Homeಮುಖಪುಟಐದು ಮಂದಿಯನ್ನು ವಿದೇಶಿಗರು ಎಂದ ಅಸ್ಸಾಂ ಸರ್ಕಾರ : 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ

ಐದು ಮಂದಿಯನ್ನು ವಿದೇಶಿಗರು ಎಂದ ಅಸ್ಸಾಂ ಸರ್ಕಾರ : 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ

- Advertisement -
- Advertisement -

ಅಸ್ಸಾಂನ ಸೋನಿತ್‌ಪುರ ಜಿಲ್ಲಾಡಳಿತವು ಬುಧವಾರ (ನವೆಂಬರ್ 19) ಐದು ಮಂದಿಯನ್ನು ವಿದೇಶಿಯರು ಎಂದು ಘೋಷಿಸಿದ್ದು, 24 ಗಂಟೆಯೊಳಗೆ ಭಾರತ ತೊರೆಯುವಂತೆ ಅವರಿಗೆ ಆದೇಶಿಸಿದೆ.

ಸೋನಿತ್‌ಪುರ ಜಿಲ್ಲೆಯ ಧೋಬೋಕಟಾ ಗ್ರಾಮದ ಐವರು ನಿವಾಸಿಗಳಾದ ಹನುಫಾ, ಮರಿಯಮ್ ನೆಸ್ಸಾ, ಫಾತೆಮಾ, ಮೊನೊವಾರಾ ಮತ್ತು ಅಮ್ಜದ್ ಅಲಿ, ಇವರಿಗೆ 1950ರ ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಡಿ ದೇಶ ತೊರೆಯಲು ಸೂಚಿಸಲಾಗಿದೆ.

ತಕ್ಷಣಕ್ಕೆ ಅಸ್ಸಾಂನಿಂದ ಹೊರ ಹೋಗುವಂತೆ ಆದೇಶಿಸಲಾಗಿದೆ. ಅವರು ಭಾರತೀಯ ಪ್ರಜೆಗಳಲ್ಲ ಎಂಬ ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ಹಾಗಾಗಿ, ಅವರು ದೇಶದ ಇತರ ರಾಜ್ಯಗಳಲ್ಲೂ ವಾಸಿಸಲು ಸಮಸ್ಯೆಯಾಗಲಿದೆ. ಭಾರತ ತೊರೆಯುವ ಆಯ್ಕೆ ಮಾತ್ರ ಉಳಿದಿದೆ.

ಅಸ್ಸಾಂ ಸಚಿವ ಸಂಪುಟ 2025ರ ಸೆಪ್ಟೆಂಬರ್ 9ರಂದು 1950ರ ಅಸ್ಸಾಂ ವಲಸಿಗರ ಗಡಿಪಾರು ಕಾಯ್ದೆಯಡಿಯಲ್ಲಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (ಎಸ್‌ಒಪಿ) ರೂಪಿಸಲು ಅನುಮೋದನೆ ನೀಡಿದೆ. ಇದು ವಿದೇಶಿಯರ ನ್ಯಾಯಮಂಡಳಿಗಳನ್ನು ಬೈಪಾಸ್ ಮಾಡುವ ಮೂಲಕ ರಾಜ್ಯದಿಂದ ‘ಅಕ್ರಮ ವಲಸಿಗರನ್ನು’ ಹೊರಹಾಕಲು ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಇದಕ್ಕೂ ಮೊದಲು, ದಾಖಲೆರಹಿತ ವಲಸಿಗರಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿದೇಶಿಯರ ನ್ಯಾಯಮಂಡಳಿಗಳು ನಿರ್ವಹಿಸುತ್ತಿದ್ದವು.

1950ರ ಕಾಯ್ದೆಯನ್ನು ಬಳಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಮೋದಿಸಲಾಗಿದೆ. ವಿದೇಶಿಯರ ನ್ಯಾಯಮಂಡಳಿಗಳ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದರು.

