Homeಮುಖಪುಟಶಾಸಕ ಬಂದಾಗ ಎದ್ದು ನಿಲ್ಲದ ವೈದ್ಯನ ವಿರುದ್ಧ ಕ್ರಮ : ಸರ್ಕಾರಕ್ಕೆ ಛೀಮಾರಿ ಹಾಕಿದ ಕೋರ್ಟ್,...

ಶಾಸಕ ಬಂದಾಗ ಎದ್ದು ನಿಲ್ಲದ ವೈದ್ಯನ ವಿರುದ್ಧ ಕ್ರಮ : ಸರ್ಕಾರಕ್ಕೆ ಛೀಮಾರಿ ಹಾಕಿದ ಕೋರ್ಟ್, 50 ಸಾವಿರ ದಂಡ

- Advertisement -
- Advertisement -

ಆಸ್ಪತ್ರೆಯ ತುರ್ತು ವಾರ್ಡ್‌ಗೆ ಶಾಸಕ ಬಂದಾಗ ಎದ್ದು ನಿಂತಿಲ್ಲ ಎಂಬ ಕಾರಣಕ್ಕೆ ಕೋವಿಡ್ ಕರ್ತವ್ಯದಲ್ಲಿದ್ದ ವೈದ್ಯನ ವಿರುದ್ದ ಕ್ರಮ ಕೈಗೊಂಡಿರುವ ಹರಿಯಾಣ ಸರ್ಕಾರವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶುಕ್ರವಾರ (ನವೆಂಬರ್ 21) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರದ ವರ್ತನೆ ಸಂವೇದನಾರಹಿತ ಮತ್ತು ಅತ್ಯಂತ ಕಳವಳಕಾರಿ ಎಂದು ಟೀಕಿಸಿದೆ.

ವೈದ್ಯಕೀಯ ವೃತ್ತಿಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ವೈದ್ಯರನ್ನು ದುರ್ಬಳಕೆ ಮಾಡುವಂತಹ ಅನಗತ್ಯ ಮತ್ತು ಅಹಿತಕರ ಕೃತ್ಯಗಳು ನಡೆಯಬಾರದು, ಅವುಗಳನ್ನು ತಡೆಯಬೇಕು ಎಂದು ನ್ಯಾಯಮೂರ್ತಿಗಳಾದ ಅಶ್ವನಿ ಕುಮಾರ್ ಮಿಶ್ರಾ ಮತ್ತು ರೋಹಿತ್ ಕಪೂರ್ ಅವರಿದ್ದ ದ್ವಿಸದಸ್ಯ ಪೀಠ ಹೇಳಿದೆ.

ಅರ್ಜಿದಾರ ವೈದ್ಯನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗೆ ಅಗತ್ಯವಿರುವ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡುವಂತೆ ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸರ್ಕಾರಕ್ಕೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

ಅರ್ಜಿದಾರರಾದ ಡಾ. ಮನೋಜ್ ಅವರು ಹರಿಯಾಣ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತಿದ್ದ ಅಪಘಾತ ವೈದ್ಯಕೀಯ ಅಧಿಕಾರಿಯಾಗಿದ್ದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ, ಅವರು ಸರ್ಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯದಲ್ಲಿದ್ದರು. ಆಸ್ಪತ್ರೆಗೆ ಶಾಸಕರೊಬ್ಬರು ಭೇಟಿ ನೀಡಿದಾಗ ಡಾ. ಮನೋಜ್ ಅವರು ಎದ್ದು ನಿಂತಿಲ್ಲ ಎಂಬ ಕಾರಣಕ್ಕೆ ಶಾಸಕ ಸಿಟ್ಟಾಗಿದ್ದರು.

ಇದಾದ ಬಳಿಕ, ಹರಿಯಾಣ ನಾಗರಿಕ ಸೇವೆಗಳ (ಶಿಕ್ಷೆ ಮತ್ತು ಮೇಲ್ಮನವಿ) ನಿಯಮಗಳು, 2016ರ ನಿಯಮ 8ರ ಅಡಿಯಲ್ಲಿ ಡಾ. ಮನೋಜ್ ಅವರಿಗೆ ಸರ್ಕಾರ ಕಾರಣ ಕೇಳಿ (ಶೋ-ಕಾಸ್) ನೋಟಿಸ್ ಜಾರಿ ಮಾಡಿತ್ತು.

