Homeಮುಖಪುಟಕೇರಳದಲ್ಲಿ ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಕೇರಳದಲ್ಲಿ ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

- Advertisement -
- Advertisement -

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಯೊಬ್ಬರು ಭಾನುವಾರ (ನವೆಂಬರ್ 16) ಮೃತಪಟ್ಟಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಗಳಿಗೆ ಸಂಬಂಧಿಸಿದ ಮಾನಸಿಕ ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಾಲಾ ಶಿಕ್ಷಕ ಅನೀಶ್ ಜಾರ್ಜ್ (44) ಸಾವಿಗೀಡಾದ ವ್ಯಕ್ತಿ. ಇವರ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಮತ್ತು ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯ ಸಿದ್ಧತೆಗಳಿಗೆ ಸಂಬಂಧಿಸಿದ ಕರ್ತವ್ಯಗಳಿಂದ ಜಾರ್ಜ್ ಹೆಚ್ಚಿನ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಎಫ್‌ಐಆರ್ ಹೇಳಿದೆ.

ಎಸ್‌ಐಆರ್ ಟಾರ್ಗೆಟ್ ರೀಚ್ ಮಾಡಲು ಜಾರ್ಜ್ ತಡರಾತ್ರಿಯವರೆಗೆ ಕೆಲಸ ಮಾಡುತ್ತಿದ್ದರು ಎಂದು ಮೃತ ಜಾರ್ಜ್ ಅವರ ಕುಟುಂಬಸ್ಥರು ಮತ್ತು ಅವರ ಊರಿನವರು ಹೇಳಿದ್ದಾರೆ. ಎಸ್‌ಐಆರ್‌ಗೆ ಸಂಬಂಧಿತ ಫಾರ್ಮ್‌ಗಳನ್ನು ಪೂರ್ಣಗೊಳಿಸಲು ಮತ್ತು ಅವುಗಳನ್ನು ತನ್ನ ಗೊತ್ತುಪಡಿಸಿದ ಪ್ರದೇಶದಾದ್ಯಂತ ವಿತರಿಸುವ ಅಪಾರ ಒತ್ತಡದಲ್ಲಿದ್ದ ಜಾರ್ಜ್, ಭಾನುವಾರ ಬೆಳಗಿನ ಜಾವ 2 ಗಂಟೆಯವರೆಗೆ ಕೆಲಸ ಮಾಡಿದ್ದರು ಎಂದು ಜಾರ್ಜ್ ಅವರು ಕುಟುಂಬದ ಪರಿಚಯಸ್ಥ ಶ್ಯಾಮ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿದ್ದಾರೆ.