“ಘೋಷಿತ ವಿದೇಶಿಯರಾಗಿರುವುದರಿಂದ, ಭಾರತ/ಅಸ್ಸಾಂನಲ್ಲಿ ನಿಮ್ಮ ಉಪಸ್ಥಿತಿಯು ಸಾರ್ವಜನಿಕರ ಹಿತಾಸಕ್ತಿಗೆ ಮತ್ತು ರಾಜ್ಯದ ಆಂತರಿಕ ಭದ್ರತೆಗೆ ಹಾನಿಕಾರಕವಾಗಿದೆ” ಎಂದು ಮಂಗಳವಾರ (ನವೆಂಬರ್ 18) ಹೊರಡಿಸಲಾದ ನೋಟಿಸ್‌ನಲ್ಲಿ ಸೋನಿತ್‌ಪುರ ಜಿಲ್ಲಾಧಿಕಾರಿ ಆನಂದ ಕುಮಾರ್ ದಾಸ್ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

2006ರಲ್ಲಿ ತೇಜ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಗಡಿ) ದಾಖಲಿಸಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಸೋನಿತ್‌ಪುರ ವಿದೇಶಿಯರ ನ್ಯಾಯಮಂಡಳಿ ಅಕ್ಟೋಬರ್ 24ರಂದು ಈ ಐವರು ವ್ಯಕ್ತಿಗಳನ್ನು ವಿದೇಶಿ ಪ್ರಜೆಗಳೆಂದು ಘೋಷಿಸಿತ್ತು.

ಧುಬ್ರಿ, ಶ್ರೀಭೂಮಿ ಅಥವಾ ದಕ್ಷಿಣ ಸಲ್ಮಾರಾ-ಮಂಕಚಾರ್ ಮಾರ್ಗಗಳ ಮೂಲಕ ರಾಜ್ಯವನ್ನು ತೊರೆಯುವಂತೆ ಜಿಲ್ಲಾಧಿಕಾರಿ ಆನಂದ ಕುಮಾರ್ ದಾಸ್ ಐದು ಮಂದಿಗೂ ನಿರ್ದೇಶಿಸಿದ್ದಾರೆ.

ಮತದಾರರ ಪಟ್ಟಿಯಿಂದ ಐದು ಮಂದಿಯ ಹೆಸರುಗಳನ್ನು ಅಳಿಸಲು, ಅವರ ಪಡಿತರ ಚೀಟಿಗಳನ್ನು ರದ್ದುಗೊಳಿಸಲು, ಆಧಾರ್ ಕಾರ್ಡ್‌ಗಳನ್ನು ಸ್ಥಗಿತಗೊಳಿಸಲು ಅಥವಾ ರದ್ದುಗೊಳಿಸಲು ಮತ್ತು ಎಲ್ಲಾ ಸರ್ಕಾರಿ ಯೋಜನೆಗಳಿಂದ ಅವರನ್ನು ತೆಗೆದುಹಾಕಲು ನೋಟಿಸ್‌ನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಆದೇಶ ಪಾಲಿಸರು ಐವರು ವಿಫಲವಾದರೆ, 1950ರ ಕಾಯ್ದೆಯಡಿಯಲ್ಲಿ ಅವರನ್ನು ಅಸ್ಸಾಂನಿಂದ ಹೊರಹಾಕಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುವ ಅರೆ-ನ್ಯಾಯಾಂಗ ಸಂಸ್ಥೆಗಳಾಗಿವೆ. ಆದಾಗ್ಯೂ, ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗುತ್ತಿದೆ.

ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಕಾರ, ಒಬ್ಬ ವ್ಯಕ್ತಿಯು ‘ಅಕ್ರಮ ವಲಸಿಗ’ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಥವಾ ಇತರ ಮೂಲಗಳಿಂದ ಜಿಲ್ಲಾಧಿಕಾರಿಗೆ ಮಾಹಿತಿ ಬಂದರೆ, ಅಧಿಕಾರಿಯು 10 ದಿನಗಳಲ್ಲಿ ಆ ವ್ಯಕ್ತಿಗೆ ತನ್ನ ಪೌರತ್ವದ ಪುರಾವೆಗಳನ್ನು ಒದಗಿಸುವಂತೆ ನಿರ್ದೇಶಿಸಬೇಕು.

ಸಲ್ಲಿಸಿದ ಪುರಾವೆಗಳು ತೃಪ್ತಿಕರವಾಗಿಲ್ಲ ಎಂದು ಜಿಲ್ಲಾಧಿಕಾರಿ ಕಂಡುಕೊಂಡರೆ, ಅವರು 1950ರ ಕಾಯ್ದೆಯನ್ನು ಅನ್ವಯಿಸುವ ಮೂಲಕ, ದಾಖಲೆರಹಿತ ವಲಸಿಗರನ್ನು ಅಸ್ಸಾಂನಿಂದ 24 ಗಂಟೆಗಳ ಕಾಲಾವಕಾಶ ನೀಡುವ ಮೂಲಕ ಮತ್ತು ನಿರ್ದಿಷ್ಟಪಡಿಸಿದ ಮಾರ್ಗದ ಮೂಲಕ ಹೊರದಬ್ಬುವ ಆದೇಶವನ್ನು ಹೊರಡಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...