Homeಮುಖಪುಟಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

ಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

- Advertisement -
- Advertisement -

ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನ ಮಂಗಳವಾರ (ನ.11) ಮುಕ್ತಾಯಗೊಂಡಿದೆ. ಅತಿ ಹೆಚ್ಚು ಶೇಕಡ 69.76ರಷ್ಟು ಮತದಾನವಾಗಿದೆ.

ಒಟ್ಟು 20 ಜಿಲ್ಲೆಗಳ 122 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆದಿದೆ. ಮತ್ತೊಮ್ಮೆ ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮತದಾನ ಮುಕ್ತಾಯಗೊಂಡ ಬಳಿಕ ಅನೇಕ ಟಿವಿ ಮಾಧ್ಯಮಗಳು ಮತ್ತು ಇತರ ರಾಜಕೀಯ ವಿಶ್ಲೇಷಣಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯ (ಎಕ್ಸಿಟ್ ಪೋಲ್‌) ವರದಿಯನ್ನು ಪ್ರಕಟಿಸಿವೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಆಡಳಿತರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪರವಾಗಿ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಹೇಳಿವೆ.

ದೈನಿಕ್ ಭಾಸ್ಕರ್ ಸಮೀಕ್ಷೆಯ ಪ್ರಕಾರ, ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ 145 ರಿಂದ 160 ಸ್ಥಾನಗಳನ್ನು ಗೆಲ್ಲಲಿದೆ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಕಾಂಗ್ರೆಸ್ ಪಕ್ಷ, ಎಡಪಕ್ಷಗಳು ಮತ್ತು ಇತರ ಪಕ್ಷಗಳ ಮಹಾಘಟಬಂಧನ್ (ಎಂಜಿಬಿ) 73 ರಿಂದ 91 ಸ್ಥಾನಗಳನ್ನು ಮತ್ತು ಇತರರು 5 ರಿಂದ 10 ಸ್ಥಾನಗಳನ್ನು ಗಳಿಸಲಿದ್ದಾರೆ.

ಪೀಪಲ್ಸ್ ಇನ್‌ಸೈಟ್ ಸಮೀಕ್ಷೆಯು ಎನ್‌ಡಿಎ 133 ರಿಂದ 148 ಸ್ಥಾನಗಳನ್ನು, ಮಹಾಘಟಬಂಧನ್ 87 ರಿಂದ 102 ಸ್ಥಾನಗಳನ್ನು, ಜನ ಸುರಾಜ್ ಪಕ್ಷ (ಜೆಎಸ್‌ಪಿ) ಎರಡು ಅಥವಾ ಯಾವುದೇ ಸ್ಥಾನಗಳನ್ನು ಪಡೆಯುವುದಿಲ್ಲ ಮತ್ತು ಇತರರು ಮೂರರಿಂದ ಆರು ಸ್ಥಾನಗಳನ್ನು ಪಡೆಯುತ್ತಾರೆ ಎಂದು ಅಂದಾಜಿಸಿದೆ.

ಮ್ಯಾಟ್ರಿಝ್ ಸಮೀಕ್ಷೆಯು ಎನ್‌ಡಿಎ 147 ರಿಂದ 167 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಪೀಪಲ್ಸ್ ಪಲ್ಸ್ ಎನ್‌ಡಿಎ ಮೈತ್ರಿಕೂಟಕ್ಕೆ 133 ರಿಂದ 159 ಸ್ಥಾನಗಳು ಮತ್ತು ಮಹಾಘಟಬಂಧನ್‌ಗೆ 75 ರಿಂದ 101 ಸ್ಥಾನಗಳು ಮತ್ತು ಜೆಎಸ್‌ಪಿಗೆ ಐದು ಸ್ಥಾನಗಳು ಸಿಗಲಿವೆ ಎಂದಿದೆ.

