Homeಕರ್ನಾಟಕಕ್ವಾಂಟಮ್ ತಂತ್ರಜ್ಞಾನದ ಮಾರ್ಗ ಸೂಚಿಗಳನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ: ಸಿದ್ದರಾಮಯ್ಯ

ಕ್ವಾಂಟಮ್ ತಂತ್ರಜ್ಞಾನದ ಮಾರ್ಗ ಸೂಚಿಗಳನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ: ಸಿದ್ದರಾಮಯ್ಯ

- Advertisement -
- Advertisement -

“ಡೀಪ್ ಸೈನ್ಸ್ ಮತ್ತು ಸುಧಾರಿತ ಇಂಜಿನಿಯರಿಂಗ್ ವ್ಯವಸ್ಥೆ ಒದಗಿಸಲು ರಾಜ್ಯ ಬದ್ಧವಾಗಿದ್ದು, ಎಐ, ಸೈಬರ್-ಭದ್ರತೆ, ದತ್ತಾಂಶ ವಿಜ್ಞಾನ, ಅನಿಮೇಷನ್ ಮತ್ತು ರೊಬೊಟಿಕ್ಸ್‌ನಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. 

ಬೆಂಗಳೂರಿನಲ್ಲಿ ಇಂದು ಆರಂಭವಾದ ಟೆಕ್‌ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕ್ವಾಂಟಮ್ ತಂತ್ರಜ್ಞಾನದ ಮಾರ್ಗ ಸೂಚಿಗಳನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ‘ಬಿಯಾಂಡ್ ಬೆಂಗಳೂರು’ ಉಪಕ್ರಮದ ಮೂಲಕ ತಂತ್ರಜ್ಞಾನ ಆರ್ಥಿಕತೆಯ ವಿಕೇಂದ್ರೀಕರಣಕ್ಕೆ ಮುಂದಾಗಿರುವ ನಮ್ಮ ಸರ್ಕಾರ, ಮುಂದಿನ ಪೀಳಿಗೆಗಾಗಿ ಟೈರ್ 2 ನಗರಗಳನ್ನು ನಾವೀನ್ಯತೆಯ ಕ್ಲಸ್ಟರ್‌ಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದೆ” ಎಂದರು. ಜೊತೆಗೆ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ ಎಂದು ಹೂಡಿಕೆದಾರರಿಗೆ ಕರೆ ನೀಡಿದರು.

ಇದೇ ವೇಳೆ ಈ ಎಲ್ಲ ಕ್ರಮಗಳು ಕೇವಲ ಆರ್ಥಿಕತೆಯನ್ನು ಕೇಂದ್ರೀಕರಿಸದೇ, ಸಮಾನ ಬೆಳವಣಿಗೆಗೂ ಬದ್ಧವಾಗಿವೆ. ರಾಜ್ಯದ ಪ್ರತಿ ಜಿಲ್ಲೆಯೂ ಹಾಗೂ ಯುವಪೀಳಿಗೆಯು ಡಿಜಿಟಲ್ ಯುಗಕ್ಕೆ ತೆರೆದುಕೊಳ್ಳುವ ಅವಕಾಶವನ್ನು ನೀಡಲಾಗಿದೆ. ನಮ್ಮ ಆಡಳಿತದ ಮಾದರಿಯು ಪಾರದರ್ಶಕತೆ, ನಿರೀಕ್ಷಿತ ನಡೆ ಹಾಗೂ ಸ್ಥಿರತೆಗೆ ಬದ್ಧವಾಗಿದೆ ಎಂದು ಹೇಳಿದರು.

ನಮ್ಮ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿ ರೂಪಿಸಿವೆ ಎಂದರು. ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರವಾಗಲಿ, ಸ್ಟಾರ್ಟ್ ಅಪ್ ಆಗಲಿ, ಶೈಕ್ಷಣಿಕ ಸಂಶೋಧನೆಯಾಗಲಿ, ಯಾವುದೇ ಕ್ಷೇತ್ರದ ಬಂಡವಾಳ ಹೂಡಿಕೆ ಕರ್ನಾಟಕ ರಾಜ್ಯ ತಾಣವಾಗಿವೆ. ಎಐ, ಕ್ವಾಂಟಮ್ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ವಿಫುಲ ಅವಕಾಶಗಳನ್ನು ಬಳಸಿಕೊಂಡು ಮಾನವ ಪ್ರಗತಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...