Homeಮುಖಪುಟ‘ಬಿಹಾರದ ಜನರಿಗಿಂತ ಜ್ಞಾನೇಶ್ ಕುಮಾರ್ ಮುನ್ನಡೆ ಸಾಧಿಸಿದ್ದಾರೆ’: ಪವನ್ ಖೇರಾ ವ್ಯಂಗ್ಯ

‘ಬಿಹಾರದ ಜನರಿಗಿಂತ ಜ್ಞಾನೇಶ್ ಕುಮಾರ್ ಮುನ್ನಡೆ ಸಾಧಿಸಿದ್ದಾರೆ’: ಪವನ್ ಖೇರಾ ವ್ಯಂಗ್ಯ

- Advertisement -
- Advertisement -

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ‘ಪ್ರಾಥಮಿಕ ಟ್ರೆಂಡ್ ಪ್ರಕಾರ ಬಿಹಾರದ ಜನರಿಗಿಂತ ಜ್ಞಾನೇಶ್ ಕುಮಾರ್ ಮುನ್ನಡೆ ಸಾಧಿಸಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ. 

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿರುವ ವಿಡಿಯೊ ‘ಎಎನ್‌ಐ’ ಸುದ್ದಿ ಸಂಸ್ಥೆ ‘ಎಕ್ಸ್’ನಲ್ಲಿ ಹಂಚಿಕೊಂಡಿದೆ.

‘ಇದು ಕಾಂಗ್ರೆಸ್, ಬಿಜೆಪಿ, ಆರ್‌ಜೆಡಿ ಹಾಗೂ ಜೆಡಿಯು ನಡುವಿನ ಹೋರಾಟವಲ್ಲ. ಇದು ಭಾರತದ ನಾಗರಿಕರು ಹಾಗೂ ಜ್ಞಾನೇಶ್ ಕುಮಾರ್ ನಡುವೆ ನಡೆಯುತ್ತಿರುವ ನೇರ ಹೋರಾಟ. ಯಾರು ಗೆಲ್ಲುತ್ತಾರೋ ನೋಡೋಣ’ ಎಂದು ಹೇಳಿದ್ದಾರೆ.

‘ಬಿಹಾರದ ಜನರನ್ನು ಕಡಿಮೆ ಅಂದಾಜು ಮಾಡಲಾಗುವುದಿಲ್ಲ. ಅವರು ಧೈರ್ಯ ತೋರಿಸಿದ್ದಾರೆ. ಎಸ್‌ಐಆರ್ ಹೊರತಾಗಿಯೂ ಅವರು ದಿಟ್ಟತನ ಪ್ರದರ್ಶಿಸಿದ್ದಾರೆ. ಜ್ಞಾನೇಶ್ ಕುಮಾರ್ ಎಷ್ಟು ಪರಿಣಾಮಕಾರಿಯಾಗಿದ್ದಾರೆ ಎನ್ನುವುದನ್ನು ಮುಂದೆ ತಿಳಿಯಲಿದೆ’ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿ ಸಂಘದ ಚುನಾವಣೆ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜಾಮಿಯಾ ಮಿಲ್ಲಿಯಾ ವಿವಿ : ಹೋರಾಟ ಕೈಬಿಡಲು ವಿದ್ಯಾರ್ಥಿಗಳ ನಕಾರ

ಕ್ಯಾಂಪಸ್‌ನಲ್ಲಿ ಚುನಾಯಿತ ಪ್ರತಿನಿಧಿಗಳ ಮಂಡಳಿಯನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಸುದೀರ್ಘ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು (ಜೆಎಂಐ) ಸುಮಾರು 20 ವರ್ಷಗಳ ನಂತರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಪುನರಾರಂಭಿಸುವುದಾಗಿ...

