Homeಕರ್ನಾಟಕನಾನು ಮೊದಲಿನಿಂದಲೂ ಸನಾತನವಾದಿ ಆರ್‌ಎಸ್‌ಎಸ್‌ಗೆ ವಿರುದ್ಧ : ಸಿಎಂ ಸಿದ್ದರಾಮಯ್ಯ

ನಾನು ಮೊದಲಿನಿಂದಲೂ ಸನಾತನವಾದಿ ಆರ್‌ಎಸ್‌ಎಸ್‌ಗೆ ವಿರುದ್ಧ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು.
ನಾನು ಮೊದಲಿಂದಲೂ ಸನಾತನವಾದಿ ಆರ್‌ಎಸ್‌ಎಸ್‌, ಜಾತಿ ವ್ಯವಸ್ಥೆ ಮತ್ತು ಮೌಢ್ಯಕ್ಕೆ ವಿರುದ್ಧ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಗಾಂಧಿ ನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ ಆರ್‌ಎಸ್‌ಎಸ್‌ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೆ ನಾನು ಆರ್‌ಎಸ್‌ಎಸ್‌ ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.

ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದು ಸಿಎಂ ಹೇಳಿದರು.

ಹಳೆ ಕಟ್ಟಡದಲ್ಲಿದ್ದ ಹಾಸ್ಟೆಲ್‌ನಲ್ಲಿ ಓದಿದವರು ಒಳ್ಳೊಳ್ಳೆ ಅಧಿಕಾರಿಗಳಾಗಿದ್ದಾರೆ. ಜಡ್ಜ್‌ಗಳೂ ಆಗಿದ್ದಾರೆ. ನಾನು 1983ರಲ್ಲಿ ಶಾಸಕನಾಗಿ 1984ರಲ್ಲಿ ಮಂತ್ರಿ ಆದೆ. ನಾನು ಸಾರಿಗೆ ಮಂತ್ರಿ ಆಗಿದ್ದಾಗ 1988ರಲ್ಲೇ ಕನಕದಾಸರ 500ನೇ ಜಯಂತ್ಸೋವವನ್ನು ಆಚರಣೆ ಮಾಡಿಸಿದೆ. ಇದೇ ಸಂದರ್ಭದಲ್ಲಿ ಸಮಾಜಕ್ಕೊಂದು ಗುರುಪೀಠ ಬೇಕು ಎಂದು ತೀರ್ಮಾನಿಸಿದೆ. ಆಗ ಸಂಘದ ಕಟ್ಟಡದ ಮೇಲೆ 3 ಕೋಟಿ ರೂಪಾಯಿ ಸಾಲ ಇತ್ತು. ಆ ಸಾಲದ ಸುಳಿಯಿಂದ ಸಂಘವನ್ನು ಬಿಡಿಸಿದ್ದು ನಾವು, ಇದು ಇತಿಹಾಸ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದೆ ಎಂದು ಸಿಎಂ ನೆನಪಿಸಿಕೊಂಡರು.

ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ. ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.

ಸರ್ಕಾರದಿಂದ 600 ಕುರುಬ ಸಮುದಾಯ ಭವನಗಳನ್ನು ಮಾಡಲು ಮುಂದಾಗಿದ್ದು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ದಾವಣಗೆರೆ ಸೇರಿ ರಾಜ್ಯದ ಹತ್ತು ಹಲವು ಕಡೆಗಳಲ್ಲಿ ಸಂಘಕ್ಕೆ ಜಾಗ-ಕಟ್ಟಡ ಉಳಿಸಿಕೊಟ್ಟಿದ್ದೇನೆ. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮಾಡಿದ್ದು ನಾನೇ, ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ನಾನೇ. ಈಗ ನನಗೂ ಮುಕುಡಪ್ಪನಿಗೂ ಆಗುವುದಿಲ್ಲ. ಆದರೆ, ಕುರುಬ ಸಮಾಜಕ್ಕೆ ಆಸ್ತಿ ಉಳಿಸಿ, ಬೆಳೆಸುವ ಕಾರ್ಯದಲ್ಲಿ ಮುಕುಡಪ್ಪ ಸೇರಿ ಶಿವಣ್ಣ, ಮಾಸ್ತಿ, ಸಿದ್ದಲಿಂಗಯ್ಯ, ನಾಗಣ್ಣ ರೀತಿಯ ಹಲವರು ಜೊತೆಗೆ ನಿಂತು ಸಹಕಾರ ಮಾಡಿದರು. ಈ ಇತಿಹಾಸ ಗೊತ್ತಿದ್ದವರು ಬಹಿರಂಗವಾಗಿ ಮಾತಾಡಬೇಕಿತ್ತು. ಅವರು ಯಾರೂ ಮಾತಾಡದ ಕಾರಣಕ್ಕೆ, ನಾನು ಮಾತಾಡಬಾರದು ಅಂದುಕೊಂಡಿದ್ದವನು ಎಲ್ಲವನ್ನೂ ಮಾತಾಡಬೇಕಾಗಿ ಬಂತು ಎಂದರು.

ಧರ್ಮಸ್ಥಳ ಪ್ರಕರಣ : ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...