Homeಮುಖಪುಟಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

31 ಸದಸ್ಯರ ಸಮಿತಿಯಲ್ಲಿ ವಿಪಕ್ಷಗಳ ಕೇವಲ ಮೂವರಿಗೆ ಅವಕಾಶ

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ (ನ.12) ಸಂಸದೀಯ ಸಮಿತಿ (ಜೆಪಿಸಿ) ರಚಿಸಿದ್ದಾರೆ.

ಪ್ರಸ್ತಾವಿತ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಹೆಚ್ಚಿನ ವಿರೋಧ ಪಕ್ಷ ಸದಸ್ಯರು ಜೆಪಿಸಿ ಸೇರಲು ನಿರಾಕರಿಸಿದ್ದಾರೆ. ಹಾಗಾಗಿ, 31 ಸಂಸದರ ಸಮಿತಿಯಲ್ಲಿ ಕೇವಲ ಮೂವರು ವಿರೋಧ ಪಕ್ಷದ ಸದಸ್ಯರಿದ್ದಾರೆ ಎಂದು ವರದಿಗಳು ಹೇಳಿವೆ.

ಎರಡನೇ ಅವಧಿಗೆ ಆಯ್ಕೆಯಾಗಿರುವ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು ಜೆಪಿಸಿಯ ನೇತೃತ್ವ ವಹಿಸಲಿದ್ದಾರೆ. ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಸಮಿತಿಯಲ್ಲಿದ್ದಾರೆ.

ಇದರಲ್ಲಿ ರವಿಶಂಕರ್ ಪ್ರಸಾದ್, ಭರ್ತೃಹರಿ ಮಹತಾಬ್ ಮತ್ತು ಅನುರಾಗ್ ಠಾಕೂರ್ ಸೇರಿದಂತೆ 15 ಬಿಜೆಪಿ ಸಂಸದರು, ಬಿಜೆಪಿ ಮಿತ್ರಪಕ್ಷಗಳಾದ ಟಿಡಿಪಿ, ಜೆಡಿಯು, ಎಲ್‌ಜೆಪಿ(ಆರ್‌ವಿ), ಶಿವಸೇನೆ, ಎನ್‌ಸಿಪಿ ಮತ್ತು ಎಐಎಡಿಎಂಕೆಯ 11 ಮಂದಿ ಹಾಗೂ ವಿರೋಧ ಪಕ್ಷಗಳಾದ ಎನ್‌ಸಿಪಿ-ಎಸ್‌ಪಿಯ ಸುಪ್ರಿಯಾ ಸುಳೆ, ಎಐಎಂಐಎಂನ ಅಸಾದುದ್ದೀನ್ ಓವೈಸಿ ಮತ್ತು ಶಿರೋಮಣಿ ಅಕಾಲಿ ದಳದ ಹರ್ಸಿಮ್ರತ್ ಕೌರ್ ಬಾದಲ್ ಒಳಗೊಂಡಿದ್ದಾರೆ.

ಆಡಳಿತಾರೂಢ ಎನ್‌ಡಿಎ ಅಥವಾ ವಿರೋಧ ಪಕ್ಷಗಳ ಇಂಡಿಯಾ ಬಣಕ್ಕೆ ಸೇರದ, ಆದರೆ ಸಂಸತ್ತಿನಲ್ಲಿ ಸರ್ಕಾರವನ್ನು ಬೆಂಬಲಿಸಿದ ವೈಎಸ್ಆರ್ ಕಾಂಗ್ರೆಸ್‌ನ ಎಸ್. ನಿರಂಜನ್ ರೆಡ್ಡಿ ಹಾಗೂ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಕೂಡ ಜೆಪಿಸಿಯಲ್ಲಿದ್ದಾರೆ.

ಅನೌಪಚಾರಿಕ ಚರ್ಚೆಯ ನಂತರ ಎನ್‌ಸಿಪಿ-ಎಸ್‌ಪಿ ಹೊರತುಪಡಿಸಿ ವಿರೋಧ ಪಕ್ಷಗಳ ಇಂಡಿಯಾ ಬಣವು ಸಮಿತಿಯ ಭಾಗವಾಗಿರದಿರಲು ನಿರ್ಧರಿಸಿದ್ದರಿಂದ ಅಸಾಮಾನ್ಯವಾಗಿ ದೀರ್ಘ ವಿಳಂಬದ ನಂತರ ಸಮಿತಿಯನ್ನು ರಚಿಸಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೆಪಿಸಿ ಸೇರುವಂತೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.