ಸಾಹಿಲ್ ವಕೋಡ್ ಸಾವಿನ ಪ್ರಕರಣ: ಐಐಟಿ ಬಾಂಬೆ ನಿರ್ದೇಶಕರ ರಾಜೀನಾಮೆಗೆ 84 ಸಂಘಟನೆಗಳ ಆಗ್ರಹ

ಜಾತಿ ತಾರತಮ್ಯದ ಆರೋಪ ಎದುರಿಸುತ್ತಿರುವ ಡೀನ್‌ಗೆ ಸಂಸ್ಥೆಯ ಬೆಂಬಲ, ವಿದ್ಯಾರ್ಥಿಯ ವಿರುದ್ಧ ಮಾಧ್ಯಮಗಳಿಗೆ ಹೇಳಿಕೆ, ಸಿಸಿಟಿವಿ ದೃಶ್ಯಾವಳಿ ಸೋರಿಕೆ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ಆರೋಪ ಮುಂಬೈ: ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿ ಸಾಹಿಲ್...

ಕರ್ನಾಟಕದಲ್ಲಿ ಐದು ವರ್ಷಗಳಲ್ಲಿ 629 ವರದಕ್ಷಿಣೆ ಕಿರುಕುಳದ ಸಾವು; ಶಿಕ್ಷೆಯಾಗಿದ್ದು ಕೇವಲ ಏಳು ಪ್ರಕರಣಗಳಲ್ಲಿ: ವರದಿ 

ವರದಕ್ಷಿಣೆ ಕಿರುಕುಳ ಮತ್ತು ಸಾವುಗಳ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಶಿಕ್ಷೆಯ ಪ್ರಮಾಣ; ತನಿಖೆ, ಸಾಕ್ಷ್ಯ ಸಂಗ್ರಹ ಮತ್ತು ನ್ಯಾಯಾಂಗ ವಿಳಂಬದ ವಿರುದ್ಧ ತಜ್ಞರ ಕಳವಳ ಕರ್ನಾಟಕದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಸಾವುಗಳಂತಹ ಗಂಭೀರ ಅಪರಾಧಗಳ...

ಅರುಣಾಚಲ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆ ವಿರುದ್ಧ ಭುಗಿಲೆದ್ದ ಜನಾಕ್ರೋಶ; ಕೇಂದ್ರದಿಂದ ಆರ್‌ಎಎಫ್‌ನ ಎರಡು ತುಕಡಿ ರವಾನೆ

ಪ್ರಸ್ತಾವಿತ 11,200 ಮೆಗಾವ್ಯಾಟ್ ಸಾಮರ್ಥ್ಯದ ಸಿಯಾಂಗ್ ಅಪ್ಪರ್ ಮಲ್ಟಿಪರ್ಪಸ್ ಪ್ರಾಜೆಕ್ಟ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪಾಸಿಘಾಟ್‌ನಲ್ಲಿ ಹಿಂಸಾಚಾರ ಸಂಭವಿಸಿದ ಹಿನ್ನೆಲೆ, ಕೇಂದ್ರ ಸರ್ಕಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ರಾಪಿಡ್ ಆಕ್ಷನ್...

ನ್ಯಾಯಾಧೀಶರ ನೇಮಕಾತಿಗೆ ಕೊಲಿಜಿಯಂ ಚರ್ಚಿಸುವ ಮುನ್ನವೇ ಸಿಜೆಐ ಚಂದ್ರಚೂಡ್ ಸರ್ಕಾರದ ಪೂರ್ವಾನುಮತಿ ಪಡೆಯುತ್ತಿದ್ದರು: ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ (ಸಿಜೆಯ) ಡಿ.ವೈ. ಚಂದ್ರಚೂಡ್ ಅವರು ನ್ಯಾಯಾಧೀಶರ ನೇಮಕಾತಿಗಾಗಿ ಪ್ರಸ್ತಾಪಿಸಲಾದ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಅಧಿಕೃತವಾಗಿ ಚರ್ಚಿಸುವ ಮುನ್ನವೇ ಸರ್ಕಾರದೊಂದಿಗೆ ಚರ್ಚಿಸುವ ಅಭ್ಯಾಸವನ್ನು ಹೊಂದಿದ್ದರು ಎಂದು...

ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಕರ್ನಾಟಕ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರಿನ ಐಟಿ ವಲಯ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ಉದ್ಯೋಗಾವಕಾಶ ನಿರಾಕರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ...

“ಕೇವಲ ದುಷ್ಟರಿಗಷ್ಟೇ ಧರ್ಮ ಬೇಕು”: ಪ್ರಧಾನಿ ಮೋದಿ-ಚಿನ್ಮಯಾನಂದ ಎಐ ಸಂವಾದದ ನಡುವೆ ಸ್ವಾಮಿ ಚಿನ್ಮಯಾನಂದರ ಹಳೆಯ ಕ್ರಾಂತಿಕಾರಿ ಹೇಳಿಕೆ ಈಗ ಮುನ್ನೆಲೆಗೆ!

ದೆಹಲಿಯ ಭಾರತ್ ಮಂಟಪಂನಲ್ಲಿ ಆಯೋಜಿಸಿದ್ದ ‘ಚಿನ್ಮಯ ಅಮೃತ ಮಹೋತ್ಸವ’ ಜಾಗತಿಕ ಸಮ್ಮೇಳನದ ವೇದಿಕೆ ಇತ್ತೀಚೆಗೆ ವಿಶಿಷ್ಟ ತಾಂತ್ರಿಕ ಪ್ರದರ್ಶನವೊಂದಕ್ಕೆ ಸಾಕ್ಷಿಯಾಯಿತು. 1993ರಲ್ಲೇ ಇಹಲೋಕ ತ್ಯಜಿಸಿದ್ದ ಚಿನ್ಮಯ ಮಿಷನ್ ಸಂಸ್ಥಾಪಕ ಸ್ವಾಮಿ ಚಿನ್ಮಯಾನಂದ ಅವರ...

ಜೀವನ ವೆಚ್ಚ, ಶಾಲಾ ನಿಧಿ ಕಡಿತದ ವಿರುದ್ಧ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು, ಜಲಫಿರಂಗಿ ಪ್ರಯೋಗ

ಫ್ರಾನ್ಸ್‌ನಲ್ಲಿ ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ರಾಜಧಾನಿ ಪ್ಯಾರಿಸ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು...

‘ಒಂದೇ ಹೆಸರಿನಲ್ಲಿ 13 ವೋಟ್’ : ಉತ್ತರ ಪ್ರದೇಶ ಆಝಂಗಢದಲ್ಲಿ ಮತದಾರರ ಪಟ್ಟಿ ಅಕ್ರಮ; 9 ಅಧಿಕಾರಿಗಳ ವಿರುದ್ಧ ಕ್ರಮ

ಆಝಂಗಢ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ 13 ಪ್ರತ್ಯೇಕ ಸ್ಥಳಗಳಲ್ಲಿ ವಿಕಾಸ್ ಯಾದವ್ ಎಂಬ ಹೆಸರು ತಪ್ಪಾಗಿ ದಾಖಲಾಗಿರುವುದು ಆಂತರಿಕ ತನಿಖೆಯಿಂದ ತಿಳಿದುಬಂದ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)...

ಎಸ್‌ಆರ್‌ಎಫ್‌ಟಿಐ ವಿದ್ಯಾರ್ಥಿಗಳ ಹೋರಾಟಕ್ಕೆ ನಾಸಿರುದ್ದೀನ್ ಶಾ, ಪಾಯಲ್ ಕಪಾಡಿಯಾ ಬೆಂಬಲ; ಬಿಜೆಪಿ ವಿರುದ್ಧ ನಟನ ವಾಗ್ದಾಳಿ

ಕೋಲ್ಕತ್ತಾ: ಕೋಲ್ಕತ್ತಾದ ಸತ್ಯಜಿತ್ ರೇ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಸ್‌ಆರ್‌ಎಫ್‌ಟಿಐ)ಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಹಿರಿಯ ನಟ ನಾಸಿರುದ್ದೀನ್ ಶಾ ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕಿ ಪಾಯಲ್ ಕಪಾಡಿಯಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ...