Homeಮುಖಪುಟ'ಗಂಭೀರ ಮಟ್ಟ' ತಲುಪಿದ ದೆಹಲಿಯ ವಾಯುಮಾಲಿನ್ಯ : ಜಿಆರ್‌ಎಪಿ 3ನೇ ಹಂತ ಜಾರಿ

‘ಗಂಭೀರ ಮಟ್ಟ’ ತಲುಪಿದ ದೆಹಲಿಯ ವಾಯುಮಾಲಿನ್ಯ : ಜಿಆರ್‌ಎಪಿ 3ನೇ ಹಂತ ಜಾರಿ

- Advertisement -
- Advertisement -

ದೆಹಲಿಯ ವಾಯುಮಾಲಿನ್ಯ ‘ಗಂಭೀರ’ ಮಟ್ಟ ತಲುಪಿದ್ದು, ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ರಾಷ್ಟ ರಾಜಧಾನಿ ಪ್ರದೇಶದಾದ್ಯಂತ (ಎನ್‌ಸಿಆರ್‌) ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲ್ಯಾನ್ (ಜಿಆರ್‌ಎಪಿ) ಯ ಹಂತ IIIರ ಅಡಿ ನಿರ್ಬಂಧಗಳನ್ನು ಜಾರಿಗೊಳಿಸಿದೆ. ನಿರ್ಮಾಣ ಕಾರ್ಯಗಳು, ವಾಹನಗಳು ಮತ್ತು ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ವ್ಯಾಪಕವಾದ ನಿರ್ಬಂಧಗಳನ್ನು ವಿಧಿಸಲಾಗಿದೆ.

ಯಾವುದಕ್ಕೆಲ್ಲ ನಿರ್ಬಂಧ?

  • ಅನಿವಾರ್ಯವಲ್ಲದ ನಿರ್ಮಾಣ ಮತ್ತು ಉರುಳಿಸುವಿಕೆ : ಮಣ್ಣಿನ ಕೆಲಸ, ಪೈಲಿಂಗ್, ತೆರೆದ ಕಂದಕ ನಿರ್ಮಾಣ, ವೆಲ್ಡಿಂಗ್, ಪೇಂಟಿಂಗ್, ಪ್ಲಾಸ್ಟರಿಂಗ್, ಟೈಲ್/ನೆಲಹಾಸು ಕೆಲಸ, ಆರ್‌ಎಂಸಿ ಸ್ಥಾವರಗಳು.
  • ಡಾಂಬರು ಹಾಕದ ರಸ್ತೆಗಳಲ್ಲಿ ಸಿಮೆಂಟ್, ಮರಳು ಮತ್ತು ಹಾರುಬೂದಿಯಂತಹ ನಿರ್ಮಾಣ ಸಾಮಗ್ರಿಗಳ ಸಾಗಣೆ.
  • ಕಲ್ಲು ಪುಡಿ ಮಾಡುವ ಯಂತ್ರಗಳು, ಇಟ್ಟಿಗೆ ಗೂಡುಗಳು ಮತ್ತು ಗಣಿಗಾರಿಕೆ ಚಟುವಟಿಕೆಗಳು.
  • ಬಿಎಸ್-III ಪೆಟ್ರೋಲ್ ಮತ್ತು ಬಿಎಸ್-IV ಡೀಸೆಲ್ ನಾಲ್ಕು ಚಕ್ರಗಳ ವಾಹನಗಳು; ಅನಿವಾರ್ಯವಲ್ಲದ ಡೀಸೆಲ್-ಚಾಲಿತ ಮಧ್ಯಮ ಸರಕು ವಾಹನಗಳು; ಸಿಎನ್‌ಜಿ, ವಿದ್ಯುತ್ ಅಥವಾ ಬಿಎಸ್-VI ಮಾನದಂಡಗಳಲ್ಲಿ ಓಡದ ಅಂತರ-ರಾಜ್ಯ ಡೀಸೆಲ್ ಬಸ್‌ಗಳು.
  • ಅನುಮೋದಿಸದ ಇಂಧನಗಳನ್ನು ಬಳಸುವ ಕೈಗಾರಿಕೆಗಳು.

ಯಾವುದಕ್ಕೆಲ್ಲ ಅವಕಾಶ?

  • ಅಗತ್ಯ ಮೂಲಸೌಕರ್ಯ ಮತ್ತು ಸಾರ್ವಜನಿಕ ಸೇವಾ ಯೋಜನೆಗಳು: ಮೆಟ್ರೋ, ರೈಲ್ವೆ, ವಿಮಾನ ನಿಲ್ದಾಣ, ಹೆದ್ದಾರಿ, ರಕ್ಷಣಾ, ಆರೋಗ್ಯ ರಕ್ಷಣೆ, ನೈರ್ಮಲ್ಯ ಯೋಜನೆಗಳು.
  • ಕಟ್ಟುನಿಟ್ಟಾದ ಧೂಳು ನಿಯಂತ್ರಣ ಮತ್ತು ತ್ಯಾಜ್ಯ ನಿರ್ವಹಣೆಯೊಂದಿಗೆ ನಿರ್ಣಾಯಕ ಯೋಜನೆಗಳಿಗೆ ನಿರ್ಮಾಣ ಕಾರ್ಯ.
  • ವಿನಾಯಿತಿ ಪಡೆದ ವಾಹನಗಳನ್ನು ಬಳಸುವ ಅಂಗವಿಕಲ ವ್ಯಕ್ತಿಗಳು.
  • ಸಾರ್ವಜನಿಕ ಸಾರಿಗೆಗಳ ಬಳಕೆ ಮತ್ತು 5 ನೇ ತರಗತಿಯವರೆಗೆ ಹೈಬ್ರಿಡ್/ಆನ್‌ಲೈನ್ ಶಾಲಾ ತರಗತಿಗಳು

