ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಜಸ್ಟೀಸ್ ಸೂರ್ಯಕಾಂತ್ ಅವರು ಸೋಮವಾರ (ನವೆಂಬರ್ 24) ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ 370ನೇ ವಿಧಿಯ ರದ್ದತಿ, ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಪೆಗಾಸಸ್ ಸ್ಪೈವೇರ್ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳಲ್ಲಿ ತೀರ್ಪು ನೀಡಿದ ಪೀಠಗಳ ಭಾಗವಾಗಿದ್ದರು.
ಅಕ್ಟೋಬರ್ 30ರಂದು ನಿರ್ಗಮಿತ ಸಿಜೆಐ ಬಿ.ಆರ್ ಗವಾಯಿ ಅವರು ಸಿಜೆಐ ಸ್ಥಾನಕ್ಕೆ ಸೂರ್ಯ ಕಾಂತ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಸುಮಾರು 15 ತಿಂಗಳು ಸೂರ್ಯಕಾಂತ್ ಅವರು ಸಿಜೆಐ ಹುದ್ದೆಯಲ್ಲಿ ಇರಲಿದ್ದು, ಫೆಬ್ರವರಿ 9, 2027ರಂದು 65ನೇ ವಯಸ್ಸನ್ನು ತಲುಪಿದ ನಂತರ ಅವರು ಅಧಿಕಾರದಿಂದ ನಿರ್ಗಮಿಸಲಿದ್ದಾರೆ.
ಹೊಸ ಸಿಜೆಐಯ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.


