Homeಅಂತರಾಷ್ಟ್ರೀಯಮೆಕ್ಸಿಕೊದಾದ್ಯಂತ ತೀವ್ರಗೊಂಡ 'ಜೆನ್ ಝೀ' ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

- Advertisement -
- Advertisement -

ಉತ್ತರ ಅಮೆರಿಕದ ಮೆಕ್ಸಿಕೋ ದೇಶದಾದ್ಯಂತ ‘ಜೆನ್‌ ಝೀ’ ಪ್ರತಿಭಟನೆ ತೀವ್ರಗೊಂಡಿದೆ. ಸಾವಿರಾರು ಯುವಜನರು ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರ ವಿರುದ್ದ ಬೀದಿಗಿಳಿದಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ನವೆಂಬರ್ 16) ಯುವಜನರ ಪ್ರತಿಭಟನೆ ವೇಳೆ ಸುಮಾರು 12 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ಪೊಲೀಸ್ ಅಧಿಕಾರಿಗಳು ಎಂದು ವರದಿಗಳು ವಿವರಿಸಿವೆ.

ಮೆಕ್ಸಿಕನ್ ಮೇಯರ್ ಹತ್ಯೆ ಜೆನ್‌ ಝೀ ಆಕ್ರೋಶಕ್ಕೆ ಕಾರಣ

ಮೆಕ್ಸಿಕೋದ ಡ್ರಗ್‌ ಗ್ಯಾಂಗ್‌ಗಳ ಮಿತಿ ಮೀರಿದ ಹಿಂಸಾಚಾರ (Cartel violence), ಭ್ರಷ್ಟಾಚಾರ ಮತ್ತು ಮುಖ್ಯವಾಗಿ ನವೆಂಬರ್ 1ರಂದು ನಡೆದ ಮೈಕೋವಕನ್ ರಾಜ್ಯದ ಉರುಪಾನ್‌ ನಗರದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಮಂಜೊ ರೊಡ್ರಿಗಸ್ ಅವರ ಹತ್ಯೆ ಯುವಜನರ ಆಕ್ರೋಶಕ್ಕೆ ಕಾರಣ ಎಂದು ವರದಿಯಾಗಿದೆ.

ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರು ಅಪರಾಧ ವಿರೋಧಿ ನಿಲುವು ಹೊಂದಿದ್ದರು. ಮಾದಕವಸ್ತುಗಳ ಕಳ್ಳಸಾಗಣೆ ಗ್ಯಾಂಗ್‌ಗಳು ಮತ್ತು ಕಾರ್ಟೆಲ್ ಹಿಂಸಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದರು. ಈ ಬೆನ್ನಲ್ಲೇ ಅವರನ್ನು ಡೇ ಆಫ್ ದಿ ಡೆಡ್ ಉತ್ಸವದಲ್ಲಿ ಹತ್ಯೆ ಮಾಡಲಾಗಿದೆ.

“ಡ್ರಗ್‌ ಗ್ಯಾಂಗ್‌ಗಳ ವಿರುದ್ಧ ಹೋರಾಡಲು ಪರ್ವತ ಪ್ರದೇಶಗಳಿಗೆ ಅಧಿಕಾರಿಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯಾಗಿದ್ದರಿಂದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರನ್ನು ಕೊಲ್ಲಲಾಗಿದೆ ಎಂದು 65 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ಹೇಳಿದ್ದಾಗಿ ಗಾರ್ಡಿಯನ್ ವರದಿ ಮಾಡಿದೆ.

ಪ್ರತಿಭಟನಾ ನಿರತ ಯುವಜನರು ಮೃತ ಮೇಯರ್‌ಗೆ ಬೆಂಬಲ ಸೂಚಿಸಿದ್ದಾರೆ. “ನಾವೆಲ್ಲರೂ ಕಾರ್ಲೋಸ್ ಮಂಜೊ” ಎಂಬ ಬ್ಯಾನರ್‌ಗಳನ್ನು ಪ್ರತಿಭಟನೆ ವೇಳೆ ಅವರು ಪ್ರದರ್ಶಿಸಿದ್ದಾರೆ.

“ಜೆನ್‌ ಝೀ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದರೂ, ಮುಸುಕುದಾರಿ ವ್ಯಕ್ತಿಗಳ ಗುಂಪು ಹಿಂಸಾಚಾರ ಪ್ರಾರಂಭಿಸಿತು. ಪ್ರತಿಭಟನೆ ವೇಳೆ ದರೋಡೆಯಿಂದ ಹಿಡಿದು ಹಲ್ಲೆಯವರೆಗಿನ ಅಪರಾಧಗಳಿಗೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ” ಎಂದು ಮೆಕ್ಸಿಕೋ ನಗರದ ಭದ್ರತಾ ಮುಖ್ಯಸ್ಥ ಪ್ಯಾಬ್ಲೊ ವಾಜ್ಕ್ವೆಜ್ ತಿಳಿಸಿದ್ದಾರೆ.

ರಾಯಿಟರ್ಸ್ ವರದಿಯ ಪ್ರಕಾರ, ಪ್ರತಿಭಟನಾ ನಿರತರು ಅಧ್ಯಕ್ಷೆ ಶೀನ್‌ಬಾಮ್ ವಾಸಿಸುವ ನ್ಯಾಷನಲ್ ಪ್ಯಾಲೆಸ್‌ ಸುತ್ತಲಿನ ಲೋಹದ ಬೇಲಿಗಳನ್ನು ಕಿತ್ತುಹಾಕುವ ಮೂಲಕ ಹಿಂಸಾತ್ಮ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಪೊಲೀಸರು ಅಶ್ರುವಾಯಿ ಸಿಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

ಅಧ್ಯಕ್ಷೆಯ ಅರಮನೆ ಸುತ್ತ ಭದ್ರತಾ ಪಡೆಗಳು ಭದ್ರ ಕೋಟೆಯನ್ನು ನಿರ್ಮಿಸಿ ರಕ್ಷಣೆ ಒದಗಿಸಿವೆ. ಇದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, “ನೀವು ಮೇಯರ್ ಕಾರ್ಲೋಸ್ ಅವರಿಗೂ ಇದೇ ರೀತಿಯ ಭದ್ರತೆ ಒದಗಿಸಬೇಕಿತ್ತು” ಎಂದು ಹೇಳಿದ್ದಾರೆ ಎಂದು ವರದಿಗಳು ವಿವರಿಸಿವೆ.

ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಏನು ಹೇಳುತ್ತಿದ್ದಾರೆ?

ನಮ್ಮ ಸರ್ಕಾರದ ವಿರೋಧಿ ಬಲಪಂಥೀಯ ಗುಂಪಿನ ರಾಜಕಾರಣಿಗಳು ಬೀದಿಗಳಲ್ಲಿ ಗಲಭೆ ಎಬ್ಬಿಸಿದ್ದಾರೆ. ಜೆನ್‌ ಝೀ ಗುಂಪುಗಳು ಆಯೋಜಿಸಿರುವ ಪ್ರತಿಭಟನೆಗಳಿಗೆ ಅವರು ಹಣಕಾಸು ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...