Homeಮುಖಪುಟಶರಣಾದ ನಕ್ಸಲರಿಗೆ ಕೆಫೆ ಪ್ರಾರಂಭಿಸಿದ ಛತ್ತೀಸ್‌ಗಢದ ಬಿಜೆಪಿ ಸರ್ಕಾರ

ಶರಣಾದ ನಕ್ಸಲರಿಗೆ ಕೆಫೆ ಪ್ರಾರಂಭಿಸಿದ ಛತ್ತೀಸ್‌ಗಢದ ಬಿಜೆಪಿ ಸರ್ಕಾರ

- Advertisement -
- Advertisement -

ಶರಣಾದ ಮಾವೋವಾದಿಗಳಿಗೆ (ನಕ್ಸಲರಿಗೆ) ಉದ್ಯೋಗಾವಕಾಶಗಳನ್ನು ಒದಗಿಸಲು ಛತ್ತೀಸ್‌ಗಢದ ಬಿಜೆಪಿ ಸರ್ಕಾರ ಪ್ರಾರಂಭಿಸಿರುವ ವಿಶಿಷ್ಟ ‘ಪಂಡುಂ ಕೆಫೆ’ಯನ್ನು ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಸೋಮವಾರ (ನವೆಂಬರ್ 17) ಬಸ್ತಾರ್ ಪ್ರದೇಶದ ಜಗದಲ್‌ಪುರದ ವಿಭಾಗೀಯ ಪ್ರಧಾನ ಕಚೇರಿಯಲ್ಲಿ ಉದ್ಘಾಟಿಸಿದ್ದಾರೆ.

ಬಳಿಕ ಮಾತನಾಡಿದ ಸಿಎಂ, ಮಾಜಿ ನಕ್ಸಲರ ಹೊಸ ಜೀವನಕ್ಕೆ ಶುಭಾಷಯ ಹೇಳಿದ್ದಾರೆ. ನಕ್ಸಲಿಸಂಗೆ ತುತ್ತಾದ ವ್ಯಕ್ತಿಗಳು ಅಥವಾ ಶರಣಾದವರನ್ನು ಬೆಂಬಲಿಸುವುದು ಸರ್ಕಾರ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ನಕ್ಸಲಿಸಂನಿಂದ ಹೊರ ಬಂದ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಾಯಿ ತಿಳಿಸಿದ್ದಾರೆ.

“‘ಪಂಡುಂ’ ಎಂಬ ಹೆಸರು ಬಸ್ತಾರ್‌ನ ಸಾಂಸ್ಕೃತಿಕ ಬೇರುಗಳು ಮತ್ತು ಸಾಂಪ್ರದಾಯಿಕ ನೀತಿಯನ್ನು ವ್ಯಕ್ತಪಡಿಸುತ್ತದೆ. ಇದರ ಟ್ಯಾಗ್‌ಲೈನ್ – “ಪ್ರತಿ ಕಪ್ ಒಂದು ಕಥೆಯನ್ನು ಹೇಳುವ ಸ್ಥಳ”, ಇದು ಇಲ್ಲಿ ನೀಡುವ ಪ್ರತಿಯೊಂದು ಕಪ್ ಸುವಾಸನೆ ಮತ್ತು ರುಚಿಯನ್ನು ಮಾತ್ರವಲ್ಲದೆ, ಧೈರ್ಯ, ಬದಲಾವಣೆ ಮತ್ತು ಹೊಸ ಆರಂಭದ ಕಥೆಯನ್ನು ಹೊಂದಿದೆ ಎಂಬುದನ್ನು ಸಂಕೇತಿಸುತ್ತದೆ” ಎಂದು ಬಸ್ತಾರ್ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸುಂದರರಾಜ್ ಪಟ್ಲಿಂಗಮ್ ಹೇಳಿದ್ದಾರೆ.

ನೂತನ ಕೆಫೆಯಲ್ಲಿ ಕೆಲಸ ಮಾಡುವವರು ಬಸ್ತಾರ್‌ನಲ್ಲಿರುವ ಸರ್ಕಾರಿ ಕೌಶಲ್ಯ ಕೇಂದ್ರಗಳ ಮೂಲಕ ಆತಿಥ್ಯ, ಕೆಫೆ ನಿರ್ವಹಣೆ, ಗ್ರಾಹಕ ಸೇವೆ, ನೈರ್ಮಲ್ಯ, ಆಹಾರ ಸುರಕ್ಷತೆ ಮತ್ತು ಮೂಲಭೂತ ಉದ್ಯಮಶೀಲತೆಯಲ್ಲಿ ವಿಶೇಷ ತರಬೇತಿಯನ್ನು ಪಡೆದಿದ್ದಾರೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...