Homeಕರ್ನಾಟಕಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ : ಅನುಮತಿ ಕುರಿತು ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ : ಅನುಮತಿ ಕುರಿತು ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಡೆಸಲು ಉದ್ದೇಶಿಸಿರುವ ಪಥಸಂಚಲನಕ್ಕೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದ ನಿರ್ಧಾರವನ್ನು ನವೆಂಬರ್‌ 13ರ ಮಧ್ಯಾಹ್ನ 2.30ಕ್ಕೆ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನ ಕಲಬುರಗಿ ಪೀಠ ಶುಕ್ರವಾರ (ನ.7) ನಿರ್ದೇಶಿಸಿದೆ.

ಪಥಸಂಚಲನಕ್ಕೆ ಅನುಮತಿ‌ ಕೋರಿ ಸಲ್ಲಿಸಿರುವ ಮನವಿ ಪರಿಗಣಿಸಲು ಜಿಲ್ಲಾಡಳಿತಕ್ಕೆ ನಿರ್ದೇಶಿಸುವಂತೆ ಕೋರಿ ಆರ್‌ಎಸ್‌ಎಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ಅವರು, “ನ್ಯಾಯಾಲಯದ ಸಲಹೆಯಂತೆ ನವೆಂಬರ್ 5ರಂದು ಬೆಂಗಳೂರಿನ ಅಡ್ವೊಕೇಟ್‌ ಜನರಲ್‌ ಕಚೇರಿಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗಿಯಾಗಿದ್ದು, ನಮ್ಮ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸರ್ಕಾರದ ನಿರ್ಧಾರ ತಿಳಿಸಬೇಕಿದೆ” ಎಂದಿದ್ದಾರೆ.

ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, “ಒಂದು ವಾರದೊಳಗೆ ಮನವಿ ಸಲ್ಲಿಸಿರುವ ಎಲ್ಲಾ ಸಂಘಟನೆಗಳಿಗೂ ಅನುಮತಿ ನೀಡಲಾಗುವುದು. ಯಾವ ದಿನ ಅವರಿಗೆ ಅವಕಾಶ ನೀಡಲಾಗುವುದು ಎಂಬುದನ್ನು ಲಿಖಿತವಾಗಿ ತಿಳಿಸಲಾಗುವುದು. ಅದಕ್ಕಾಗಿ ಒಂದು ವಾರ ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅರುಣ್‌ ಶ್ಯಾಮ್‌ ಅವರು, “ನವೆಂಬರ್‌ 13 ಅಥವಾ 16ರಂದು ಪಥಸಂಚಲನ ನಡೆಸಲು ಅನುಮತಿಸಿದರೆ ಅನುಕೂಲವಾಗುತ್ತದೆ. ಸಭೆ ನಡೆಸಲು ಕಲ್ಯಾಣ ಮಂಟಪವನ್ನು ಕಾಯ್ದಿರಿಸಲಾಗಿದ್ದು, ನಾವು ಕೇಳಿರುವ ಎರಡು ದಿನಗಳಂದು ಮಾತ್ರ ಮಂಟಪ ಬಳಕೆಗೆ ಲಭ್ಯವಿದೆ” ಎಂದಿದ್ದಾರೆ.

ವಾದ-ಪ್ರತಿವಾದ ಆಲಿಸಿದ ಪೀಠವು, ನವೆಂಬರ್‌ 5ರಂದು ಎಲ್ಲಾ ಸಂಘಟನೆಗಳ ಜೊತೆ ನಡೆಸಿರುವ ಶಾಂತಿ ಸಭೆಯು ಫಲಪ್ರದವಾಗಿದ್ದು, ಅರ್ಜಿದಾರ ಅಶೋಕ್‌ ಪಾಟೀಲ್‌ ಅವರು ನವೆಂಬರ್‌ 13 ಅಥವಾ 16ರಂದು ಪಥಸಂಚಲನಕ್ಕೆ ಅವಕಾಶ ನೀಡಬೇಕು ಎಂದು ಕೋರಿದ್ದಾರೆ. ಅನುಮತಿ ಕೋರಿರುವ ಎಲ್ಲಾ ಸಂಘಟನೆಗಳಿಗೂ ಒಂದು ಬಾರಿಯ ಕ್ರಮವಾಗಿ ಅನುಮತಿ ಕಲ್ಪಿಸಲಾಗುವುದು ಎಂದು ಎಜಿ ಭರವಸೆ ನೀಡಿದ್ದಾರೆ. ಆದ್ದರಿಂದ, ನವೆಂಬರ್‌ 13ರಂದು 2.30ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗುವುದು. ಅದೇ ದಿನ ಸರ್ಕಾರ ಅರ್ಜಿದಾರರಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಿಲುವು ತಿಳಿಸಬೇಕು ಎಂದು ನಿರ್ದೇಶಿಸಿ, ಅರ್ಜಿ ವಿಚಾರಣೆ ಮುಂದೂಡಿದೆ.

ಬೆಳಗಾವಿ| ಕಬ್ಬಿಗೆ ಎಫ್‌ಆರ್‌ಪಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ಹಿಂಸಾಚಾರಕ್ಕೆ ತಿರುಗಿದ ರೈತರ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...