Homeರಾಷ್ಟ್ರಆಂಧ್ರ ಮಾರೆಡುಮಿಲ್ಲಿ ಅರಣ್ಯದಲ್ಲಿ ನಕ್ಸಲ್ ನಾಯಕ ಹಿಡ್ಮಾ ಸೇರಿದಂತೆ 6 ಮಂದಿಯನ್ನು ಹತ್ಯೆಗೈದ ಪೊಲೀಸರು

ಆಂಧ್ರ ಮಾರೆಡುಮಿಲ್ಲಿ ಅರಣ್ಯದಲ್ಲಿ ನಕ್ಸಲ್ ನಾಯಕ ಹಿಡ್ಮಾ ಸೇರಿದಂತೆ 6 ಮಂದಿಯನ್ನು ಹತ್ಯೆಗೈದ ಪೊಲೀಸರು

- Advertisement -
- Advertisement -

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ನವೆಂಬರ್ 18, ಮಂಗಳವಾರ ಬೆಳಿಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಗುಂಡಿನ ಚಕಮಕಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯ ಕೇಂದ್ರ ಸಮಿತಿ ನಾಯಕ ಹಿಡ್ಮಾ ಸೇರಿದಂತೆ ಆರು ಮಂದಿಯನ್ನು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ಹೇಳಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿಲ್ಲ. ಹತ್ಯೆಯಾದ ನಕ್ಸಲರ ಗುರುತು ಮತ್ತು ಗಾಯಗೊಂಡವರ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನಡೆದ ಎರಡನೇ ಪ್ರಮುಖ ಎನ್‌ಕೌಂಟರ್ ಇದಾಗಿದೆ. ಇದೇ ವರ್ಷ ಮೇ 7ರಂದು ವೈ. ರಾಮಾವರಂ ಮಂಡಲ ಅರಣ್ಯ ಪ್ರದೇಶದಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...