯ ನಟ ನಾಸಿರುದ್ದೀನ್ ಶಾ ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕಿ ಪಾಯಲ್ ಕಪಾಡಿಯಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ: ದೆಹಲಿ ಮೂಲದ ರಿತೇಶ್ ಪಾಂಡೆ ಬಂಧನ: ತನಿಖೆ ಚುರುಕು 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಆಪಾದಿತ ಕುಟುಕು ಕಾರ್ಯಾಚರಣೆಯ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರ ಅಪರಾಧ ವಿಭಾಗದ ವಿಶೇಷ ತಂಡ ದೆಹಲಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಪ್ರಕರಣದಲ್ಲಿ ನಡೆದಿರುವ ಮೊದಲ...