Homeಮುಖಪುಟಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ, 'ಪರಿಗಣಿತ ಒಪ್ಪಿಗೆ'ಯ ಪರಿಕಲ್ಪನೆಯಿಲ್ಲ: ಸುಪ್ರೀಂ...

ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ, ‘ಪರಿಗಣಿತ ಒಪ್ಪಿಗೆ’ಯ ಪರಿಕಲ್ಪನೆಯಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಡಿರುವ ಉಲ್ಲೇಖಕ್ಕೆ ಉತ್ತರಿಸಿರುವ ಸುಪ್ರೀಂ ಕೋರ್ಟ್, “ಸಂವಿಧಾನದ 200/201ನೇ ವಿಧಿಗಳ ಅಡಿಯಲ್ಲಿ ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರ ನಿರ್ಧಾರಗಳಿಗೆ ನ್ಯಾಯಾಲಯವು ಯಾವುದೇ ಸಮಯ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಮಂಗಳವಾರ (ನವೆಂಬರ್ 20) ಸ್ಪಷ್ಟಪಡಿಸಿದೆ.

ರಾಷ್ಟ್ರಪತಿ ಮತ್ತು ರಾಜ್ಯಪಾಲರು ಕಾಲಮಿತಿಯನ್ನು ಉಲ್ಲಂಘಿಸಿದರೆ, ನ್ಯಾಯಾಲಯಗಳು ಮಸೂದೆಗಳಿಗೆ ‘ಪರಿಗಣಿತ ಒಪ್ಪಿಗೆ’ (ತಾನಾಗಿಯೇ ಒಪ್ಪಿಗೆ) ಎಂದು ಘೋಷಿಸುವ ಪರಿಕಲ್ಪನೆಯು ಸಂವಿಧಾನದ ಆಶಯ ಮತ್ತು ಅಧಿಕಾರಗಳ ಪ್ರತ್ಯೇಕತೆಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಇದು ವಾಸ್ತವಿಕವಾಗಿ ರಾಜ್ಯಪಾಲರಿಗೆ ಮೀಸಲಾಗಿರುವ ಕಾರ್ಯಗಳನ್ನು ಆಕ್ರಮಿಸಿಕೊಳ್ಳುವುದಾಗಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಿಧಾನಸಭೆಯಲ್ಲಿ ಅಂಗೀಕೃತಗೊಂಡ ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ನ್ಯಾಯಾಂಗ ಗಡುವೊಂದನ್ನು ವಿಧಿಸುವುದು, ಆ ಗಡುವು ಮೀರಿದ ನಂತರ 'ಅನುಮೋದನೆ ತಾನಾಗಿಯೇ ಸಿಕ್ಕಿತು' (deemed consent) ಎಂದು ಪರಿಗಣಿಸುವಂತೆ ಆದೇಶಿಸುವುದು ಸಂವಿಧಾನಾತ್ಮಕವಾಗಿ ತಪ್ಪು ಮತ್ತು ಅಸಾಧ್ಯ. ಏಕೆಂದರೆ, ಇಂತಹ ಆದೇಶದಿಂದ ನ್ಯಾಯಾಂಗವು ಕಾರ್ಯಾಂಗದ ಮೂಲಭೂತ ಕರ್ತವ್ಯವನ್ನೇ ಆಕ್ರಮಿಸಿಕೊಂಡಂತಾಗುತ್ತದೆ ಮತ್ತು ರಾಜ್ಯಪಾಲರು ಅಥವಾ ರಾಷ್ಟ್ರಪತಿಯ ಸ್ಥಾನವನ್ನು ಬದಲಾಯಿಸಿದಂತಾಗುತ್ತದೆ".
ಸಂವಿಧಾನದ 200 ಮತ್ತು 201ನೇ ವಿಧಿಗಳು ಈ ಅಧಿಕಾರವನ್ನು (ಮಸೂದೆಗೆ ಅನುಮೋದನೆ ನೀಡುವ) ಕೇವಲ ಕಾರ್ಯಾಂಗಕ್ಕೆ ಮಾತ್ರ ನೀಡಿವೆ, ನ್ಯಾಯಾಲಯಕ್ಕೆ ಅಲ್ಲ. ಆದ್ದರಿಂದ ಇಂತಹ 'ತಾನಾಗಿ ಅನುಮೋದನೆ' ಎಂಬ ಪರಿಕಲ್ಪನೆಯನ್ನು ಸಂವಿಧಾನದ ಚೌಕಟ್ಟಿನಲ್ಲಿ ಸಂಪೂರ್ಣ ಅನುಚಿತ ಮತ್ತು ಅನುಮತಿಸಲಾಗದ ಕ್ರಮ ಎಂದು ಸುಪ್ರೀಂ ಕೋರ್ಟ್ ದೃಢವಾಗಿ ತೀರ್ಮಾನಿಸಿದೆ.

