Homeಕರ್ನಾಟಕಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ 'ಭಗವದ್ಗೀತೆ..' ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

ಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ..’ ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

- Advertisement -
- Advertisement -

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ಎಂಬ ಶೀರ್ಷಿಕೆಯ ವಿಚಾರ ಸಂಕಿರಣ ಏರ್ಪಡಿಸಿದ್ದು, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆಡಿಎಸ್ಎಸ್) ವಿವಿ ಮುಂದೆ ಪ್ರತಿಭಟನೆ ನಡೆಸಿತು.

ಸ್ವರ್ಣ ರಶ್ಮಿ ಟ್ರಸ್ಟ್, ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯದ ಬಸವ ಮಂಟಪದಲ್ಲಿ ಕಾರ್ಯಕ್ರಮವ ಆಯೋಜಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆಡಿಎಸ್ಎಸ್ ರಾಜ್ಯ ಸಂಚಾಲಕ ಎಂ ಗುರುಮೂರ್ತಿ, “ಈ ವಿಚಾರ ಸಂಕಿರಣವು ಬಲಪಂಥೀಯ ಸೈದ್ಧಾಂತಿಕ ಕಾರ್ಯಸೂಚಿಯನ್ನು ಉತ್ತೇಜಿಸುತ್ತದೆ, ರಾಷ್ಟ್ರಕವಿ ಕುವೆಂಪು ಅವರ ಆದರ್ಶಗಳು ಮತ್ತು ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಚೈತನ್ಯಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು.

“ಭಗವದ್ಗೀತೆ ಎನ್ನುವುದೇ ಒಂದು ಅಪ್ರಸ್ತುತ ಹಾಗೂ ಹಳೆಯ ವಿಚಾರ, ಶತಶತಮಾನಗಳಿಂದ ವರ್ಣಾಶ್ರಮವನ್ನು ಪಾಲಿಸಿಕೊಂಡು ಬಂದಿರುವ ಸಿದ್ಧಾಂತ. ಈಗ, ದೇಶದಲ್ಲಿ ಸಂವಿಧಾನ ಜಾರಿಯಲ್ಲಿದೆ. ಗಂಭೀರ ಅಪರಾಧವೊಂದನ್ನು ಮಾಡುವುದಕ್ಕೆ ಉರಿದುಂಬಿಸುವ ಜೊತೆಗೆ ವರ್ಣಾಶ್ರಮವನ್ನು ಸಮರ್ಥನೆ ಮಾಡಿಕೊಳ್ಳುವುದೇ ಭಗದ್ಗೀತೆಯ ಒಟ್ಟು ಸಾರಾಂಶ. ಆದ್ದರಿಂದ, ವಿಶ್ವವಿದ್ಯಾಲಯದ ಒಳಗೆ ಈ ಕುರಿತ ಕಾರ್ಯಕ್ರಮ ಆಯೋಜಿಸಿರುವುದು ಸರಿಯಲ್ಲ. ಏಕೆಂದರೆ, ಇಲ್ಲಿ ಬೇರೆಬೇರೆ ಜಾತಿ ಮತ್ತು ಧರ್ಮದ ಮಕ್ಕಳು ಓದುತ್ತಿದ್ದಾರೆ. ನಾಳೆ ಬೇರೆಯವರು ಬಂದು ಕುರಾನ್-ಬೈಬಲ್ ನಲ್ಲಿ ಒಳ್ಳೆಯ ಅಂಶಗಳಿವೆ ಎಂದು ಕೇಳಿದರೆ ವಿವಿ ಏನು ಮಾಡುತ್ತದೆ” ಎಂದು ಪ್ರಶ್ನಿಸಿದರು.

ನಾಳಿನ ಕಾರ್ಯಕ್ರಮವನ್ನು ಬರಗೂರು ರಾಮಚಂದ್ರಪ್ಪ ಬಹಿಷ್ಕರಿಸಲಿ

“ಉಪ ಕುಲಪತಿಗಳು ಮೂಲಭೂತವಾದಿತನವನ್ನು ಮೈಗೂಡಿಸಿಕೊಂಡಿದ್ದಾರೆ. ನಾಳೆ ವಿವಿ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಈ ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಇಷ್ಟು ವರ್ಷ ನಾಡು ಕಟ್ಟುವ ಕೆಲಸ ಮಾಡಿರುವ ಬರಗೂರು ರಾಮಚಂದ್ರಪ್ಪ ಅವರು, ಇಂತಹ ಕೋಮುವಾದಿ, ಜಾತಿವಾದಿ ಹಾಗೂ ಮೂಲಭೂತವಾದಿಯಾಗಿರುವ ವಿಸಿ ಶರತ್ ಅನಂತ್‌ಮೂರ್ತಿ ಅವರ ಜೊತೆಗೆ ವೇದಿಕೆ ಹಂಚಿಕೊಳ್ಳಬಾರದು. ಅವರು ಕಾರ್ಯಕ್ರಮಕ್ಕೆ ಬರಬಾರದು ಎಂದು ನಾನು ಮನವಿ ಮಾಡುತ್ತಿದ್ದೇನೆ” ಎಂದರು.

“ಕರ್ನಾಟಕ ಸರ್ಕಾರ ವಿಸಿ ಶರತ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಏಕೆಂದರೆ, ನನ್ನದು ‘ಮಾನವ ಜಾತಿ’ ಎಂದು ಕುವೆಂಪು ಹೇಳಿದ್ದರು. ಯಾವುದೇ ಧರ್ಮಗ್ರಂಥ ಪೂಜನೀಯ ಆಗಬಾರದು ಎಂದು ಹೇಳಿದ್ದರು. ಅವರ ಹೆಸರಿನ ವಿಶ್ವವಿದ್ಯಾಲಯದೊಳಗೆ ಸನಾತನಕ್ಕೆ ಸಂಬಂಧಿಸಿದ ವಿಚಾರ ಸಂಕಿರಣ ನಡೆಯಬಾರದಿತ್ತು. ಅಂಬೇಡ್ಕರ್ ಮತ್ತು ಕುವೆಂಪು ಅವರೂ ಸಹ ಸನಾತನ ಧರ್ಮವನ್ನು ವಿರೋಧಿದ್ದರು. ಇಷ್ಟೆಲ್ಲಾ ಇರುವಾಗ ಆರ್‌ಎಸ್‌ಎಸ್‌ ವಿಚಾರವನ್ನು ಮುನ್ನೆಲೆಗೆ ತರುವುದು ಸರಿಯಲ್ಲ. ವಿಶ್ವವಿದ್ಯಾಲಯದ ಯಾವುದೇ ವಿದ್ವಾಂಸರಿಲ್ಲದೇ, ಕದ್ದುಮುಚ್ಚಿ ಕಾರ್ಯಕ್ರಮ ಮಾಡುತ್ತಿರುವುದು ಯಾಕೆ? ವಿವಿ ಆವರಣಕ್ಕೆ ಪೊಲೀಸ್ ಸರ್ಪಗಾವಲು ಹಾಕಿ ಕಾರ್ಯಕ್ರಮ ಮಾಡುವ ಮೂಲಕ ಉಪ ಕುಲಪತಿಗಳು ಕುವೆಂಪು ಆಶಯಗಳಿಗೆ ವಿರುದ್ಧವಾಗಿ ನಿತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...