Homeಮುಖಪುಟಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

ಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

- Advertisement -
- Advertisement -

ದೆಹಲಿಯ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಆತ ಬರೆದಿರುವ ಡೆತ್‌ ನೋಟ್‌ನಲ್ಲಿ ಶಿಕ್ಷಕರಿಂದ ದೌರ್ಜನ್ಯದ ಆರೋಪ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.

ವಿದ್ಯಾರ್ಥಿಯ ತಂದೆ ನೀಡಿರುವ ದೂರಿನಲ್ಲಿ, ತನ್ನ ಮಗ ಹಲವು ಶಿಕ್ಷಕರ ನಿರಂತರ ಕಿರುಕುಳದಿಂದಾಗಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮೃತ ಬಾಲಕ ಶಿಕ್ಷಕರ ದೌರ್ಜನ್ಯದ ಬಗ್ಗೆ ತನ್ನ ಪೋಷಕರಿಗೆ ಹಲವು ಬಾರಿ ಹೇಳಿಕೊಂಡಿದ್ದ. ಪೋಷಕರು ಕೂಡ
ಶಾಲಾ ಸಿಬ್ಬಂದಿ ಮತ್ತು ಪ್ರಾಂಶುಪಾಲರಿಗೆ ಮೌಖಿಕ ದೂರುಗಳನ್ನು ನೀಡಿದ್ದರು. ಆದರೂ, ಶಿಕ್ಷಕರ ಕಿರುಕುಳ ಮುಂದುವರೆದಿತ್ತು ಎಂದು ಹೇಳಲಾಗ್ತಿದೆ.

ಬಾಲಕ ಸಾವನ್ನಪ್ಪಿದ ಬಳಿಕ ಆತನ ಶಾಲಾ ಬ್ಯಾಗ್‌ನಲ್ಲಿ ಡೆತ್ ನೋಟ್‌ ಸಿಕ್ಕಿದೆ. ಅದರಲ್ಲಿ ಆತ ತನ್ನ ಕುಟುಂಬಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸಿ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾನೆ. “ನಾನು ಹೀಗೆ ಮಾಡಿದ್ದಕ್ಕೆ ನನಗೆ ತುಂಬಾ ವಿಷಾದವಿದೆ, ಆದರೆ ಶಾಲಾ ಸಿಬ್ಬಂದಿ ನಾನು ಹೀಗೆ ಮಾಡಿಕೊಳ್ಳುವಂತೆ ಮಾಡಿದರು. ನನಗೆ ಆಗಿರುವುದು ಬೇರೆ ಯಾವ ವಿದ್ಯಾರ್ಥಿಗೂ ಆಗಬಾರದು. ಆ ರೀತಿ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳಬೇಕು. ಇದೇ ನನ್ನ ಕೊನೆಯಾಸೆ. ನನ್ನ ಅಂಗಾಂಗಗಳನ್ನು ದಾನ ಮಾಡಿ. ನನ್ನಿಂದ ಉಂಟಾದ ನೋವಿಗೆ ಪೋಷಕರು ಮತ್ತು ಸಹೋದರನಲ್ಲಿ ಕ್ಷಮೆಯಾಚಿಸುತ್ತೇನೆ” ಎಂದು ಬರೆದಿದ್ದಾನೆ ಎಂದು ವರದಿಗಳು ವಿವರಿಸಿವೆ.

ಸಣ್ಣಪುಟ್ಟ ವಿಷಯಗಳಿಗೂ ಶಿಕ್ಷಕರು ತನ್ನನ್ನು ಬೈಯುತ್ತಿದ್ದರು, ಅವಮಾನಿಸುತ್ತಿದ್ದರು ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಮಗ ಆಗಾಗ ಹೇಳಿಕೊಳ್ಳುತ್ತಿದ್ದ ಎಂದು ಮೃತನ ಪೋಷಕರು ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ನವೆಂಬರ್ 18ರಂದು, ತಂದೆ ಹೊರಗೆ ಹೋದಾಗ ಬಾಲಕ ಶಾಲೆಗೆ ಹೊರಟು ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಹಳಿಗೆ ಹಾರಿದ್ದಾನೆ ಎಂದು ವರದಿ ಹೇಳಿದೆ.

ಘಟನೆಯ ನಂತರ, ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿಯು ಈ ಸಾವಿನ ಹೊಣೆ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಬೇರೆ ಯಾವುದೇ ಮಗುವೂ ಈ ರೀತಿಯ ಕಿರುಕುಳ ಎದುರಿಸದಂತೆ ನೋಡಿಕೊಳ್ಳಲು, ತಪ್ಪಿತಸ್ಥರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಾಲಕನ ಕುಟುಂಬವು ಅಧಿಕಾರಿಗಳನ್ನು ಒತ್ತಾಯಿಸಿದೆ.

ವಿದ್ಯಾರ್ಥಿಯ ಸಾವಿಗೆ ಕಾರಣವಾದ ಕಿರುಕುಳ ಮತ್ತು ಸಂದರ್ಭಗಳ ಮೇಲೆ ಕೇಂದ್ರೀಕರಿಸಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...