ಜಿಆರ್‌ಎಪಿ-IIIರ ಅಡಿಯಲ್ಲಿ, ಮಣ್ಣಿನ ಕೆಲಸ, ಪೈಲಿಂಗ್, ತೆರೆದ ಕಂದಕ ನಿರ್ಮಾಣ, ವೆಲ್ಡಿಂಗ್, ಪೇಂಟಿಂಗ್, ಪ್ಲಾಸ್ಟರಿಂಗ್, ಟೈಲ್ ಅಥವಾ ನೆಲಹಾಸು ಕೆಲಸ ಮತ್ತು ರೆಡಿ-ಮಿಕ್ಸ್ ಕಾಂಕ್ರೀಟ್ (ಆರ್‌ಎಂಸಿ) ಸ್ಥಾವರಗಳ ಕಾರ್ಯಾಚರಣೆ ಸೇರಿದಂತೆ ಎಲ್ಲಾ ಅನಿವಾರ್ಯವಲ್ಲದ ನಿರ್ಮಾಣ ಮತ್ತು ಕೆಡವುವ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಸಿಮೆಂಟ್, ಮರಳು ಮತ್ತು ಹಾರುಬೂದಿಯಂತಹ ವಸ್ತುಗಳ ಸಾಗಣೆಯನ್ನು ನಿರ್ಬಂಧಿಸಲಾಗಿದೆ. ಅನುಮೋದಿಸದ ಇಂಧನಗಳನ್ನು ಬಳಸುವ ಕೈಗಾರಿಕೆಗಳು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸಲಾಗಿದೆ. ಕಲ್ಲು ಪುಡಿ ಮಾಡುವ ಯಂತ್ರಗಳು ಮತ್ತು ಗಣಿಗಾರಿಕೆ ಚಟುವಟಿಕೆಗಳನ್ನು ಮುಂದಿನ ಸೂಚನೆ ಬರುವವರೆಗೆ ಮುಚ್ಚುವಂತೆ ಆದೇಶಿಸಲಾಗಿದೆ.

ದೆಹಲಿ ಮತ್ತು ನೆರೆಯ ಎನ್‌ಸಿಆರ್‌ ಜಿಲ್ಲೆಗಳಾದ ಗುರುಗ್ರಾಮ, ಫರಿದಾಬಾದ್, ಗಾಝಿಯಾಬಾದ್ ಮತ್ತು ಗೌತಮ್ ಬುದ್ಧ ನಗರಗಳಲ್ಲಿ ಬಿಎಸ್‌-III ಪೆಟ್ರೋಲ್ ಮತ್ತು ಬಿಎಸ್‌-IV ಡೀಸೆಲ್ ನಾಲ್ಕು ಚಕ್ರಗಳ ವಾಹನಗಳ ಬಳಕೆಯನ್ನು ನಿಷೇಧಿಸಲಾಗಿದೆ. ಅಂಗವಿಕಲ ವ್ಯಕ್ತಿಗಳಿಗೆ ವಿನಾಯಿತಿ ನೀಡಲಾಗಿದೆ.

ಅನಿವಾರ್ಯವಲ್ಲದ ಡೀಸೆಲ್ ಚಾಲಿತ ಮಧ್ಯಮ ಸರಕು ವಾಹನಗಳು ಮತ್ತು ಸಿಎನ್‌ಜಿ, ವಿದ್ಯುತ್ ಅಥವಾ ಬಿಎಸ್-VI ಮಾನದಂಡಗಳಲ್ಲಿ ಓಡದ ಅಂತರರಾಜ್ಯ ಡೀಸೆಲ್ ಬಸ್‌ಗಳು ಕೂಡ ರಾಜಧಾನಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಭಾರೀ ದಂಡವನ್ನು ತಪ್ಪಿಸಲು ನಾಗರಿಕರು ತ್ಯಾಜ್ಯವನ್ನು ಬಯಲಿನಲ್ಲಿ ಸುಡುವುದನ್ನು ತಪ್ಪಿಸಬೇಕು, ಸಾರ್ವಜನಿಕ ಸಾರಿಗೆಯನ್ನು ಬಳಸಬೇಕು ಮತ್ತು ವಾಹನಗಳು ಮಾನ್ಯ ಪಿಯುಸಿ ಪ್ರಮಾಣಪತ್ರಗಳನ್ನು ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.

0 ಯಿಂದ 50ರ ನಡುವಿನ ವಾಯುಗುಟ್ಟವನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತೀ ಕಳಪೆ’ ಮತ್ತು 401 ರಿಂದ 500 ‘ತೀವ್ರ ಕಳಪೆ’ ಅಥವಾ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, ದೆಹಲಿಯ 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬುಧವಾರ (ನ.12) ಬೆಳಿಗ್ಗೆ 9 ಗಂಟೆಗೆ 414 ಆಗಿದ್ದು, ಬಹು ಮೇಲ್ವಿಚಾರಣಾ ಕೇಂದ್ರಗಳಲ್ಲಿ 400 ಅಂಕಗಳನ್ನು ದಾಟಿದೆ.

ಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...