Homeಮುಖಪುಟ18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; 'ದೇವ ದೀಪಾವಳಿ' ಹೆಸರಿನಲ್ಲಿ ಬಲಪಂಥೀಯ ಗುಂಪಿನ...

18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; ‘ದೇವ ದೀಪಾವಳಿ’ ಹೆಸರಿನಲ್ಲಿ ಬಲಪಂಥೀಯ ಗುಂಪಿನ ಆಟಾಟೋಪ

- Advertisement -
- Advertisement -

ಕಾನೂನು ಪಾಲಕರೊಂದಿಗೆ ಅನುಚಿತವಾಗಿ ವರ್ತಿಸಿ ಶಾಂತಿ ಕದಡಿದ, ಇಸ್ಲಾಮಿಕ್ ಸ್ಮಾರಕವನ್ನು ರಕ್ಷಿಸುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರದಲ್ಲಿ ಕೇಸರಿ ವಸ್ತ್ರಧಾರಿಗಳಾಗಿದ್ದ 20 ಜನ ಮಹಿಳೆಯರ ವಿರುದ್ಧ ಗುರುವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೇವ ದೀಪಾವಳಿ ಆಚರಿಸುವ ಹೆಸರಿನಲ್ಲಿ ಬುಧವಾರ ಸಂಜೆ ಅಬುನಗರ ರೆಡೈಯಾ ಮೊಹಲ್ಲಾದಲ್ಲಿರುವ 18 ನೇ ಶತಮಾನದ ಸಮಾಧಿಯಾದ ಮಕ್ಬರಾ-ಎ-ಸಂಗಿ ಮುಂದೆ ಕೆಲವು ಸ್ಥಳೀಯ ಬಿಜೆಪಿ ಸದಸ್ಯರೊಂದಿಗೆ ಮಹಿಳೆಯರು ಜಮಾಯಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಘಟನೆಯ ವೀಡಿಯೊದಲ್ಲಿ, ಮಹಿಳೆಯರು ಕರ್ತವ್ಯದಲ್ಲಿದ್ದ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬ್ಯಾರಿಕೇಡ್ ಅನ್ನು ಮುರಿಯಲು ಪ್ರಯತ್ನಿಸುತ್ತಿದ್ದು, ಮಕ್ಬರಾ ಒಳಗೆ ಪ್ರವೇಶಿಸಲು ಪೊಲೀಸರಿಗೆ ಧಮಕಿ ಹಾಕುತ್ತಿರುವುದನ್ನು ಕಾಣಬಹುದು.

ಅವರು ಸ್ಮಾರಕದ ಮುಂದೆ ದೀಪಗಳನ್ನು ಬೆಳಗಿಸಿ, ಪ್ರತಿ ವರ್ಷ ಅಲ್ಲಿ ದೇವ ದೀಪಾವಳಿಯನ್ನು ಆಚರಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಪೊಲೀಸರು ಮತ್ತು ಸಮಾಧಿ ಸಮಿತಿ ಸದಸ್ಯರು “ಬಿಜೆಪಿ ಮಹಿಳೆಯರು ಇಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಪ್ರಯತ್ನಿಸಿದ್ದಾರೆ” ಎಂದು ಹೇಳಿದರು.

ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ತಾರಕೇಶ್ವರ ರೈ, “ಮಹಿಳೆಯರು ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದರು. ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದರು. ನಾವು ಅವರನ್ನು ಮನೆಯಲ್ಲಿ ಪೂಜೆ ಮಾಡಲು ಕೇಳಿಕೊಂಡೆವು, ಬೇರೆಯವರು ನಂಬುವ ಧಾರ್ಮಿಕ ಸ್ಥಳದಲ್ಲಿ ಹೊಸ ಸಂಪ್ರದಾಯವನ್ನು ಪ್ರಾರಂಭಿಸಲು ನಾವು ಅವರಿಗೆ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ನ್ಯಾಯಾಲಯವು ನಿರ್ಧಾರ ತೆಗೆದುಕೊಳ್ಳುವವರೆಗೆ ಸ್ತಳದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ” ಎಂದರು.

