Homeಮುಖಪುಟದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

ದೆಹಲಿ ಗಲಭೆ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಶಾರ್ಜೀಲ್ ಇಮಾಮ್ ಭಾಷಣದ ವಿಡಿಯೋ ತೋರಿಸಿದ ಪೊಲೀಸರು

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮುಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರ ಜಾಮೀನು ಅರ್ಜಿಗಳನ್ನು ವಿರೋಧಿಸಿ ದೆಹಲಿ ಪೊಲೀಸರು ಗುರುವಾರ (ನವೆಂಬರ್ 20) ತಮ್ಮ ವಾದ ಮಂಡನೆ ಮುಂದುವರೆಸಿದರು.

ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ವಾದ ಆಲಿಸಿತು.

ವಿಚಾರಣೆ ವೇಳೆ ದೆಹಲಿ ಪೊಲೀಸರ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರು ಶಾರ್ಜೀಲ್ ಇಮಾಮ್ ಮಾಡಿದ ಪ್ರಚೋದನಕಾರಿ ಎನ್ನಲಾದ ಭಾಷಣಗಳ ಕೆಲವು ವಿಡಿಯೋ ತುಣುಕುಗಳನ್ನು ನ್ಯಾಯಾಲಯದಲ್ಲಿ ತೋರಿಸಿದರು ಎಂದು ಲೈವ್ ಲಾ ವರದಿ ಮಾಡಿದೆ.
ವಿಡಿಯೋದಲ್ಲಿ, "ಭಾರತದ ಎಲ್ಲಾ ನಗರಗಳಲ್ಲಿ ಚಕ್ಕಾ-ಜಾಮ್ (ರಸ್ತೆ ತಡೆ) ಮಾಡಬೇಕು. ಮುಸ್ಲಿಮರು ಒಗ್ಗೂಡಿ, ಅಸ್ಸಾಂ ಮತ್ತು ಉತ್ತರ-ಈಶಾನ್ಯ ಭಾರತವನ್ನು ಮುಖ್ಯ ಭೂಭಾಗದಿಂದ ಬೇರ್ಪಡಿಸುವ 'ಚಿಕನ್ ನೆಕ್' (ಸಿಲಿಗುರಿ ಕಾರಿಡಾರ್) ಪ್ರದೇಶವನ್ನು ಬೇರ್ಪಡಿಸಬೇಕು. ದೆಹಲಿಗೆ ಅಗತ್ಯ ವಸ್ತುಗಳ ಸರಬರಾಜನ್ನು ತಡೆಯಬೇಕು. ಸರ್ಕಾರವನ್ನು ಸಂಪೂರ್ಣವಾಗಿ ಪ್ಯಾರಲೈಸ್ (ಕೆಲಸ ಮಾಡಲು ಬಿಡದಂತೆ) ಮಾಡಬೇಕು" ಈ ರೀತಿಯ ಹೇಳಿಕೆಗಳನ್ನು ಶಾರ್ಜೀಲ್ ಇಮಾಮ್ ನೀಡಿರುವುದು ವಿಡಿಯೋದಲ್ಲಿ ಇದೆ ಎಂದು ವರದಿ ಹೇಳಿದೆ.

ಭಾಷಣಗಳು ಸಾಕ್ಷ್ಯದ ಭಾಗವಾಗಿದೆಯೇ ಎಂದು ಪೀಠ ಕೇಳಿದಾಗ, ಹೆಚ್ಚುವರಿ ಸಾಲಿಸಿಟರ್ ಜನರಲ್ ಸಕಾರಾತ್ಮಕವಾಗಿ ಉತ್ತರಿಸಿದರು ಎಂದು ವರದಿ ತಿಳಿಸಿದೆ.

ಇಮಾಮ್ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ, ಈ ವಿಡಿಯೋಗಳಲ್ಲಿ ಭಾಷಣದ ಪೂರ್ಣ ಸಂದರ್ಭವನ್ನು ತೋರಿಸದೆ, ಕೇವಲ ಆಯ್ದ ಭಾಗಗಳನ್ನು ಮಾತ್ರ ತೋರಿಸಲಾಗಿದೆ (ಅಂದರೆ ಸಂಪೂರ್ಣ ಭಾಷಣವನ್ನು ತಿರುಚಿ ಅಥವಾ ತಪ್ಪು ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ) ಎಂದು ಹೇಳಿದ್ದಾರೆ.

