Homeಮುಖಪುಟ‘ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಬಲಿ ಆಗುತ್ತಿರುವವರೆಲ್ಲಾ ಹಿಂದುಳಿದ ಜಾತಿ-ವರ್ಗಗಳವರೇ’: ಕೆ.ವಿ. ಪ್ರಭಾಕರ್ ಬೇಸರ

‘ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಬಲಿ ಆಗುತ್ತಿರುವವರೆಲ್ಲಾ ಹಿಂದುಳಿದ ಜಾತಿ-ವರ್ಗಗಳವರೇ’: ಕೆ.ವಿ. ಪ್ರಭಾಕರ್ ಬೇಸರ

- Advertisement -
- Advertisement -

ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ, ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ ಪ್ರದಾನ ಮಾಡಿ, ಐದು ಸಾಧಕರಿಗೆ ಗೌರವಿಸಿ ಅವರು ಮಾತನಾಡಿದರು. 

ಈ ವೇಳೆ ದಿನೇ ದಿನೇ ಜಾತಿ ವ್ಯವಸ್ಥೆ ಗಟ್ಟಿಗೊಳ್ಳುತ್ತಾ, ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿರುವ ಹೊತ್ತಿನಲ್ಲಿ, ನಾರಾಯಣ ಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶೋಷಿಸುವ ಮನಸ್ಥಿತಿ: 

ಶೋಷಣೆಗೆ ಒಳಗಾಗುವ ಮನಸ್ಥಿತಿ, ಗುಲಾಮಗಿರಿಯ ಮನಸ್ಥಿತಿಗೆ ನಾರಾಯಣಗುರುಗಳು ನೈಸರ್ಗಿಕ ಚಿಕಿತ್ಸೆ ಕೊಡಲು ಯತ್ನಿಸಿದರು. ಅವರ ಬೋಧನೆಗಳು ಮತ್ತು ಸುಧಾರಣಾ ಕಾರ್ಯಗಳು ಅವತ್ತಿನ‌ ಮತ್ತು ಇವತ್ತಿನ ಹಲವು ಸಾಮಾಜಿಕ ಸಮಸ್ಯೆಗಳಿಗೆ ದಾರಿದೀಪವಾಗಿವೆ ಎಂದರು. 

ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎನ್ನುವುದು ಅವರ ಪ್ರಸಿದ್ಧ ಘೋಷಣೆಯಾಗಿತ್ತು.‌ ಹಾಗೆಯೇ, ಶಿಕ್ಷಣದಿಂದ ಸ್ವಾತಂತ್ರ್ಯವನ್ನು ಗಳಿಸಿ ಎನ್ನುವುದು ಅವರ ಪ್ರಮುಖ ಕರೆಯಾಗಿತ್ತು. 

ಇಂದು ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಧರ್ಮದ ಹೆಸರಲ್ಲಿ ತಮ್ಮ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವವರೆಲ್ಲಾ ಬಿಲ್ಲವ, ಈಳವ ಮತ್ತು ಈಡಿಗ, ಬೆಸ್ತ ಸಮುದಾಯಗಳ ಮಕ್ಕಳೇ ಆಗಿದ್ದಾರೆ. ಇವರಿಗೆ ನಾರಾಯಣಗುರುಗಳ ಬದುಕಿನ ಪಾಠವನ್ನು ಅರ್ಥ ಮಾಡಿಸಬೇಕಾದ ತುರ್ತು ಇದೆ.

ಆದರೆ, ನಾರಾಯಣ ಗುರುಗಳ ಮಾತುಗಳಿಂದ ಅವರ ಆದರ್ಶಗಳನ್ನು ಅಳಿಸಿ, ಕೇವಲ ಮಾತುಗಳನ್ನು ಅಪಾರ್ಥವಾಗಿ ಬಳಸುವ ಪರಿಪಾಠ ಶುರುವಾಗಿರುವುದು ಬೇಸರದ ಸಂಗತಿಯಾಗಿದೆ.

ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎಂದು ಗುರುಗಳು ಕರೆ ಕೊಟ್ಟಿದ್ದರ ಅರ್ಥ ಎಲ್ಲರೂ ನಾರಾಯಣಗುರುಗಳ ಹೆಸರಲ್ಲಿ ಒಂದೊಂದು ದೇವಸ್ಥಾನ ಕಟ್ಟಿ ಅನ್ನುವುದಾಗಿರಲಿಲ್ಲ. ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಪ್ರವೇಶ ಪಡೆಯಲು ಒದ್ದಾಡುವುದಕ್ಕಿಂತ ನಿಮ್ಮದೇ ದೇವರ ಗುಡಿಯನ್ನು ಸೃಷ್ಟಿಸಿಕೊಳ್ಳಿ ಎನ್ನುವುದಾಗಿತ್ತು. 

ನಾರಾಯಣ ಗುರುಗಳು ಶಿವನ ಪ್ರತಿಷ್ಠಾಪನೆ ಮಾಡಿದಾಗ ಜಾತಿವಾದಿಗಳಿಂದ ಬಂದ ವಿರೋಧಕ್ಕೆ ತಣ್ಣಗೆ ಪ್ರತಿಕ್ರಿಯಿಸಿದ್ದ ಗುರುಗಳು, “ಇದು ನಿಮ್ಮ ಶಿವ ಅಲ್ಲ, ಈಳವರ ಶಿವ” ಎಂದು ಅವರ ಬಾಯಿ ಮುಚ್ಚಿಸಿದ್ದರು.

ಬಳಿಕ‌ ಎಲ್ಲರೂ ದೇವಸ್ಥಾನಗಳನ್ನೇ ಕಟ್ಟಲು ಮುಂದಾದಾಗ ಹೆದರಿದ ಗುರುಗಳು ಕೊನೆಗೆ ದೇವಸ್ಥಾನ ಕಟ್ಟಿ ಶಿವನ ಬದಲಿಗೆ ಕನ್ನಡಿಯನ್ನು ಪ್ರತಿಷ್ಠಾಪಿಸಿ ದೇವರು ನಿಮ್ಮೊಳಗೇ ಇದ್ದಾನೆ, ಹೊರಗೆ ಹುಡುಕುವ ಅಗತ್ಯ ಇಲ್ಲ ಎನ್ನುವ ಸಂದೇಶ ನೀಡಿದ್ದರು ಎಂದು ವಿವರಿಸಿದರು. 

ದೇವಸ್ಥಾನಗಳನ್ನು ಕಟ್ಟಿ ಕೆಳ ಜಾತಿಯ ಅರ್ಚಕರುಗಳನ್ನು ನೇಮಿಸಿದ್ದು ನಾರಾಯಣಗುರುಗಳ ಮತ್ತೊಂದು ಕ್ರಾಂತಿಯಾಗಿತ್ತು. 

ಆದರೆ ಎಷ್ಟು ಮಂದಿ ಹಿಂದುಳಿದವರು ಇಂದು ಕೆಳ ಜಾತಿಯ ಅರ್ಚಕರನ್ನು ಕರೆಸುತ್ತಾರೆ, ನಂಬುತ್ತಾರೆ ಎನ್ನುವುದನ್ನು ಪ್ರಶ್ನಿಸಬೇಕಿದೆ ಎಂದರು. 

ನಾರಾಯಣಗುರುಗಳು ಶಿಕ್ಷಣದ ಮೂಲಕ ಸ್ವಾತಂತ್ರ್ಯ ಗಳಿಸಿ ಎಂದು ಕರೆ ನೀಡುವುದರ ಹಿಂದೆ ಶಾಲಾ ಶಿಕ್ಷಣದ ಜೊತೆಗೆ ಸಾಮಾಜಿಕ‌ ಶಿಕ್ಷಣವನ್ನೂ ಪಡೆಯುವ ಮೂಲಕ ಶೋಷಕ, ಶೋಷಿತ ಮತ್ತು ಗುಲಾಮಗಿರಿ ಮನಸ್ಥಿತಿಯಿಂದ ಮುಕ್ತಿ ಹೊಂದಿ ಎನ್ನುವುದಾಗಿತ್ತು. 

