Homeಮುಖಪುಟವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ...

ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ

- Advertisement -
- Advertisement -

ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಪ್ರವೇಶ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಸ್ವೀಕರಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಪರೆನ್ಸ್ (ಎನ್‌ಸಿ) ಈ ಮನವಿ ಪತ್ರವನ್ನು ‘ವಿಭಜಕ ಮತ್ತು ಕೋಮುವಾದಿತನ’ ಎಂದು ಬಣ್ಣಿಸಿದರೆ, ವಿರೋಧ ಪಕ್ಷವಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಬಿಜೆಪಿಯ ನಡೆ ‘ನಾಚಿಕೆಗೇಡು’ ಎಂದು ಹೇಳಿದೆ.

ಶನಿವಾರ (ನವೆಂಬರ್ 22) ಬಿಜೆಪಿ, ಹಿಂದುತ್ವ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಜೊತೆ ಸೇರಿ ವೈದ್ಯಕೀಯ ಕಾಲೇಜಿನ ಪ್ರವೇಶ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮತ್ತು ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಎಲ್ಲಾ ಸೀಟುಗಳನ್ನು ಹಿಂದೂ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ಮನವಿ ಮಾಡಿತ್ತು.

ಲೆಫ್ಟಿನೆಂಟ್ ಗವರ್ನರ್ ಶ್ರೀ ಮಾತಾ ವೈಷ್ಣೋದೇವಿ ವಿವಿಯನ್ನು ನಡೆಸುವ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಲ್ಲ. ಆದ್ದರಿಂದ, ವಿಶ್ವವಿದ್ಯಾಲಯದ ಪ್ರವೇಶಕ್ಕೆ ಧರ್ಮವು ಒಂದು ಅಂಶವಾಗಿರಲು ಸಾಧ್ಯವಿಲ್ಲ ಎಂದು ವರದಿಗಳು ಹೇಳಿವೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ನೀಡಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಾಲೇಜಿನ 50 ಸೀಟುಗಳಲ್ಲಿ ಶೇಕಡ 85 ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಮೀಸಲಾಗಿವೆ. ಉಳಿದ ಶೇಕಡ 15 ರಾಷ್ಟ್ರೀಯ ಮಟ್ಟದಲ್ಲಿ ಮುಕ್ತವಾಗಿವೆ.

ಜಮ್ಮು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಬಿಜೆಪಿಯ ಸುನಿಲ್ ಶರ್ಮಾ ಶನಿವಾರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ವಿಶ್ವವಿದ್ಯಾಲಯವು “ಒಂದು ಧಾರ್ಮಿಕ ಸಂಸ್ಥೆ ಮತ್ತು ಜನರು ಅದರೊಂದಿಗೆ ನಂಬಿಕೆಗಳನ್ನು ಹೊಂದಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಿನ್ಹಾ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ ಬಿಜೆಪಿಯು ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೋರಿಲ್ಲ, ಬದಲಿಗೆ ‘ಒಂದು ನಿರ್ದಿಷ್ಟ ಸಮುದಾಯದ ಬಹುಪಾಲು ವಿದ್ಯಾರ್ಥಿಗಳ ಪ್ರವೇಶಕ್ಕೆ’ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರತಿಯೊಬ್ಬ ಭಕ್ತರು ತಮ್ಮ ನಂಬಿಕೆಯ ಪ್ರಚಾರವನ್ನು ನೋಡುವ ಬಯಕೆಯಿಂದ ಈ ಧಾರ್ಮಿಕ ಸಂಸ್ಥೆಗೆ ದೇಣಿಗೆ ನೀಡುತ್ತಾರೆ” ಎಂದು ಶರ್ಮಾ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಮಂಡಳಿ ಮತ್ತು ವಿಶ್ವವಿದ್ಯಾಲಯವು ನಂಬಿಕೆಯನ್ನು ಪರಿಗಣಿಸಿಲ್ಲ.

ಮೆಡಿಕಲ್ ಕಾಲೇಜಿಗೆ ಆಯ್ಕೆಯಾದ 50 ವಿದ್ಯಾರ್ಥಿಗಳಲ್ಲಿ 42 ಮಂದಿ ಮುಸ್ಲಿಮರು ಎಂದು ವರದಿಯಾದ ಬಳಿಕ, ಕಳೆದ ವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿ ವೈಷ್ಣೋದೇವಿ ದೇವಾಲಯದ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಪ್ರತಿಕೃತಿಯನ್ನು ಸುಟ್ಟುಹಾಕಿತ್ತು.

ಲೆಫ್ಟಿನೆಂಟ್ ಗವರ್ನರ್ ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿ ನಂತರ, ನ್ಯಾಷನಲ್ ಕಾನ್ಫರೆನ್ಸ್, ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕವಾಗಿ ವಿಭಜಿಸುತ್ತಿದೆ ಮತ್ತು ಜಾತಿ-ಧರ್ಮಗಳ ಆಧಾರದಲ್ಲಿ ದ್ವೇಷ ಬಿತ್ತುತ್ತಿದೆ ಎಂದು ಆರೋಪಿಸಿದೆ.

