Homeಮುಖಪುಟಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

- Advertisement -
- Advertisement -

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ. 

ನವೆಂಬರ್ 13, ಗುರವಾರದಂದು ಈ ಕಾರ್ಯಾಚರಣೆ ನಡೆದಿದ್ದು, ಪಂಜಾಬ್ ಪೊಲೀಸ್ ಡಿಜಿಪಿ ಅವರ ಎಕ್ಸ್ ಪೋಸ್ಟ್ ಪ್ರಕಾರ, ಪಂಜಾಬ್‌ನ ಜನನಿಬಿಡ ಪ್ರದೇಶದಲ್ಲಿ ಗ್ರೆನೇಡ್ ದಾಳಿ ನಡೆಸುವ ಕಾರ್ಯವನ್ನು ವಹಿಸಲಾಗಿತ್ತು. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ 10 ವ್ಯಕ್ತಿಗಳು ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದರು ಮತ್ತು ಮಲೇಷ್ಯಾದಲ್ಲಿರುವ ಮೂವರು ಕಾರ್ಯಕರ್ತರ ಮೂಲಕ ಸಂವಹನ ನಡೆಸಿದ್ದರು, ಅವರು ಗ್ರೆನೇಡ್ ಎತ್ತಿಕೊಳ್ಳುವ ಮತ್ತು ವಿತರಣೆಯನ್ನು ಸಂಘಟಿಸಿದ್ದರು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. 

‘ಬಂಧಿತ ಆರೋಪಿಗಳು ಮಲೇಷ್ಯಾ ಮತ್ತು ಪಾಕ್ ಮೂಲದ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದರು. ಜತೆಗೆ, ದಾಳಿಗಳನ್ನು ನಡೆಸಲು ಹ್ಯಾಂಡ್‌ ಗ್ರೆನೇಡ್‌ಗಳನ್ನು ಸಂಗ್ರಹ ಮತ್ತು ವಿತರಣೆ ಮಾಡುವುದರಲ್ಲಿ ನಿರತರಾಗಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.   

‘ಪಂಜಾಬ್‌ನಲ್ಲಿ ಶಾಂತಿ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಮತ್ತು ಗಡಿಯಾಚೆಗಿನ ಭಯೋತ್ಪಾದನಾ ಜಾಲಗಳನ್ನು ಪತ್ತೆಹಚ್ಚಿ ನಾಶಪಡಿಸಲು ನಾವು ಬದ್ಧರಾಗಿದ್ದೇವೆ’ ಎಂದು ಡಿಜಿಪಿ ಗೌರವ್‌ ಯಾದವ್‌ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.  

ನವೆಂಬರ್ 10ರಂದು (ಸೋಮವಾರ) ದೆಹಲಿಯ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಸಮೀಪದ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾರು ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 13 ಮಂದಿ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.  ಈ ಘಟನೆಯನ್ನು ‘ಭಯೋತ್ಪಾದಕ ಕೃತ್ಯ’ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುವುದು ಎಂದೂ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...