ರಾಜ್ಯಪಾಲರು ಮಸೂದೆಗಳಿಗೆ ಸಂಬಂಧಿಸಿದಂತೆ ಯಾವುದೇ ಕಾರಣವಿಲ್ಲದೆ ಅತ್ಯಂತ ದೀರ್ಘಕಾಲ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ತಡೆಹಿಡಿದು, ವಿಧಾನಮಂಡಲದ ಕಾನೂನು ರಚನಾ ಪ್ರಕ್ರಿಯೆಯನ್ನೇ ವಿಫಲಗೊಳಿಸುತ್ತಿದ್ದರೆ, ನ್ಯಾಯಾಲಯವು ತನ್ನ ಸೀಮಿತ ನ್ಯಾಯಾಂಗ ಪರಿಶೀಲನಾ ಅಧಿಕಾರವನ್ನು (limited judicial review) ಬಳಸಿಕೊಂಡು ರಾಜ್ಯಪಾಲರಿಗೆ ‘ನಿರ್ದಿಷ್ಟ ಸಮಯದೊಳಗೆ ತೀರ್ಮಾನ ತೆಗೆದುಕೊಳ್ಳಿ’ ಎಂದು ಆದೇಶ ನೀಡಬಹುದು.

ಆದರೆ, ಈ ಆದೇಶದಲ್ಲಿ ಮಸೂದೆಯ ಒಳಿತು-ಕೆಡುಕುಗಳ ಬಗ್ಗೆ (merits of the Bill) ಏನನ್ನೂ ಹೇಳುವಂತಿಲ್ಲ ಅಥವಾ ಮಸೂದೆಗೆ ಅನುಮೋದನೆ ಕೊಡಿ/ತಡೆಯಿರಿ ಎಂದು ಆದೇಶಿಸುವಂತಿಲ್ಲ. ಕೇವಲ ‘ತೀರ್ಮಾನ ತೆಗೆದುಕೊಳ್ಳುವ ಕೆಲಸವನ್ನು ತಡೆಯಬೇಡಿ, ಸಮಯಕ್ಕೆ ಸರಿಯಾಗಿ ಮಾಡಿ’ ಎಂದು ಮಾತ್ರ ಹೇಳಬಹುದು. ಈ ರೀತಿ ನ್ಯಾಯಾಲಯವು ಕಾರ್ಯಾಂಗದ ಅಧಿಕಾರವನ್ನು ಆಕ್ರಮಿಸಿಕೊಳ್ಳದೆ, ಕೇವಲ ಕಾನೂನು ರಚನಾ ಪ್ರಕ್ರಿಯೆಯನ್ನು ರಕ್ಷಿಸುವ ಸೀಮಿತ ಹಸ್ತಕ್ಷೇಪ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಹತ್ತು ದಿನಗಳ ಕಾಲ ಈ ಪ್ರಕರಣದ ವಿಚಾರಣೆ ನಡೆಸಿ ಸೆಪ್ಟೆಂಬರ್ 11ರಂದು ತನ್ನ ಅಭಿಪ್ರಾಯವನ್ನು ಕಾಯ್ದಿರಿಸಿತ್ತು.

ತಮಿಳುನಾಡು ರಾಜ್ಯಪಾಲರ ಪ್ರಕರಣದಲ್ಲಿ ಇಬ್ಬರು ನ್ಯಾಯಾಧೀಶರ ಪೀಠವು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮಸೂದೆಗಳ ಮೇಲೆ ನಿರ್ಧಾರ ತೆಗೆದುಕೊಳ್ಳಲು ಸಮಯ ಮಿತಿಯನ್ನು ನಿಗದಿಪಡಿಸಿ ತೀರ್ಪು ನೀಡಿದ ನಂತರ, ಮೇ ತಿಂಗಳಲ್ಲಿ ರಾಷ್ಟ್ರಪತಿ ಅಪರೂಪಕ್ಕೆ ಬಳಸಲಾಗುವ ಸಂವಿಧಾನದ ವಿಧಿ 143 (1) ರ ಅಡಿಯಲ್ಲಿ ತಮ್ಮ ಅಧಿಕಾರವನ್ನು ಚಲಾಯಿಸುತ್ತಾ, ಸುಪ್ರೀಂ ಕೋರ್ಟ್‌ಗೆ 14 ನಿರ್ಣಾಯಕ ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗಳಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದೆ.

Courtesy: livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...