Homeಕರ್ನಾಟಕಪೋಕ್ಸೊ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್‌ ಜಾರಿಗೊಳಿಸಿದ ವಿಶೇಷ ನ್ಯಾಯಾಲಯ

ಪೋಕ್ಸೊ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್‌ ಜಾರಿಗೊಳಿಸಿದ ವಿಶೇಷ ನ್ಯಾಯಾಲಯ

- Advertisement -
- Advertisement -

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದ ಮೊದಲ ಆರೋಪಿಯಾಗಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬೆಂಗಳೂರಿನ ವಿಶೇಷ ಸತ್ರ ನ್ಯಾಯಾಲಯವು ಮಂಗಳವಾರ (ನವೆಂಬರ್ 18) ಸಮನ್ಸ್‌ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

ಪ್ರಕರಣದಲ್ಲಿ ಆರೋಪಿಗಳಾಗಿರುವ ಬಿ.ಎಸ್‌ ಯಡಿಯೂರಪ್ಪ, ವೈ.ಎಂ ಅರುಣ, ಎಂ. ರುದ್ರೇಶ ಹಾಗೂ ಜಿ. ಮರಿಸ್ವಾಮಿ ಅವರಿಗೆ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ (ಎಫ್‌ಟಿಎಸ್‌ಸಿ-1) ನ್ಯಾಯಾಧೀಶರಾದ ಎಸ್‌. ಸುಜಾತಾ ಅವರು ಸಮನ್ಸ್‌ ಜಾರಿಗೊಳಿಸಿ, ಡಿಸೆಂಬರ್ 2ಕ್ಕೆ ಖುದ್ದು ಹಾಜರಾಗಲು ನಿರ್ದೇಶಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ವಿಶೇಷ ಪ್ರಾಸಿಕ್ಯೂಟರ್‌ ಅಶೋಕ್‌ ಎನ್.ನಾಯಕ್‌ ಅವರು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಧೀಶರು 30 ದಿನಗಳ ಒಳಗಾಗಿ ಸಾಕ್ಷಿ ವಿಚಾರಣೆ ಆಗಬೇಕು ಎಂಬ ಹಿನ್ನೆಲೆಯಲ್ಲಿ ಯಡಿಯೂರಪ್ಪ ಮತ್ತು ಇತರರಿಗೆ ಸಮನ್ಸ್‌ ಜಾರಿಗೆ ಆದೇಶಿಸಿದ್ದಾರೆ ಎಂದು ವರದಿ ಹೇಳಿದೆ.

ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿದ್ದ ಫೆಬ್ರವರಿ 28ರ ಆದೇಶವನ್ನು ನವೆಂಬರ್ 13ರಂದು ಹೈಕೋರ್ಟ್ ಎತ್ತಿ ಹಿಡಿದಿತ್ತು.

ಎರಡನೇ ಬಾರಿಗೆ ಸಂಜ್ಞೇ ಪರಿಗಣಿಸಿ ಸಮನ್ಸ್ ಜಾರಿಗೊಳಿಸಿದ್ದ ವಿಚಾರಣಾ ನ್ಯಾಯಾಲಯ ಕ್ರಮ ಪ್ರಶ್ನಿಸಿ ಯಡಿಯೂರಪ್ಪ, ವೈ.ಎಂ ಅರುಣ, ಎಂ. ರುದ್ರೇಶ ಹಾಗೂ ಜಿ. ಮರಿಸ್ವಾಮಿ ಸಲ್ಲಿಸಿದ್ದ ಎರಡು ಪ್ರತ್ಯೇಕ ರಿಟ್‌ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಇದಕ್ಕೂ ಮುನ್ನ ಫೆಬ್ರವರಿ 7ರಂದು ವಿಚಾರಣಾ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಸಿಐಡಿ ಮಾಡಿರುವ ತನಿಖೆ ಮತ್ತು ಅಂತಿಮ ವರದಿ ಹಾಗೆಯೇ ಉಳಿಯಲಿದೆ ಎಂದಿತ್ತು. ವಿಷಯವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿತ್ತು.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಹೊಸದಾಗಿ ಸಂಜ್ಞೇ ಪರಿಗಣಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಸಂತ್ರಸ್ತೆಯ ತಾಯಿ 2024ರ ಮಾರ್ಚ್‌ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ಆ ದೂರು ಆಧರಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ನಂತರ ಪ್ರಕರಣ ಸಿಐಡಿಗೆ ತನಿಖೆ ವರ್ಗಾವಣೆಯಾಗಿತ್ತು. ಸಿಐಡಿ ಪೊಲೀಸರು ಯಡಿಯೂರಪ್ಪ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...