“ಆಸ್ಪತ್ರೆ, ಶಾಲೆ, ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಶುರು ಮಾಡಿದರೆ, ನಾವು ಯಾವ ತರಹದ ದೇಶವಾಗಿ ಮಾರ್ಪಡುತ್ತೇವೆ? ಬಹುಸಂಖ್ಯಾತರ ಒತ್ತಡಕ್ಕೆ ಮಣಿದು ಪ್ರತಿಭೆ ಮತ್ತು ಮೆರಿಟ್ ಅನ್ನು ಕಸದ ಬುಟ್ಟಿಗೆ ತಳ್ಳಬೇಕೇ?” ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ತನ್ವೀರ್ ಸಾದಿಕ್ ಪ್ರಶ್ನಿಸಿದ್ದಾರೆ.

“ದೇವಾಲಯದಿಂದ ಹಣಕಾಸು ನೆರವು ಪಡೆಯುವ ಸಂಸ್ಥೆಯು ‘ಧರ್ಮಾಧಾರಿತ’ವಾಗುವುದಿಲ್ಲ. ಭಕ್ತಿಯಿಂದ ನೀಡುವ ದೇಣಿಗೆಗಳನ್ನು ತಾರತಮ್ಯದ ಸಾಧನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ” ಎಂದು ತನ್ವೀರ್ ಸಾದಿಕ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಮುಸ್ಲಿಮರ ಮೇಲಿನ ತಾರತಮ್ಯವನ್ನು ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ, ಅದೂ ಏಕೈಕ ಮುಸ್ಲಿಂ ಮುಖ್ಯಮಂತ್ರಿ (ಒಮರ್ ಅಬ್ದುಲ್ಲಾ) ಇರುವ ರಾಜ್ಯದಲ್ಲಿ ಈ ಮುಸ್ಲಿಮ್ ವಿರೋಧಿ ತಾರತಮ್ಯವನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಕಿಡಿಕಾರಿದ್ದಾರೆ.

“ಬಿಜೆಪಿ “ವೈದ್ಯಕೀಯ ವಿಜ್ಞಾನಗಳನ್ನು ಕೋಮುವಾದೀಕರಣಗೊಳಿಸುವ ಪರಿಕಲ್ಪನೆಯನ್ನು ಪ್ರಯೋಗಿಸುತ್ತಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಲೋನ್ ಆರೋಪಿಸಿದ್ದಾರೆ.

“ವೈದ್ಯಕೀಯ ವಿಜ್ಞಾನಕ್ಕೆ ಧಾರ್ಮಿಕ ಮತಾಂಧರಲ್ಲ, ಸಂಶೋಧಕರು ಬೇಕು” ಎಂದು ಲೋನ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಗವರ್ನರ್ ಬಿಜೆಪಿ ಮನವಿ ಸ್ವೀಕರಿಸಿದರೆ ಏನಾಗುತ್ತದೆ?

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿರುವುದರಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಕ್ಷಣದ ಪ್ರವೇಶ ನಿರಾಕರಣೆಗೆ ಆಗುವುದಿಲ್ಲ. ಇದು ಇನ್ನು ಮುಂದಿನ ಪ್ರವೇಶಗಳಿಗೆ (ಉದಾ: 2026-27 ಅಧ್ಯಯನ ವರ್ಷಕ್ಕೆ) ನಿಯಮಗಳಲ್ಲಿ ಬದಲಾವಣೆಗಳನ್ನು ಪರಿಶೀಲಿಸುವ ಸೂಚನೆಯಾಗಿದೆ. ಆದರೆ, ಈ ವಿಷಯ ಇನ್ನೂ ನಿರ್ಧಾರವಾಗಿಲ್ಲ ಮತ್ತು ವಿವಾದಾಸ್ಪದವಾಗಿದೆ.

ಬಿಜೆಪಿಯ ಬೇಡಿಕೆಯಂತೆ ನಿಯಮಗಳು ಬದಲಾದರೆ (ಉದಾ: ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯ ಮಂಡಳಿ ಕಾಯ್ದೆ ಮತ್ತು ವಿಶ್ವವಿದ್ಯಾಲಯ ಕಾಯ್ದೆಯಲ್ಲಿ ತಿದ್ದುಪಡಿ) ಭವಿಷ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ಸೀಮಿತವಾಗಬಹುದು. ಆದರೆ, ಇದು ಇನ್ನೂ ನಿರ್ಧಾರವಾಗಿಲ್ಲ. ದೇವಾಲಯ ಮಂಡಳಿ ಸಭೆಯಲ್ಲಿ (ನವೆಂಬರ್ ಅಂತ್ಯದಲ್ಲಿ ನಡೆಯಬಹುದು) ಈ ವಿಚಾರ ಚರ್ಚೆಯಾಗಬಹುದು. ನಿಯಮ ಬದಲಾವಣೆಗೆ ಕಾನೂನು ಪ್ರಕ್ರಿಯೆ ಮತ್ತು ನ್ಯಾಯಾಲಯ ಸವಾಲುಗಳು ಎದುರಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...