Homeಮುಖಪುಟಯುಎಪಿಎ ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ : 'ಸಂದೇಶ ನೀಡಲು ಇದು...

ಯುಎಪಿಎ ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ : ‘ಸಂದೇಶ ನೀಡಲು ಇದು ಅತ್ಯುತ್ತಮ ಬೆಳಿಗ್ಗೆ’ ಎಂದ ನ್ಯಾಯಾಲಯ

ದೆಹಲಿ ಸ್ಪೋಟದ ಮರುದಿನ ಹೇಳಿಕೆ ನೀಡಿದ ನ್ಯಾಯಪೀಠ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪಿಯಾಗಿರುವ ಮುಸ್ಲಿಂ ವ್ಯಕ್ತಿ ಸೈಯದ್ ಮಾಮೂರ್ ಅಲಿ ಅಥವಾ ಮಾಮೂರ್ ಭಾಯಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್, ‘ಸಂದೇಶ ಕಳುಹಿಸಲು ಇದು ಅತ್ಯುತ್ತಮ ಬೆಳಿಗ್ಗೆ” ಎಂದು ಮಂಗಳವಾರ (ನ.11) ಹೇಳಿದೆ.

ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿದ ಮರುದಿನ ಸುಪ್ರೀಂ ಕೋರ್ಟ್ ಮೇಲಿನ ಹೇಳಿಕೆ ನೀಡಿದೆ. ಆದರೆ, ದೆಹಲಿ ಸ್ಪೋಟಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವರದಿಗಳು ತಿಳಿಸಿವೆ.

ಮಂಗಳವಾರ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಪರ ವಕೀಲ ಸಿದ್ಧಾರ್ಥ ದವೆ, ದೆಹಲಿ ಸ್ಪೋಟವನ್ನು ಉಲ್ಲೇಖಿಸಿ, “ಇದು ವಾದ ಮಂಡಿಸಲು ಅತ್ಯುತ್ತಮ ಬೆಳಿಗ್ಗೆ ಅಲ್ಲ” ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, “ಸಂದೇಶ ಕಳುಹಿಸಲು ಇದು ಅತ್ಯುತ್ತಮ ಬೆಳಿಗ್ಗೆ” ಎಂದಿದೆ.

ಬಾರ್ ಮತ್ತು ಬೆಂಚ್ ವರದಿಯ ಪ್ರಕಾರ, ಆರೋಪಿಯಿಂದ ಪ್ರಚೋದನಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನ್ಯಾಯಾಲಯ ಹೇಳಿದಾಗ, ಅದು ಕೇವಲ ಇಸ್ಲಾಮಿಕ್ ಸಾಹಿತ್ಯ ಎಂದು ದೇವ್ ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಮೆಹ್ತಾ ಅವರು, ಆರೋಪಿಗಳು ವಾಟ್ಸಾಪ್ ಗುಂಪನ್ನು ರಚಿಸಿಕೊಂಡಿದ್ದು, ಅಲ್ಲಿ ಐಸಿಸ್ ಧ್ವಜಕ್ಕೆ ‘ಬಹುತೇಕ ಹೋಲುವ’ ಧ್ವಜ ಕಂಡುಬಂದಿದೆ ಎಂದಿದ್ದಾರೆ.

ಆಗ, ಮಾಮೂರ್ ಅಲಿ ಎರಡು ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ. ಯಾವುದೇ ಆರ್‌ಡಿಎಕ್ಸ್ ಅಥವಾ ಸ್ಫೋಟಕಗಳು ಅವರ ಬಳಿ ಪತ್ತೆಯಾಗಿಲ್ಲ. ಅಲ್ಲದೆ, ಅವರು ಶೇಕಡ 70ರಷ್ಟು ಅಂಗವಿಕಲರಾಗಿದ್ದಾರೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಈ ಎಲ್ಲಾ ವಾದಗಳ ಹೊರತಾಗಿಯೂ, ಆರೋಪಗಳ ಗಂಭೀರತೆಯನ್ನು ಉಲ್ಲೇಖಿಸಿ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ.

ಆದಾಗ್ಯೂ, ವಿಚಾರಣೆಯನ್ನು ಎರಡು ವರ್ಷಗಳ ಒಳಗೆ ಪೂರ್ಣಗೊಳಿಸಬೇಕು ಎಂದು ಪೀಠ ನಿರ್ದೇಶಿಸಿದೆ. ಆ ಅವಧಿಯೊಳಗೆ ವಿಚಾರಣೆ ಮುಗಿಯದಿದ್ದರೆ, ವಿಳಂಬಕ್ಕೆ ಆರೋಪಿ ಕಾರಣವಲ್ಲದಿದ್ದರೆ, ಅವರು ಜಾಮೀನಿಗಾಗಿ ಮತ್ತೆ ಅರ್ಜಿ ಸಲ್ಲಿಸಬಹುದು ಎಂದಿದೆ.

ನ್ಯಾಯಾಲಯದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದ ಸಾಕೇತ್ ಗೋಖಲೆ, “ನಿಮ್ಮ ವೈಯಕ್ತಿಕ ಸ್ವಾತಂತ್ರ್ಯವನ್ನು ಈಗ ಸಂಬಂಧವಿಲ್ಲದ ಬೆಳಗಿನ ಸುದ್ದಿಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತಿದೆ. ಸಂವಿಧಾನ ವಾರಾಂತ್ಯದ ಉಪನ್ಯಾಸಗಳಿಗೆ ಉಲ್ಲೇಖ ಪುಸ್ತಕವಾಗಿ ಮಾತ್ರ ಉಳಿದಿದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಭಾರತೀಯ ಸುಪ್ರೀಂ ಕೋರ್ಟ್ ದುರಂತ ಸ್ಫೋಟದ ಒಂದು ದಿನದ ನಂತರ ಮುಸ್ಲಿಂ ಆರೋಪಿಗೆ ಜಾಮೀನು ನಿರಾಕರಿಸಿ ‘ಸಂದೇಶ ಕಳುಹಿಸಲು’ ಬಯಸುತ್ತಿದೆಯಾ? ಯಾರಿಗೆ ಸಂದೇಶ? ಅದೇ ದಿನ ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ಕಾನೂನಿನ ಆಡಳಿತಕ್ಕೆ ನ್ಯಾಯಾಲಯದ ಬದ್ಧತೆಯ ಬಗ್ಗೆ ಮಾತನಾಡಿದ್ದರು. ಇದು ನನಗೆ ಕಾನೂನಿನ ಆಡಳಿತದಂತೆ ತೋರುವುದಿಲ್ಲ. ಪಕ್ಷಪಾತಿ ನ್ಯಾಯಾಂಗ ಮನಸ್ಸು,” ಎಂದು ವಕೀಲ ಅಶೀಷ್ ಗೋಯಲ್ ಹೇಳಿದ್ದಾರೆ.

ತಮಿಳುನಾಡು, ಪ.ಬಂಗಾಳದಲ್ಲಿ ಎಸ್‌ಐಆರ್ ಪ್ರಶ್ನಿಸಿ ಅರ್ಜಿ : ಚು. ಆಯೋಗಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...