ಕಾಂಗ್ರೆಸ್‌ ಅಳೆದು ತೂಗಿ ಕೊನೆಗೆ ಜೆಪಿಸಿ ಸೇರಲು ನಿರಾಕರಿಸಿದೆ. ಈ ಮೂಲಕ ಮಸೂದೆಯನ್ನು ವಿರೋಧಿಸಿ ತನ್ನ ಮಿತ್ರಪಕ್ಷಗಳ ಜೊತೆ ಒಗ್ಗಟ್ಟು ಪ್ರದರ್ಶಿಸಿದೆ. ಕಾಂಗ್ರೆಸ್ ಜೊತೆ ಟಿಎಂಸಿ, ಡಿಎಂಕೆಯಂತಹ ಹಲವಾರು ಪ್ರಾದೇಶಿಕ ಪಕ್ಷಗಳು ಪ್ರಸ್ತಾವಿತ ಕಾನೂನುಗಳು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಿದೆ ಎಂದಿದೆ. ವಿರೋಧ ಪಕ್ಷಗಳ ನೇತೃತ್ವದ ರಾಜ್ಯ ಸರ್ಕಾರಗಳನ್ನು ‘ಅಸ್ಥಿರಗೊಳಿಸುವ’ ಗುರಿಯನ್ನು ಈ ಮಸೂದೆಗಳು ಹೊಂದಿವೆ ಎಂದು ಆರೋಪಿಸಿವೆ.

“ಇದು ಜಂಟಿ ಸಂಸದೀಯ ಸಮಿತಿ ಅಲ್ಲ, ಬಿಜೆಪಿ ಮತ್ತು ಅದರ ಬಿ-ಟೀಮ್‌ನ ಜೆಪಿಸಿ” ಎಂದು ಹಿರಿಯ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಸಮಿತಿಯನ್ನು ಟೀಕಿಸಿದ್ದಾರೆ. ಇಂಡಿಯಾ ಒಕ್ಕೂಟದ 340ಕ್ಕೂ ಹೆಚ್ಚು ಸಂಸದರು ಜೆಪಿಸಿಯನ್ನು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

“ಈ ಜೆಪಿಸಿ ಮೋದಿಯ ಅಸಂವಿಧಾನಿಕ ಕಾರ್ಯಸೂಚಿಗೆ ರಬ್ಬರ್ ಸ್ಟಾಂಪ್ ಹೊರತುಪಡಿಸಿ ಬೇರೇನೂ ಅಲ್ಲ. ಸರ್ಕಾರವು ಒಮ್ಮತ ಅಥವಾ ಸಂಸದೀಯ ನೀತಿಶಾಸ್ತ್ರವಿಲ್ಲದೆ ಜೆಪಿಸಿಯನ್ನು ರಚಿಸಿದ್ದರಿಂದ 340 ಸಂಸದರು ಅದನ್ನು ಬಹಿಷ್ಕರಿಸಿದ್ದಾರೆ” ಎಂದು ಟ್ಯಾಗೋರ್ ತಿಳಿಸಿದ್ದಾರೆ.

2025ರ ಆಗಸ್ಟ್ 20ರಂದು ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2025 ಗಳನ್ನು ಮಂಡಿಸಿದ್ದರು. ನಂತರ ಅವುಗಳನ್ನು ಸಂಸದೀಯ ಸಮಿತಿಗೆ ಕಳುಹಿಸಲು ನಿರ್ಧರಿಸಲಾಗಿತ್ತು.

ಮರುದಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಸೂದೆಯನ್ನು ಪರಿಚಯಿಸಿದಾಗ ವಿರೋಧ ಪಕ್ಷಗಳ ಸಂಸದರು ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿದ್ದರು ಮತ್ತು ಪ್ರಸ್ತಾವಿತ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದರು.

ಕನಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವ ಅಪರಾಧಗಳ ಆರೋಪದ ಮೇಲೆ ಪ್ರಧಾನಿ, ಕೇಂದ್ರ ಸಚಿವರು ಅಥವಾ ಮುಖ್ಯಮಂತ್ರಿಗಳನ್ನು ಬಂಧಿಸಿ ಸತತ 30 ದಿನಗಳ ಕಾಲ ಜೈಲಿನಲ್ಲಿಟ್ಟಿರೆ ಅಥವಾ ಬಂಧನದಲ್ಲಿಟ್ಟರೆ, 31ನೇ ದಿನದಂದು ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎಂದು ಪ್ರಸ್ತಾವಿತ ಕಾನೂನು ಹೇಳುತ್ತದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...