Homeಮುಖಪುಟ"ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ": ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿಯ ವಾಯುಮಾಲಿನ್ಯ ‘ಗಂಭೀರ ಮಟ್ಟ’ ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ.

ವಿವಿಧ ಪ್ರಕರಣಗಳಲ್ಲಿ ವಾದ ಮಂಡಿಸಲು ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರಿಗೆ ವರ್ಚುವಲ್ ವ್ಯವಸ್ಥೆಯನ್ನು ಬಳಸಿಕೊಳ್ಳುವಂತೆ ನ್ಯಾಯಮೂರ್ತಿ ಪಿ.ಎಸ್ ನರಸಿಂಹ ನೇತೃತ್ವದ ಪೀಠ ಸಲಹೆ ನೀಡಿದೆ. ವಾಯುಮಾಲಿನ್ಯ ಆರೋಗ್ಯದ ಮೇಲೆ ಶಾಶ್ವತ ಪರಿಣಾಮ ಬೀರಬಹುದು ಎಂದಿದೆ.

ನ್ಯಾಯಾಧೀಶರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, “ನಾವು ಕೋರ್ಟ್ ಹಾಲ್ ಒಳಗೂ ಮಾಸ್ಕ್‌ ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನರಸಿಂಹ ಅವರು, “ಮಾಸ್ಕ್‌ ಕೂಡ ಸಾಕಾಗುವುದಿಲ್ಲ. ನಾವು ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಚರ್ಚಿಸುತ್ತೇವೆ” ಎಂದಿದ್ದಾರೆ.

ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಮತ್ತೊಮ್ಮೆ ಹದಗೆಟ್ಟಿದ್ದು, ವಿಷಕಾರಿ ಮತ್ತು ಗಂಭೀರ ಮಟ್ಟಕ್ಕೆ ತಲುಪಿದೆ. ರಾಷ್ಟ್ರ ರಾಜಧಾನಿ ದಟ್ಟವಾದ ಬೂದು ಹೊಗೆಯಿಂದ ಆವೃತವಾಗಿದೆ.

ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಕರ್ತವ್ಯದಲ್ಲಿ ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು. ವಿಷಕಾರಿ ಹೊಗೆಗೆ ಬೆಳೆ ತ್ಯಾಜ್ಯ ಸುಡುವುದನ್ನು ಪ್ರಮುಖ ಕಾರಣವೆಂದು ಹೇಳಿತ್ತು. ಈ ವಿಷಯದಲ್ಲಿ ಪಂಜಾಬ್ ಮತ್ತು ಹರಿಯಾಣ ರಾಜ್ಯ ಸರ್ಕಾರಗಳು ಹೆಚ್ಚಿನ ಜವಾಬ್ದಾರಿ ವಹಿಸುವಂತೆ ನಿರ್ದೇಶಿಸಿತ್ತು.

ನವೆಂಬರ್ 17 ರಂದು ಸುಪ್ರೀಂ ಕೋರ್ಟ್ ವಾಯುಮಾಲಿನ್ಯ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...