ಚಾಣಕ್ಯ ಸ್ಟ್ರಾಟಜೀಸ್ ಎನ್‌ಡಿಎ 130ರಿಂದ 138 ಸ್ಥಾನಗಳನ್ನು ಮತ್ತು ಮಹಾಘಟಬಂದನ್ 100 ರಿಂದ 108 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಪಿ-ಮಾರ್ಕ್ ಎನ್‌ಡಿಎ 142 ರಿಂದ 162 ಸ್ಥಾನಗಳನ್ನು ಮಹಾಘಟಬಂದನ್ 80 ರಿಂದ 98 ಮತ್ತು ಜನ ಸುರಾಜ್ 1ರಿಂದ 4 ಸ್ಥಾನಗಳನ್ನು ಪಡೆಯಬಹುದು ಎಂದಿದೆ. ಜೆವಿಸಿ 135 ರಿಂದ150 ಸ್ಥಾನಗಳನ್ನು ಎನ್‌ಡಿಎ ಪಡೆಯಬಹುದು 88 ರಿಂದ 103 ಸ್ಥಾನಗಳು ಮಹಾಘಟಬಂದನ್ ಪಾಲಾಗಬಹುದು ಹಾಗೂ ಜನ ಸುರಾಜ್ ಕನಿಷ್ಠ 1 ಸ್ಥಾನವನ್ನು ಗಳಿಸಬಹುದು ಎಂದು ಹೇಳಿದೆ.

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಮಹಾಘಟಬಂಧನ್ (ಇಂಡಿಯಾ) ನಡುವೆ ಪ್ರಮುಖವಾಗಿ ಸ್ಪರ್ಧೆ ನಡೆದಿದೆ.

ಎನ್‌ಡಿಎಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾದಳ (ಸಂಯುಕ್ತ), ಬಿಜೆಪಿ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ, ರಾಷ್ಟ್ರೀಯ ಲೋಕ ಮೋರ್ಚಾ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಒಳಗೊಂಡಿವೆ.

ಮಹಾಘಟಬಂಧನ್‌ ರಾಷ್ಟ್ರೀಯ ಜನತಾದಳ, ಕಾಂಗ್ರೆಸ್, ವಿಕಾಸಶೀಲ ಇನ್ಸಾನ್ ಪಕ್ಷ, ಮೂರು ಎಡ ಪಕ್ಷಗಳಾದ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್-ಲೆನಿನಿಸ್ಟ್), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ ) ಮತ್ತು ಹೊಸದಾಗಿ ರೂಪುಗೊಂಡ ಇಂಡಿಯನ್ ಇನ್‌ಕ್ಲೂಸಿವ್ ಪಕ್ಷಗಳನ್ನು ಒಳಗೊಂಡಿವೆ.

ಎರಡೂ ಪ್ರಮುಖ ಮೈತ್ರಿಕೂಟಗಳ ಜೊತೆ ಸೇರದ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷವು ಚೊಚ್ಚಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದೆ.

ವಿರೋಧ ಪಕ್ಷಗಳು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಎನ್‌ಡಿಎ ಹೇಳಿದೆ.

2014 ರಿಂದ 2015 ರವರೆಗಿನ ಒಂಬತ್ತು ತಿಂಗಳ ಅವಧಿಯನ್ನು ಹೊರತುಪಡಿಸಿ, ನಿತೀಶ್ ಕುಮಾರ್ ಕಳೆದ 20 ವರ್ಷಗಳಿಂದ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ.

2020ರ ವಿಧಾನಸಭಾ ಚುನಾವಣೆಯಲ್ಲಿ, ಎನ್‌ಡಿಎ ಮತ್ತು ಮಹಾಘಟಬಂಧನ್ ಶೇಕಡ 37.2ರಷ್ಟು ಒಂದೇ ರೀತಿ ಮತಗಳನ್ನು ಗಳಿಸಿದ್ದವು. ಆದಾಗ್ಯೂ, 243 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 125 ಸ್ಥಾನಗಳನ್ನು ಗೆದ್ದು ಎನ್‌ಡಿಎ ಅಲ್ಪ ಬಹುಮತದೊಂದಿಗೆ ಬಿಹಾರದಲ್ಲಿ ಅಧಿಕಾರಕ್ಕೆ ಮರಳಿತ್ತು. ವಿರೋಧ ಪಕ್ಷಗಳು 110 ಸ್ಥಾನಗಳನ್ನು ಪಡೆದಿತ್ತು.

ಆರ್‌ಜೆಡಿ 75 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಚುನಾವಣೆಯನ್ನು ಸೋತಿತ್ತು.

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...