Homeಮುಖಪುಟ‘ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ’: ಸತೀಶ ಜಾರಕಿಹೊಳಿ 

‘ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ’: ಸತೀಶ ಜಾರಕಿಹೊಳಿ 

- Advertisement -
- Advertisement -

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಯಾರೊಬ್ಬರ ಶ್ರಮದಿಂದ ಬಂದಿಲ್ಲ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಹಿರಿಯ ನಾಯಕರವರೆಗೆ ಎಲ್ಲರ ಶ್ರಮವೂ ಇದೆ. ನಮಗಿರುವ 1.25 ಕೋಟಿ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ತನ್ನಿಂದಲೇ ಸರ್ಕಾರ ರಚನೆಯಾಗಿದೆ ಎಂದು ಯಾರಾದರೂ ಹೇಳಿದರೆ ಅದನ್ನು ನಾನು ಒಪ್ಪುವುದಿಲ್ಲ. ಅದು ನ್ಯಾಯವೂ ಅಲ್ಲ. ಎಲ್ಲರದ್ದೂ ಸಮಾನ ಶ್ರಮವಿದೆ, ಸಮಾನ ಪ್ರಾಧಾನ್ಯತೆ ಸಿಗಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಶಾಸಕರಾಗಿ ಚುನಾಯಿತರಾದ ಎಲ್ಲರದ್ದೂ ಸಮಾನ ಶ್ರಮವಿದೆ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ. ಯಾರೋ ಇಬ್ಬರು ಇದರ ‘ಕ್ರೆಡಿಟ್‌’ ತೆಗೆದುಕೊಳ್ಳಲು ಬರುವುದಿಲ್ಲ’ ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಟೀಕಿಸಿದರು.

‘ಡಾ.ಜಿ. ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ದುಡಿದಿದ್ದಾರೆ. ಅವರ ಕಾಲದಲ್ಲಿ ಮಾಡಿದ ಕಾರ್ಯಕ್ರಮಗಳ ಕಾರಣದಿಂದ ಕಾಂಗ್ರೆಸ್‌ಗೆ ಬಲ ಬಂದಿದೆ. ಸರ್ಕಾರ ರಚನೆ ಮಾಡುವಷ್ಟು ಪಕ್ಷವನ್ನು ಸಿದ್ಧಪಡಿಸಿದವರಲ್ಲಿ ಅವರೂ ಒಬ್ಬರು. ಅವರಿಗೂ ಸಮಾನ ಅವಕಾಶ ಸಿಗಬೇಕು ಎಂಬುದು ನನ್ನ ಒತ್ತಾಸೆ’ ಎಂದರು.

‘ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಪರಮೇಶ್ವರ ಅವರು ಈ ಹಿಂದೆಯೂ ಹೇಳಿದ್ದಾರೆ. ಅದರಲ್ಲಿ ಏನೂ ತಪ್ಪಿಲ್ಲ. ನಾನು ಕೂಡ ಆಕಾಂಕ್ಷಿ ಆಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟರು, ಅಲ್ಪಸಂಖ್ಯಾತ ಸಮುದಾಯದವರೇ ಮುಖ್ಯ ಮತದಾರರು. ಹಾಗಾಗಿ, ಆ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕಿದೆ’ ಎಂದು ಹೇಳಿದರು.