ದೆಹಲಿ ಪ್ರೊಟೆಸ್ಟ್‌ ಸಪೋರ್ಟ್ ಗ್ರೂಪ್ (ಡಿಪಿಎಸ್‌ಜಿ), ಜಾಮಿಯಾ ಅವರ್ನೆಸ್ ಕ್ಯಾಂಪೇನ್ ಟೀಂ ಮುಂತಾದ ವಾಟ್ಸಾಪ್ ಗ್ರೂಪ್‌ಗಳಲ್ಲಿದ್ದ ಹಲವು ಸಂದೇಶಗಳನ್ನು ಉಲ್ಲೇಖಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್, “ಆರೋಪಿಗಳ ಉದ್ದೇಶವು ಸರ್ಕಾರವನ್ನು ಉರುಳಿಸುವುದು ಮತ್ತು ಹಿಂಸಾತ್ಮಕ ಗಲಭೆಗಳ ಮೂಲಕ ಆಡಳಿತ ಬದಲಾವಣೆ (ರೆಜೀಮ್ ಚೇಂಜ್) ತರುವುದಾಗಿತ್ತು. ಈ ಗಲಭೆಗಳನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಪ್ರವಾಸದೊಂದಿಗೆ ತಾದಾತ್ಮ್ಯವಾಗಿ (ಒಟ್ಟಿಗೆ ಸಂಭವಿಸುವಂತೆ) ಯೋಜಿಸಲಾಗಿತ್ತು” ಎಂದು ವಾದಿಸಿದ್ದಾರೆ.

“ಆರೋಪಿಗಳನ್ನು ಬುದ್ಧಿಜೀವಿಗಳು ಮತ್ತು ಹೋರಾಟಗಾರರ ವೇಷ ಧರಿಸಿರುವ ರಾಷ್ಟ್ರವಿರೋಧಿಗಳು ಮತ್ತು ಸಮಾಜದ ಸ್ವಾಸ್ಥ್ಯ ಕದಡುವವರು” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ.

“ಜಾಮೀನು ವಿಷಯ ಬಂದಾಗಲೆಲ್ಲಾ, ನ್ಯೂಯಾರ್ಕ್ ಟೈಮ್ಸ್ ಏನನ್ನಾದರೂ ಪ್ರಕಟಿಸುತ್ತದೆ. ಬುದ್ಧಿಜೀವಿಗಳು ಎಂಬ ಸೋಗಿನಲ್ಲಿ ಅವರು ದೇಶ ವಿರೋಧಿಗಳು ಎಂದು ಅರಿತುಕೊಳ್ಳದೆ ಸಾಮಾಜಿಕ ಮಾಧ್ಯಮಗಳು ಸಕ್ರಿಯವಾಗುತ್ತವೆ” ಹೆಚ್ಚುವರಿ ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕೆಲವು ಸಂರಕ್ಷಿತ ಸಾಕ್ಷಿಗಳ ಹೇಳಿಕೆಗಳನ್ನು ಕೂಡ ಹೆಚ್ಚುವರಿ ಸಾಲಿಸಿಟರ್ ಜನರಲ್ ಉಲ್ಲೇಖಿಸಿದ್ದಾರೆ, ಈ ವೇಳೆ ನ್ಯಾಯಾಧೀಶ ಕುಮಾರ್ ಅವರು ಜಾಮೀನು ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯವು ಸಾಕ್ಷ್ಯವನ್ನು ಮೌಲ್ಯಮಾಪನ ಮಾಡಬಹುದೇ ಎಂದು ಕೇಳಿದ್ದಾರೆ. ಆಗ, ಸಾಕ್ಷ್ಯಗಳ ನಿಖರತೆಯನ್ನು ನ್ಯಾಯಾಲಯ ಪರಿಶೀಲಿಸುವ ಅಗತ್ಯವಿಲ್ಲ ಎಂದ ಹೆಚ್ಚುವರಿ ಸಾಲಿಸಿಟರ್ ಜನರಲ್, ಪ್ರಕರಣಕ್ಕೆ ಪ್ರಾಥಮಿಕ ಪುರಾವೆಗಳಿವೆ ಎಂದು ತೋರಿಸುವುದು ಮಾತ್ರ ನನ್ನ ಪ್ರಯತ್ನವಾಗಿದೆ ಎಂದಿದ್ದಾರೆ.

ವಿಚಾರಣೆ ನಾಳೆ (ನವೆಂಬರ್ 21) ಮುಂದುವರಿಯಲಿದೆ ಎಂದು ಲೈವ್ ಲಾ ವರದಿ ತಿಳಿಸಿದೆ.

ಉಮರ್ ಖಾಲಿದ್‌ ಅವರನ್ನು ಸಹ ಆರೋಪಿಗಳಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಜೊತೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಕಾರಣ, ಯುಎಪಿಎ ಕಾಯ್ದೆಯ ತಪ್ಪಾದ ವ್ಯಾಖ್ಯಾನದ ಮೇಲೆ 2021ರಲ್ಲಿ ದೆಹಲಿ ಹೈಕೋರ್ಟ್ ಆ ಮೂವರಿಗೆ ಜಾಮೀನು ನೀಡಿದೆ ಎಂದು ದೆಹಲಿ ಪೊಲೀಸರು ಸೋಮವಾರ (ನವೆಂಬರ್ 17) ವಾದಿಸಿದ್ದರು.

ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಿಂದ ಮೊದಲು, ಸ್ವಲ್ಪ ಹೊತ್ತು ನ್ಯಾಯಪೀಠದ ಮುಂದೆ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಆರೋಪಿಗಳು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ದೇಶದ ಸಾರ್ವಭೌಮತ್ವದ ಮೇಲೆ ದಾಳಿ ಮಾಡುವಂತಹ ಪೂರ್ವ ಯೋಜಿತ ಪಿತೂರಿಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತವೆ ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....