ಅದಕ್ಕೆ ಮನೋಜ್ ಅವರು ಜೂನ್ 2024ರಲ್ಲಿ ಉತ್ತರಿಸಿದ್ದರು. “ನನಗೆ ಬಂದಿದ್ದು ಶಾಸಕ ಎಂದು ಗೊತ್ತಿರಲಿಲ್ಲ. ಹಾಗಾಗಿ ಎದ್ದು ನಿಂತಿರಲಿಲ್ಲ, ಉದ್ದೇಶಪೂರ್ವಕವಾಗಿ ಅಗೌರವ ತೋರಿಲ್ಲ. ಹಾಗಾಗಿ, ಅದು ಅಗೌರವಕ್ಕೆ ಸಮನಾಗುವುದಿಲ್ಲ” ಎಂದು ಮನೋಜ್ ಹೇಳಿದ್ದರು.

ಆ ಬಳಿಕ ಸರ್ಕಾರ ಯಾವುದೇ ಆದೇಶ ಹೊರಡಿಸಿರಲಿಲ್ಲ. ಆದರೆ, ಶೋಕಾಸ್ ನೋಟಿಸ್ ಪ್ರಕ್ರಿಯೆ ಬಾಕಿ ಉಳಿಸಿಕೊಂಡಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಮನೋಜ್ ಅವರ ಉನ್ನತ ಶಿಕ್ಷಣಕ್ಕೆ ಎನ್‌ಒಸಿ ನೀಡಿರಲಿಲ್ಲ ಎನ್ನಲಾಗಿದೆ.

ಕೋವಿಡ್-19 ಸಮಯದಲ್ಲಿ ತುರ್ತು ಕರ್ತವ್ಯದಲ್ಲಿದ್ದ ಸರ್ಕಾರಿ ವೈದ್ಯರೊಬ್ಬರು, ಶಾಸಕರು ಬಂದಾಗ ಎದ್ದು ನಿಲ್ಲಲಿಲ್ಲ ಎಂಬ ಏಕೈಕ ಕಾರಣಕ್ಕೆ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ನೋಡಿ ನಮಗೆ ತೀವ್ರ ನೋವು ಮತ್ತು ಆಘಾತವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಶಾಸಕರೊಬ್ಬರು ಆಸ್ಪತ್ರೆಯ ತುರ್ತು ವಿಭಾಗಕ್ಕೆ ಪ್ರವೇಶಿಸಿದಾಗ ವೈದ್ಯರು ಎದ್ದು ನಿಲ್ಲುತ್ತಾರೆಂದು ನಿರೀಕ್ಷಿಸುವುದು ಮತ್ತು ಅವರು ಎದ್ದು ನಿಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲು ಪ್ರಸ್ತಾಪಿಸುವುದು ತುಂಬಾ ಬೇಸರದ ಸಂಗತಿ ಎಂದಿದೆ.

ಅರ್ಜಿದಾರ ವೈದ್ಯರು ನೀಡಿದ ವಿವರಣೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅವರಿಗೆ ಬಂದಿರುವುದು ಶಾಸಕ ಎಂಬುವುದು ಗೊತ್ತಿರಲಿಲ್ಲ ಮತ್ತು ಉದ್ದೇಶಪೂರ್ವಕವಾಗಿ ಅಗೌರವ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ನವೆಂಬರ್ 21ರ ಆದೇಶದಲ್ಲಿ ನ್ಯಾಯಾಲಯ ಹೇಳಿದೆ.

ನಮ್ಮ ಅಭಿಪ್ರಾಯದಲ್ಲಿ, ಇಂತಹ ಆರೋಪದಡಿಯಲ್ಲಿ (ಎದ್ದು ನಿಂತಿಲ್ಲ) ಅರ್ಜಿದಾರನ ವಿರುದ್ಧ ಕ್ರಮ ಕೈಗೊಳ್ಳುವುದು ರಾಜ್ಯ ಸರ್ಕಾರದಿಂದ ಸಂವೇದನಾರಹಿತ ಮತ್ತು ಅಮಾನವೀಯ ಕ್ರಮವಾಗಿದೆ. ಅದೇ ರೀತಿ, ಶೋಕಾಸ್ ನೋಟಿಸ್ ಬಾಕಿ ಇದೆ ಎಂಬ ಏಕೈಕ ಕಾರಣಕ್ಕೆ ಎನ್‌ಒಸಿ ನೀಡದೆ ಅವರು ಉನ್ನತ ವೈದ್ಯಕೀಯ ಶಿಕ್ಷಣ ಪಡೆಯುವ ಹಕ್ಕನ್ನು ತಡೆಯುವುದು ಕೂಡ ಅತ್ಯಂತ ಅನ್ಯಾಯದ ಕ್ರಮವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವೈದ್ಯಕೀಯ ಶಿಕ್ಷಣ ಪಡೆಯುವುದು ಕಠಿಣ ಸವಾಲು ಎಂದು ಒತ್ತಿ ಹೇಳಿದ ನ್ಯಾಯಾಲಯ, ಎಂಬಿಬಿಎಸ್ ಕೋರ್ಸ್‌ಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಬೇಕು ಎಂದಿದೆ.