‘ಒನ್‌ ಮ್ಯಾನ್‌ ಶೋ’ ವಿಚಾರವನ್ನು ನಾನು ನಂಬುವುದಿಲ್ಲ. ಮುಖ್ಯಮಂತ್ರಿ ಯಾರಾಗಬೇಕು, ಯಾವಾಗ ಆಗಬೇಕು ಎಂದು ಹೈಕಮಾಂಡ್‌ ನಿರ್ಧರಿಸುತ್ತದೆ. ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ಮಾಡಬೇಕು ಎಂಬ ವಿಚಾರ ನನಗೆ ಗೊತ್ತಿಲ್ಲ. ಅದು ಬೆಂಗಳೂರಿನಲ್ಲಿ ನಡೆದಿದ್ದಲ್ಲ. ಅಂಥ ಚರ್ಚೆಗಳು ದೆಹಲಿಯಲ್ಲಿ ಮಾತ್ರ ನಡೆಯುತ್ತವೆ. ಸದ್ಯ ಯಾವುದೇ ಚರ್ಚೆಯೂ ನಡೆದಿಲ್ಲ. ಚರ್ಚೆಗೆ ದೆಹಲಿಗೆ ಬನ್ನಿ ಎಂದು ನನ್ನನ್ನು ಕರೆದರೆ ಖಂಡಿತ ಹೋಗುತ್ತೇನೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಕೆಲವರಿಗೆ ಅಧಿಕಾರ ಇಂದೇ ಬರಬಹುದು ಅಥವಾ ಇಂದೇ ಹೋಗಬಹುದು. ಮತ್ತೆ ಕೆಲವರಿಗೆ ಒಂದು ವರ್ಷ ಬಿಟ್ಟು ಬರಬಹುದು, ಕೆಲವರಿಗೆ ಹೋಗಲೂಬಹುದು. ಇಂಥದ್ದಕ್ಕೆಲ್ಲ ‘ತ್ಯಾಗ’ ಎಂಬ ಪದ ಸರಿಯಲ್ಲ’ ಎಂದೂ ಅವರು ಸೂಚ್ಯವಾಗಿ ಹೇಳಿದರು.

‘ಮಾಜಿ ಸಚಿವ ರಾಜಣ್ಣ ಹೇಳಿದಂತೆ ನವೆಂಬರ್‌ನಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಈಗಾಗಲೇ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದಾರೆ. ಶೀಘ್ರ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲಿದ್ದಾರೆ’ ಎಂದು ಸಚಿವ ಹೇಳಿದರು.

‘ನೀವು ಸಿ.ಎಂ ರೇಸ್‌ನಲ್ಲಿ ನಿಂತಿದ್ದೀರಾ’ ಎಂಬ ಪ್ರಶ್ನೆಗೆ ಚುಟುಕಾಗಿ ಉತ್ತರಿಸಿದ ಸತೀಶ ಜಾರಕಿಹೊಳಿ, ‘ಅದನ್ನು ಕೇಳಬೇಡಿ. ಈಗ ಹೇಳುವ ಅಗತ್ಯವೇ ಇಲ್ಲ’ ಎಂದರು.

‘1960ರಲ್ಲಿ ತೇನ್‌ಸಿಂಗ್ ನೊರ್ಗೆ ಹಿಮಾಲಯ ಪರ್ವತ ಏರಿದರು. ಆಗ ಜಗತ್ತಿನ ಎಲ್ಲ ಪತ್ರಿಕೆಗಳೂ ತೇನ್‌ಸಿಂಗ್ ಬಗ್ಗೆ ಮಾತ್ರ ಬರೆದವು. ಅವರ ಜೊತೆಗೆ ಇನ್ನೂ 14 ಜನ ಕೂಡ ಇದ್ದರು. ಅವರ ಹೆಸರು ಎಲ್ಲೂ ಬರಲಿಲ್ಲ. ಇದು ಹಾಗೇ ಆಗಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಡಿ.ಕೆ.ಶಿವಕುಮಾರ್‌ ವಿರುದ್ಧ ವ್ಯಂಗ್ಯವಾಡಿದರು.

ಡಿ.ಕೆ.ಶಿವಕುಮಾರ ಜೈಲಿಗೆ ಹೋಗಿ ಶಾಸಕರನ್ನು ಭೇಟಿ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ಶಾಸಕರಿದ್ದಾರೆ. ಹಾಗಾಗಿ, ಹೋಗಿ ಭೇಟಿಯಾಗಿ ಬಂದಿದ್ದಾರೆ. ಹಿಂದೆಯೂ ಒಂದು ಸಾರಿ ಹೋಗಿ ಭೇಟಿಯಾಗಿದ್ದರು. ಇದರಲ್ಲಿ ‘ಅಂಡರ್ ಕರೆಂಟ್ ಶಾಕ್’ ಏನಿಲ್ಲ. ನಮ್ಮದೂ ಕರೆಂಟ್ ಏನಿಲ್ಲ. ಎಲ್ಲವೂ ಸರಿ ಇದೆ’ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...