ಜಿಲ್ಲಾಧ್ಯಕ್ಷ ಮುಖಲಾಲ್ ಪಾಲ್ ಸೇರಿದಂತೆ ಕೆಲವು ಬಿಜೆಪಿ ನಾಯಕರು ಆಗಸ್ಟ್ 11 ರಂದು ಮಕ್ಬರಾಕ್ಕೆ ನುಗ್ಗಿ, ಆರ್‌ಎಸ್‌ಎಸ್ ಧ್ವಜವನ್ನು ಇರಿಸಿದ್ದರು. ನಂತರ, ಬಿಜೆಪಿ ನಾಯಕರು ಸ್ಥಾಪಿಸಿದ್ದಾರೆ ಎನ್ನಲಾದ ಮಠ-ಮದೀರ್ ಸಂಘರ್ಷ ಸಮಿತಿ ಎಂಬ ಸಂಘಟನೆಯು, ಇಸ್ಲಾಮಿಕ್ ದೇವಾಲಯವು ಹಿಂದೆ ಹಿಂದೂ ದೇವಾಲಯವಾಗಿತ್ತು ಎಂಬ ಹೇಳಿಕೆಯ ಮೇರೆಗೆ ಅದನ್ನು ತನ್ನ ವಶಕ್ಕೆ ಪಡೆಯುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ನವೆಂಬರ್ 12 ರಂದು ಸ್ಥಳೀಯ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಲಿದೆ.

ಆ ಸಮಯದಲ್ಲಿ ಪೊಲೀಸರು ಗುರುತಿಸಲಾದ ಅರ್ಧ ಡಜನ್ ಮತ್ತು 150 ಜನ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

“ಮಕ್ಬರಾ ಠಾಕೂರ್ ದ್ವಾರವಾಗಿದ್ದು, 2012 ರವರೆಗೆ ಹಿಂದೂಗಳು ಪ್ರಾರ್ಥನೆ ಸಲ್ಲಿಸುತ್ತಿದ್ದ ಶ್ರೀಕೃಷ್ಣನ ದೇವಾಲಯವಾಗಿದೆ” ಎಂದು ಪಾಲ್ ಹೇಳಿಕೊಂಡಿದ್ದಾರೆ. ಮುಸ್ಲಿಮರು ಕಟ್ಟಡವನ್ನು ವಶಪಡಿಸಿಕೊಂಡು, ಅಂದಿನ ಆಡಳಿತವು ‘ಅತಿಕ್ರಮಣಕಾರರ’ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಹೇಳುತ್ತಾರೆ.

ಆದರೆ, ಸ್ಥಳೀಯರು ಕಳೆದ ಹಲವು ವರ್ಷಗಳಿಂದ ಮಕ್ಬರಾವನ್ನು ನೋಡುತ್ತಿದ್ದೇವೆ ಎಂದು ಹೇಳುತ್ತಾರೆ. ಪುರಾತನ ಸಮಾಧಿಯ ನೌಕರರು ಇದು 200 ವರ್ಷಗಳಿಗೂ ಹೆಚ್ಚು ಕಾಲದಿಂದ ಅಲ್ಲಿಯೇ ಇದೆ ಎಂದು ಹೇಳುತ್ತಾರೆ.

ಸ್ಥಳೀಯ ಆಡಳಿತವು ಸಿದ್ಧಪಡಿಸಿದ ವರದಿಯ ಪ್ರಕಾರ, ಪಕ್ಕಪಕ್ಕದಲ್ಲಿರುವ 753 ಮತ್ತು 1159 ಪ್ಲಾಟ್ ಸಂಖ್ಯೆಗಳನ್ನು ಕ್ರಮವಾಗಿ ಮಕ್ಬರಾ ಮತ್ತು ಠಾಕೂರ್ಜಿಗೆ ದೇವಾಲಯದ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಲಾಗಿದೆ. ವರದಿಯ ಪ್ರಕಾರ, ಎರಡು ಆಸ್ತಿಗಳ ಬಗ್ಗೆ ಗೊಂದಲ ಉಂಟಾಗಲು ಇದೇ ಕಾರಣ. ಮಕ್ಬರಾ ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ.

ಆಸ್ತಿಯ ಮುತ್ತವಾಲಿ (ಮೇಲ್ವಿಚಾರಕ) ಅಬ್ದುಲ್ ಅಜೀಜ್, “ಗಲಭೆಕೋರರ ವಿರುದ್ಧ ನಾವು ಯಾವುದೇ ಕ್ರಮವನ್ನು ನಿರೀಕ್ಷಿಸುವುದಿಲ್ಲ. ಪ್ರಸ್ತುತ, ಇಡೀ ಪ್ರದೇಶವನ್ನು ಬ್ಯಾರಿಕೇಡ್ ಮಾಡಲಾಗಿದೆ, ಪೊಲೀಸರು ಸುತ್ತುವರೆದಿದ್ದಾರೆ. ಮುಸ್ಲಿಮರು ಸಹ ಅಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿಲ್ಲ” ಎಂದು ಹೇಳಿದರು.

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...