Homeಮುಖಪುಟಉತ್ತರ ಪ್ರದೇಶ : 'ಭಯೋತ್ಪಾದನೆಗೆ ಧರ್ಮವಿಲ್ಲ' ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

ಉತ್ತರ ಪ್ರದೇಶ : ‘ಭಯೋತ್ಪಾದನೆಗೆ ಧರ್ಮವಿಲ್ಲ’ ಎಂದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ

- Advertisement -
- Advertisement -

‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ’ ಎಂದು ಹೇಳಿದ ಉತ್ತರ ಪ್ರದೇಶದ ದಿಯೋಬಂದ್‌ನ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ಹೊರಗಿಡಲಾಗಿದೆ. ಅವರ ಹೇಳಿಕೆ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ದಿಯೋಬಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನರೇಂದ್ರ ಕುಮಾರ್ ಶರ್ಮಾ ಮೇಲಾಧಿಕಾರಿಗಳ ಕ್ರಮಕ್ಕೆ ಗುರಿಯಾದ ಅಧಿಕಾರಿ. ಸದ್ಯಕ್ಕೆ ಅವರನ್ನು ಕೆಲಸದಿಂದ ದೂರ ಇಡಲಾಗಿದ್ದು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದು ತಾತ್ಕಾಲಿಕ ಕ್ರಮವಾಗಿದೆ.

ಹಿರಿಯ ಅಧಿಕಾರಿಗಳು ಶರ್ಮಾ ಅವರ ಹೇಳಿಕೆ ಕುರಿತು ಕಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ವರದಿ ಆಧರಿಸಿ ಶರ್ಮಾ ಅವರ ವಿರುದ್ದ ವರ್ಗಾವಣೆ ಅಥವಾ ಇತರ ಕ್ರಮಗಳನ್ನು ಕೈಗೊಳ್ಳಬಹುದು ಎಂದು ವರದಿಯಾಗಿದೆ.

ಅಧಿಕಾರಿ ಮಾಡಿದ ತಪ್ಪೇನು?

ನವೆಂಬರ್ 12ರಂದು ದೆಹಲಿಯ ಕೆಂಪುಕೋಟೆ ಬಳಿ ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿರುವುದು ಎಲ್ಲರಿಗೆ ಗೊತ್ತಿರುವ ವಿಚಾರ. ಈ ಸ್ಪೋಟದ ಬಳಿಕ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಶರ್ಮಾ ಮಂಗಳವಾರ ದಿಯೋಬಂದ್ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯ ಸಮುದಾಯಗಳ ನಾಯಕರ ಸಭೆ ಕರೆದಿದ್ದರು.

ಸಭೆಯಲ್ಲಿ ಮಾತನಾಡಿದ ಶರ್ಮಾ, “ಜನರು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ತಪ್ಪುದಾರಿಗೆಳೆಯುವ ಸಂದೇಶಗಳನ್ನು ನಂಬಬಾರದು. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಭಾವಿಸುವುದು ತಪ್ಪು. ಎಲ್ಲಾ ಧರ್ಮಗಳಲ್ಲಿಯೂ ಅಂತಹವರು ಕಂಡು ಬರುತ್ತಾರೆ” ಎಂದು ಹೇಳಿದ್ದರು.

ಮುಂದುವರಿದು, “ಈ ಕುರ್ಚಿ ನನ್ನ ತಾಯಿಯಂತೆ, ತಪ್ಪು ಮಾಡುವವರಿಗೆ ಯಾವುದೇ ಧರ್ಮವಿಲ್ಲ. ನಕ್ಸಲರು ಹಿಂದೂ ಸಮುದಾಯದಲ್ಲೂ ಇದ್ದಾರೆ. ನೌಕಾಪಡೆಯಲ್ಲಿ ಅನೇಕ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಸೈನ್ಯದಲ್ಲೂ ಹಲವರನ್ನು ಬಂಧಿಸಲಾಗಿದೆ. ಹಲವು ಹಿಂದೂ ಭಯೋತ್ಪಾದಕರನ್ನು ಪಂಜಾಬ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದು ಹೇಳುವುದು ತಪ್ಪು. ಯಾವುದೇ ಧರ್ಮಗ್ರಂಥವು ಇತರರಿಗೆ ಹಾನಿ ಮಾಡುವುದನ್ನು ಪ್ರೋತ್ಸಾಹಿಸುವುದಿಲ್ಲ. 34 ವರ್ಷಗಳ ಕಾಲ ತಾರತಮ್ಯವಿಲ್ಲದೆ ಕೆಲಸ ಮಾಡಿದ್ದೇನೆ” ಎಂದಿದ್ದರು.

