Homeಕರ್ನಾಟಕರೈತರ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ : ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ...

ರೈತರ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ : ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

- Advertisement -
- Advertisement -

ಸಾಗಣೆ, ಕಟಾವು ವೆಚ್ಚ ಹೊರತುಪಡಿಸಿ ಸಕ್ಕರೆ ಕಾರ್ಖಾನೆಗಳಿಗೆ ಪೂರೈಸುವ ಪ್ರತಿ ಟನ್‌ ಕಬ್ಬಿಗೆ 3,500 ರೂಪಾಯಿ ದರ ನೀಡಬೇಕು ಎಂದು ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ರೈತರಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಪ್ರತಿ ಟನ್ ಕಬ್ಬಿಗೆ ಟನ್ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ.

ಶುಕ್ರವಾರ (ನ.7) ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜೊತೆ ಸುದೀರ್ಘ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳಿಕ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದರು.

ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರ ಪ್ರತಿ ಟನ್‌ ಕಬ್ಬಿಗೆ 3,300 ಕೊಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ. ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಪಿಆರ್‌ಫಿ ದರ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ, ಮಾತುಕತೆ ವಿಫಲವಾದ ಹಿನ್ನೆಲೆ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ ಎಂದು ಸಿಎಂ ಹೇಳಿದರು.

10.25 ರಿಕವರಿ ಇರುವ ಕಬ್ಬಿನ ಪ್ರತಿ ಟನ್‌ಗೆ 3,100 ರೂಪಾಯಿ, 11.25 ರಿಕವರಿ ಕಬ್ಬಿನ ಪ್ರತಿ ಟನ್‌ಗೆ 3,200 ರೂಪಾಯಿ ಕೊಡುವುದಾಗಿ ಸಚಿವರು ತಿಳಿಸಿದ್ದರು. ಇದಕ್ಕೆ ಪ್ರತಿಭಟನಾ ನಿರತ ರೈತರು ಒಪ್ಪಿರಲಿಲ್ಲ. ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಅವರ ಮನವೊಲಿಕೆ ವಿಫಲವಾಗಿತ್ತು. ಬಳಿಕ ಸಚಿವ ಸಂಪುಟದಲ್ಲಿ ಚರ್ಚಿಸಿ, ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸುವ ಜೊತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದರು.

ಸಂಪುಟದ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದು ಸಿಎಂ ಹೇಳಿದರು.

ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸ ಆಗುತ್ತದೆ. ಆದರೆ, ಎಲ್ಲಾ ಇಳುವರಿಗೂ 100 ರೂಪಾಯಿ ಹೆಚ್ಚಳ ಆಗಲಿದೆ. ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಕೇಂದ್ರ ಸರ್ಕಾರ 10-5-2025ರಂದು ಕಟಾವು ಮತ್ತು ಸಾಗಣೆ ಶುಲ್ಕ ಸೇರಿಸಿ 10.5 ರಿಕವರಿ ಇರುವ ಕಬ್ಬಿನ ಪ್ರತಿ ಮೆಟ್ರಿಕ್ ಟನ್‌ಗೆ 3,550 ರೂಪಾಯಿ ನಿಗದಿಪಡಿಸಿದೆ ಎಂದರು.

ರಾಜ್ಯದಲ್ಲಿ ಕಳೆದ ವರ್ಷ 5.6 ಕೋಟಿ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸಲಾಗಿದ್ದು, ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆಟ್ರಿಕ್ ಟನ್ ಉತ್ಪಾದನೆ ಅಂದಾಜಿಸಿದೆ. ಇಂದಿನ ಸಭೆಯಲ್ಲಿ ಕಟಾವು ಮತ್ತು ಸಾಗಾಟ ವೆಚ್ಚ ಹೊರತುಪಡಿಸಿ, 11.25 ರಿಕವರಿ ಇರುವ ಕಬ್ಬಿಗೆ 3,250 ರೂಪಾಯಿ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ 50 ರೂಪಾಯಿ ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ 100 ರೂಪಾಯಿ ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ. ರಿಕವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು. ಇದಕ್ಕೆ ರೈತರು ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ ಎಂದು ಸಿಎಂ ತಿಳಿಸಿದರು.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಮನವಿ ಮಾಡಲಾಗಿದೆ. ರೈತರು ಕೂಡ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡು ಕಾನೂನು ವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

ಸಕ್ಕರೆ ಎಂಎಸ್‌ಪಿ ಹೆಚ್ಚಳ, ಎಥೆನಾಲ್ ಹಂಚಿಕೆ ಹೆಚ್ಚಳ, ಸಕ್ಕರೆ ರಫ್ತು ಮಿತಿಯನ್ನು ಹೆಚ್ಚಿಸುವುದು ಸೇರಿದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಕೇಂದ್ರಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗ ಕರೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದೇವೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ. ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು, ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

‘ನಾವು ರೈತರ ಪರವಾಗಿ ನಿಲ್ಲುತ್ತೇವೆ, ಸಮಸ್ಯೆ ಬಗೆಹರಿಸಲು ಕೇಂದ್ರವೂ ಸಿದ್ದವಾಗಬೇಕು’: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...