ಆದರ್ಶಗಳನ್ನು ಅಳಿಸಿ ಕೇವಲ ಮಾತುಗಳಿಗೆ ಮಾತ್ರ ಮಾನ್ಯತೆ ನೀಡಿದರೆ ಅಪಾರ್ಥದ ಆಚರಣೆಗಳಿಗೆ ದಾರಿ ಮಾಡಿ ಕೊಡುತ್ತದೆ. 

ಅಂಬೇಡ್ಕರ್, ನಾರಾಯಣಗುರುಗಳು ಮೀಸಲಾತಿಯನ್ನು ಜಾತ್ಯತೀತ ಸಮಾಜ ನಿರ್ಮಾಣದ ಭಾಗವಾಗಿ ಬೆಂಬಲಿಸಿದ್ದರು. 

ಆದರೆ ಇಂದು ಮೀಸಲಾತಿ ಚಳವಳಿ ಜಾತೀಯತೆಯ ಭಾಗವಾಗಿ ನಡೆಯುತ್ತಿದೆ. ಎಲ್ಲಾ ಜಾತಿಯವರಿಗೂ ಮೀಸಲಾತಿ, ಒಳ ಮೀಸಲಾತಿ ಬೇಕಾಗಿದೆ. ಹೀಗಾಗಿ ಇಂದು ಮೀಸಲಾತಿಯ ಹೋರಾಟ ಜಾತಿ ಸಮಾಜವನ್ನು ಗಟ್ಟಿಗೊಳಿಸುವ ಭಾಗವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗಲೂ ಒಂದು ಮಾತು ಹೇಳ್ತಾರೆ. “ಶಿಕ್ಷಣ ಪಡೆದವರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿದ್ದಾರೆ ಎನ್ನುವ ಮಾತನ್ನು ಪದೇ ಪದೇ ಹೇಳುತ್ತಾರೆ.

ಈ ಎಲ್ಲಾ ಕಾರಣಗಳಿಂದ ಇಂದು ಜಾತ್ಯಾತೀತತೆಯ ಮಾರ್ಯಾದಾ ಹತ್ಯೆ ನಡೆಯುತ್ತಿದೆ. ಜಾತಿ ಜಾತಿಯವರನ್ನೇ ಸುತ್ತ ತುಂಬಿಕೊಂಡು ಓಡಾಡುವುದೇ ದೊಡ್ಡ ಶಕ್ತಿ ಅನ್ನಿಸಿಕೊಳ್ಳುವ ದುರಂತದ ಸಾಮಾಜಿಕ, ರಾಜಕೀಯ ಸಂದರ್ಭವನ್ನು ನಾವು ನೋಡುತ್ತಿದ್ದೇವೆ ಎಂದರು. 

ಆದ್ದರಿಂದ ಧಾರ್ಮಿಕ ಸಹಿಷ್ಣುತೆ ಮತ್ತು ವಿಶ್ವಬಂಧುತ್ವವನ್ನು ಆಚರಿಸುವ ಮೂಲಕ ನಾರಾಯಣಗುರುಗಳ ಆದರ್ಶಗಳಿಗೆ ನಾವು ಚೈತನ್ಯ ತುಂಬಬೇಕಿದೆ ಎಂದರು.

ಯಾವುದೇ ಧರ್ಮವಿರಲಿ, ಮನುಷ್ಯನನ್ನು ಉತ್ತಮಗೊಳಿಸಿದರೆ ಸಾಕು ಎನ್ನುವುದು ಅವರ ವಿಶಾಲ ದೃಷ್ಟಿಕೋನವಾಗಿತ್ತು. ಎಲ್ಲಾ ರೀತಿಯ ತಾರತಮ್ಯದ ಮನಸ್ಥಿತಿಯಿಂದ ಮುಕ್ತವಾದ ಅಪ್ಪಟ ಮನುಷ್ಯನನ್ನು ರೂಪಿಸುವುದೇ ನಾರಾಯಣಗುರುಗಳ ಬದುಕಿನ‌ ಸಂದೇಶವಾಗಿತ್ತು ಎನ್ನುವುದನ್ನು ನಾವುಗಳು ಮರೆಯಬಾರದು ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...