ಜಾರ್ಜ್ ಅವರ ಆತ್ಮಹತ್ಯೆ ಸರ್ಕಾರಿ ನೌಕರರಲ್ಲಿ ಆಕ್ರೋಶದ ಅಲೆಯನ್ನು ಹುಟ್ಟುಹಾಕಿದ್ದು, ಮೂರು ಪ್ರಮುಖ ಸಂಘಟನೆಗಳಾದ ರಾಜ್ಯ ಸರ್ಕಾರಿ ನೌಕರರು ಮತ್ತು ಶಿಕ್ಷಕರ ಕ್ರಿಯಾ ಮಂಡಳಿ, ಶಿಕ್ಷಕರ ಸೇವಾ ಸಂಸ್ಥೆಗಳ ಜಂಟಿ ಸಮಿತಿ ಮತ್ತು ಕೇರಳ ಎನ್‌ಜಿಒ ಸಂಘ ನವೆಂಬರ್ 17, ಸೋಮವಾರದಂದು ರಾಜ್ಯಾದ್ಯಂತ ಬಿಎಲ್‌ಒ ಕರ್ತವ್ಯಗಳನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ. ತಿರುವನಂತಪುರಂನಲ್ಲಿರುವ ಮುಖ್ಯ ಚುನಾವಣಾ ಅಧಿಕಾರಿ ಕಚೇರಿ ಮತ್ತು ಎಲ್ಲಾ ಜಿಲ್ಲೆಗಳ ಕಲೆಕ್ಟರೇಟ್‌ಗಳಲ್ಲಿ ಜಂಟಿ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಹೇಳಿವೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಮುಂದೂಡಲು ಪದೇ ಪದೇ ಮಾಡಿದ ಮನವಿಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಸಂಘಟನೆಗಳು ತಮ್ಮ ಹೇಳಿಕೆಯಲ್ಲಿ ಚುನಾವಣಾ ಆಯೋಗವನ್ನು (ಇಸಿ) ದೂಷಿಸಿವೆ. 23 ವರ್ಷಗಳ ಹಿಂದೆ ಪ್ರಕಟಿಸಲಾದ ಮತದಾರರ ಪಟ್ಟಿಯನ್ನು ನವೀಕರಿಸಲು ಅತ್ಯಂತ ಕಡಿಮೆ ಅವಧಿಯಲ್ಲಿ ಅವಾಸ್ತವಿಕ ಗುರಿಗಳೊಂದಿಗೆ ಬಿಎಲ್‌ಒಗಳನ್ನು ‘ಹಗಲಿರುಳು’ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸದಿದ್ದರೆ ತೀವ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಅವರ ಸಾವು ರಾಜಕೀಯ ಚರ್ಚೆಯನ್ನೂ ತೀವ್ರಗೊಳಿಸಿದೆ. ಎಸ್‌ಐಆರ್ ಅವಧಿಯಲ್ಲಿ ಬಿಎಲ್‌ಒಗಳ ಮೇಲೆ ಅತಿಯಾದ ಕೆಲಸದ ಒತ್ತಡವನ್ನು ಹೇರಲಾಗುತ್ತಿದೆ ಎಂದು ನಮ್ಮ ಪಕ್ಷವು ಈಗಾಗಲೇ ಹೇಳಿದೆ ಎಂದು ಸಿಪಿಐ(ಎಂ) ನಾಯಕ ಎಂ. ವಿ ಜಯರಾಜನ್ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಿಜಿಲ್ ಮಾಕ್ಕುಟ್ಟಿ, ‘ಬಿಜೆಪಿ ಕಾರ್ಯಸೂಚಿಯನ್ನು ಪೂರೈಸಲು’ ಚುನಾವಣೆಗೆ ಮುಂಚಿತವಾಗಿ ಎಸ್‌ಐಆರ್ ಅನ್ನು ಜಾರಿಗೆ ತಂದಿರುವ ಚುನಾವಣಾ ಆಯೋಗದ ಒತ್ತಡಕ್ಕೆ ಜಾರ್ಜ್ ಬಲಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ನಾಯಕರು ಆತ್ಮಹತ್ಯೆಯನ್ನು ‘ತೀವ್ರ ದುರದೃಷ್ಟಕರ’ ಎಂದು ಹೇಳಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯವರೆಗೆ ಚುನಾವಣಾ ಆಯೋಗ ಎಸ್‌ಐಆರ್ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಾರ್ಜ್ ಅವರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಆಗ್ರಹಿಸಿದ್ದಾರೆ. ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರ ಸರಿಯಾದ ತನಿಖೆ ನಡೆಸಿ ಸ್ಪಷ್ಟ ವಿವರಣೆಯನ್ನು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಎಸ್‌ಐಆರ್‌ ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವಾಗಿದೆ. ಈಗ ನಡೆಯುತ್ತಿರುವ ಪ್ರಕ್ರಿಯೆಯು ವಿಧಾನಸಭಾ ಚುನಾವಣೆಯ ಸಿದ್ಧತೆಗಳಿಗಿಂತ ಹೆಚ್ಚು ತೀವ್ರವಾಗಿದೆ ಎಂದು ಅವರು ಹೇಳಿದ್ದಾರೆ.

ಜಾರ್ಜ್ ಅವರ ಸಾವಿನ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ ಮತ್ತು ಕಣ್ಣೂರು ಜಿಲ್ಲಾ ಕಲೆಕ್ಟರ್ ಅವರಿಂದ ವಿವರವಾದ ವರದಿಯನ್ನು ಕೇಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ರಥನ್ ಯು ಕೇಳ್ಕರ್ ಹೇಳಿದ್ದಾರೆ. ಬಿಎಲ್ಒಗಳು ‘ಸಾಮೂಹಿಕ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ’ ಮತ್ತು ಕೆಲಸದ ಒತ್ತಡದ ಬಗ್ಗೆ ಯಾವುದೇ ಔಪಚಾರಿಕ ದೂರುಗಳು ಬಂದಿಲ್ಲ ಎಂದು ಕೇಳ್ಕರ್ ಸಮರ್ಥಿಸಿಕೊಂಡಿದ್ದಾರೆ. ಬಿಎಲ್ಒಗಳು 31 ದಿನಗಳವರೆಗೆ ಎಸ್ಐಆರ್ ಕರ್ತವ್ಯಗಳ ಮೇಲೆ ಮಾತ್ರ ಗಮನಹರಿಸಬೇಕಾಗುತ್ತದೆ. ಹೀಗಿರುವಾಗ ಸಾಮಾನ್ಯವಾಗಿ ಹೆಚ್ಚುವರಿ ಕೆಲಸದ ಹೊರೆ ಬೀಳುವ ಸಾಧ್ಯತೆಯಿಲ್ಲ ಎಂದಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಕೇರಳ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...