“ನನ್ನ 34 ವರ್ಷಗಳ ಸೇವೆಯಲ್ಲಿ, ಒಬ್ಬ ಮುಸ್ಲಿಂ ಕೂಡ ನಾನು ಧರ್ಮದ ಆಧಾರದ ಮೇಲೆ ಪಕ್ಷಪಾತದಿಂದ ನಡೆದುಕೊಂಡಿದ್ದೇನೆ ಎಂದು ಹೇಳಿದರೆ ನಾನು ರಾಜೀನಾಮೆ ನೀಡಿ ನನ್ನ ಕೆಲಸದಿಂದ ಹೊರನಡೆಯುತ್ತೇನೆ. ಹಣಕ್ಕಾಗಿ ಅಲ್ಲ, ಬದಲಾಗಿ ವಿದ್ಯಾರ್ಥಿಯಾಗಿದ್ದಾಗ ಕಂಡ ವ್ಯವಸ್ಥೆಯನ್ನು ಸುಧಾರಿಸಲು ಬಯಸಿದ್ದರಿಂದ ಪೊಲೀಸ್ ಇಲಾಖೆಗೆ ಸೇರಿದೆ. ಠಾಣೆಯೊಳಗೆ ಬಡವರು ಮತ್ತು ಮಧ್ಯವರ್ತಿಗಳ ಶೋಷಣೆ ನಡೆಯುತ್ತಿರುವುದನ್ನು ನೆನಪಿಸಿಕೊಂಡ ಅವರು, ಇದು ಇಲಾಖೆಯಲ್ಲಿ ಸೇವೆ ಮಾಡುವಂತೆ ನನ್ನನ್ನು ಪ್ರೇರೇಪಿಸಿತು ಎಂದು  ಭಾವುಕರಾಗಿ ಹೇಳಿದ್ದರು.

ಶರ್ಮಾ ಅವರ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ವೈರಲ್ ವಿಡಿಯೋ ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಲುಪಿದೆ. ಗುರುವಾರ, ಸಹರಾನ್‌ಪುರ ಎಸ್‌ಎಸ್‌ಪಿ ಆಶಿಶ್ ತಿವಾರಿ ಅವರು ಇನ್ಸ್‌ಪೆಕ್ಟರ್ ಶರ್ಮಾ ಅವರನ್ನು ಪೊಲೀಸ್ ಲೈನ್‌ಗೆ (ತರಬೇತಿ ಕೇಂದ್ರ ಅಥವಾ ಕಚೇರಿ) ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇನ್‌ಸ್ಪೆಕ್ಟರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. ವಿಡಿಯೋದ ಒಂದು ಸಣ್ಣ, ಆಯ್ದ ಭಾಗವನ್ನು ಮಾತ್ರ ಹಂಚಿಕೊಳ್ಳಲಾಗಿದೆ. ನಾನು ಯಾವುದೇ ಧಾರ್ಮಿಕ ಸಮುದಾಯವನ್ನು ಅಪರಾಧಿ ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಶರ್ಮಾ ಅವರು ಸುಮಾರು 20 ವರ್ಷಗಳಿಂದ ದಿಯೋಬಂದ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯವಾಗಿ ಅವರ ನೇರ ಸಂವಹನ ಶೈಲಿ ಮತ್ತು ನ್ಯಾಯಯುತ ಕೆಲಸದ ವಿಧಾನಕ್ಕೆ ಹೆಸರುವಾಸಿಯಾಗಿದ್ದಾರೆ. ಅನೇಕ ನಿವಾಸಿಗಳು ಅವರ ಪರವಾಗಿ ಮಾತನಾಡಿದ್ದಾರೆ ಎಂದು ನ್ಯೂಸ್‌ 18 ವರದಿ ಹೇಳಿದೆ.

ಬಜರಂಗದಳದ ದೇವಬಂದ್ ಪ್ರಾಂತೀಯ ಮಾಜಿ ಸಂಚಾಲಕ ವಿಕಾಸ್ ತ್ಯಾಗಿ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಶ್ಲಾಘಿಸಿದ್ದಾರೆ. ತಪ್ಪುದಾರಿಗೆಳೆಯುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...