ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
EQ of M: 5.4, On: 09/11/2025 12:06:28 IST, Lat: 12.49 N, Long: 93.83 E, Depth: 90 Km, Location: Andaman Sea.
For more information Download the BhooKamp App https://t.co/5gCOtjdtw0 @DrJitendraSingh @OfficeOfDrJS @Ravi_MoES @Dr_Mishra1966 @ndmaindia pic.twitter.com/uJB3jaDDI9— National Center for Seismology (@NCS_Earthquake) November 9, 2025
ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರ (ಜಿಎಫ್‌ಝೆಡ್) ರಿಕ್ಟರ್ ಮಾಪಕದಲ್ಲಿ 6.07 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 10 ಕಿಲೋ ಮೀಟರ್ ಆಳದಲ್ಲಿದೆ ಎಂದಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.5 ರಷ್ಟು ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ.
ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.
ಕಳೆದ ವಾರ, ಕೇಂದ್ರಾಡಳಿತ ಪ್ರದೇಶದ ಲಡಾಖ್‌ನ ಲೇಹ್‌ನಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಅದರ ಕೇಂದ್ರ ಬಿಂದು ಪತ್ತೆಯಾಗಿತ್ತು.
ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್