ವೈದ್ಯಕೀಯ ಕೋರ್ಸ್‌ಗಳಿಗೆ ದೀರ್ಘಾವಧಿಯವರೆಗೆ ಆಳವಾದ ಸಮರ್ಪಣೆ ಮತ್ತು ಬದ್ಧತೆಯ ಅಗತ್ಯವಿರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಎಂಬಿಬಿಎಸ್ ಮುಗಿಸಿ ಸರ್ಕಾರಿ ಸೇವೆಗೆ ಸೇರಿದ ನಂತರ, ವೈದ್ಯರು ಜನಸಾಮಾನ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕಾಗುತ್ತದೆ. ಸಾರ್ವಜನಿಕ ಪ್ರತಿನಿಧಿಗಳು ಮತ್ತು ಜವಾಬ್ದಾರಿಯುತ ಇತರರು ಅಂತಹ ಸಮರ್ಪಿತ ವೃತ್ತಿಪರರಿಗೆ ಗೌರವ ಮತ್ತು ಮೂಲಭೂತ ಸೌಜನ್ಯಗಳನ್ನು ನೀಡಬೇಕು ಎಂದು ನ್ಯಾಯಾಲಯ ತಿಳಿಸಿದೆ.

ರೋಗಿಗಳ ಸಂಬಂಧಿಕರು ಅಥವಾ ಸಾರ್ವಜನಿಕ ಪ್ರತಿನಿಧಿಗಳು ಸರಿಯಾದ ಕಾರಣವಿಲ್ಲದೆ ಸಮರ್ಪಿತ ವೈದ್ಯಕೀಯ ವೃತ್ತಿಪರರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂಬ ವರದಿಗಳು ಪತ್ರಿಕೆಗಳಲ್ಲಿ ಆಗಾಗ್ಗೆ ಪ್ರಕಟವಾಗುವುದನ್ನು ನಾವು ಬೇಸರದಿಂದ ನೋಡಿದ್ದೇವೆ. ಅಂತಹ ಅನಪೇಕ್ಷಿತ ಘಟನೆಗಳನ್ನು ಪರಿಶೀಲಿಸುವ ಮತ್ತು ಪ್ರಾಮಾಣಿಕ ವೈದ್ಯಕೀಯ ವೃತ್ತಿಪರರಿಗೆ ಸೂಕ್ತ ಮನ್ನಣೆ ನೀಡುವ ಸಮಯ ಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ಶಾಸಕ ಬಂದಾಗ ವೈದ್ಯ ಎದ್ದು ನಿಲ್ಲಲಿಲ್ಲ ಎಂಬ ಕಾರಣಕ್ಕೆ ಅವರ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳಲು ಅವಕಾಶ ನೀಡುವುದು ಸಂಪೂರ್ಣ ಅನ್ಯಾಯ ಮತ್ತು ಸ್ಪಷ್ಟವಾಗಿ ಅನಿಯಂತ್ರಿತವಾಗುತ್ತದೆ ಎಂದು ಪೀಠ ಹೇಳಿದೆ. ಶೋಕಾಸ್ ನೋಟಿಸ್‌ನಂತಹ ಪ್ರಕ್ರಿಯೆಗಳನ್ನು ವರ್ಷಗಳ ಕಾಲ ಬಾಕಿ ಇಡುವುದು ಮತ್ತು ಅದನ್ನೇ ನೆಪವಾಗಿಸಿ ಎನ್‌ಒಸಿ ನಿರಾಕರಿಸುವುದು ಸಮರ್ಥನೀಯವಲ್ಲ ಎಂದಿದೆ.

ಆದ್ದರಿಂದ, ಅರ್ಜಿದಾರರಿಗೆ (ವೈದ್ಯನಿಗೆ) ತಕ್ಷಣವೇ ಎನ್‌ಒಸಿ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ, ಜೊತೆಗೆ ರಾಜ್ಯ ಸರ್ಕಾರ ರೂ. 50,000 ದಂಡವನ್ನು ಚಂಡೀಗಢದಲ್ಲಿರುವ ಪಿಜಿಐಎಂಇಎರ್‌ ಸಂಸ್ಥೆಯ ಬಡ ರೋಗಿಗಳ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಬೇಕು ಎಂದು ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...