Homeಮುಖಪುಟರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆ ವಿರುದ್ಧ ಅರ್ಜಿ : ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್...

ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆ ವಿರುದ್ಧ ಅರ್ಜಿ : ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ರಾಜಕೀಯ ಪಕ್ಷಗಳು 2,000 ರೂ.ಗಿಂತ ಕಡಿಮೆ ‘ಅನಾಮಧೇಯ’ ನಗದು ದೇಣಿಗೆಗಳನ್ನು ಸ್ವೀಕರಿಸಲು ಅವಕಾಶ ನೀಡುವ ಆದಾಯ ತೆರಿಗೆ ಕಾಯ್ದೆಯ ನಿಬಂಧನೆಯ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 24) ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಇತರರಿಂದ ಪ್ರತಿಕ್ರಿಯೆ ಕೋರಿದೆ.

ಈ ಪಾರದರ್ಶಕತೆ ಕೊರತೆಯು ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆಯನ್ನು ಹಾಳು ಮಾಡುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಏಕೆಂದರೆ ಯಾರು ಯಾವ ರಾಜಕೀಯ ಪಕ್ಷಕ್ಕೆ ಹಣ ಕೊಟ್ಟಿದ್ದಾರೆ, ಆ ದಾನಿಗಳು ಯಾರು, ಅವರ ಉದ್ದೇಶ ಏನು ಎಂಬ ಮಾಹಿತಿಯನ್ನು ಮತದಾರರಿಗೆ ಸಂಪೂರ್ಣವಾಗಿ ಮರೆ ಮಾಚಿದಂತಾಗುತ್ತದೆ. ಇದರಿಂದ ಮತದಾರರು ತಮ್ಮ ಮತವನ್ನು ಹಾಕುವಾಗ ತರ್ಕಬದ್ಧವಾಗಿ, ಬುದ್ಧಿವಂತಿಕೆಯಿಂದ ಮತ್ತು ಸಂಪೂರ್ಣ ಮಾಹಿತಿ ಆಧರಿಸಿ ನಿರ್ಧಾರ ತೆಗೆದುಕೊಳ್ಳುವ ಅವಕಾಶವೇ ಇಲ್ಲವಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯಲ್ಲಿ ವಾದಿಸಲಾಗಿದೆ.

ಯಾವುದೇ ರಾಜಕೀಯ ಪಕ್ಷವನ್ನು ನೋಂದಣಿ ಮಾಡುವಾಗ ಮತ್ತು ಅದಕ್ಕೆ ಚಿಹ್ನೆ ಹಂಚಿಕೆ ಮಾಡುವಾಗ ನಗದು ರೂಪದಲ್ಲಿ ಯಾವುದೇ ದೇಣಿಗೆ ಪಡೆಯದಂತೆ ನಿರ್ದೇಶನ ನೀಡಲು ಚುನಾವಣಾ ಆಯೋಗಕ್ಕೆ ಸೂಚಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಯನ್ನು ನಾಲ್ಕು ವಾರಗಳ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದೆ.

ಅರ್ಜಿಯನ್ನು ಕೈಗೆತ್ತಿಕೊಂಡ ಪೀಠ, ಆರಂಭದಲ್ಲಿ ನೀವು ಹೈಕೋರ್ಟ್‌ಗೆ ಏಕೆ ಹೋಗಿಲ್ಲ ಎಂದು ಅರ್ಜಿದಾರ ಖೇಮ್ ಸಿಂಗ್ ಭಾಟಿ ಮತ್ತು ವಕೀಲೆ ಸ್ನೇಹಾ ಕಲಿತಾ ಪರ ಹಾಜರಿದ್ದ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರನ್ನು ಕೇಳಿದೆ ಎಂದು ವರದಿಯಾಗಿದೆ.

ಇದಕ್ಕೆ ಉತ್ತರಿಸಿದ ವಕೀಲ ಹನ್ಸಾರಿಯಾ, ಈ ಅರ್ಜಿಯು ದೇಶದಾದ್ಯಂತ ಇರುವ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅವುಗಳಿಗೆ ಬರುವ ನಿಧಿಗೆ ಸಂಬಂಧಿಸಿದೆ ಎಂದು ತಿಳಿಸಿದ್ದಾರೆ.

ನಂತರ, ಅರ್ಜಿಯನ್ನು ಆಲಿಸಲು ಒಪ್ಪಿಕೊಂಡ ನ್ಯಾಯಪೀಠ, ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಕಾಂಗ್ರೆಸ್‌ ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.

1961ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13Aನ ಷರತ್ತು (ಡಿ) ಅನ್ನು ಅಸಾಂವಿಧಾನಿಕ ಎಂದು ರದ್ದುಗೊಳಿಸುವಂತೆ ಮತ್ತು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ನ 2024 ರ ತೀರ್ಪನ್ನು ಉಲ್ಲೇಖಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ರಾಜಕೀಯ ಪಕ್ಷಗಳು ತಮಗೆ ಯಾವುದೇ ಮೊತ್ತದ ಹಣವನ್ನು ಪಾವತಿಸುವ ವ್ಯಕ್ತಿಯ ಹೆಸರು ಮತ್ತು ಇತರ ಎಲ್ಲಾ ವಿವರಗಳನ್ನು ಬಹಿರಂಗಪಡಿಸಬೇಕು ಮತ್ತು ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಯಾವುದೇ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಿರ್ದೇಶನ ನೀಡಬೇಕು ಎಂಬುವುದಾಗಿ ಅರ್ಜಿದಾರರು ಕೋರಿದ್ದಾರೆ ಎಂದು ವಕೀಲ ಜಯೇಶ್ ಕೆ ಉನ್ನಿಕೃಷ್ಣನ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ ತಿಳಿಸಲಾಗಿದೆ.

1961ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13A ರಾಜಕೀಯ ಪಕ್ಷಗಳ ಆದಾಯಕ್ಕೆ ಸಂಬಂಧಿಸಿದ ವಿಶೇಷ ನಿಬಂಧನೆಗೆ ಸಂಬಂಧಿಸಿದೆ.

ಸೆಕ್ಷನ್ 13A ರಾಜಕೀಯ ಪಕ್ಷಗಳಿಗೆ ಸೆಕ್ಯುರಿಟಿಗಳ ಮೇಲಿನ ಬಡ್ಡಿ, ಮನೆ ಆಸ್ತಿಯಿಂದ ಬರುವ ಆದಾಯ ಅಥವಾ ಇತರ ಮೂಲಗಳಿಂದ ಬರುವ ಆದಾಯ ಮತ್ತು ಸ್ವಯಂಪ್ರೇರಿತ ಕೊಡುಗೆಗಳ ಮೂಲಕ ಪಡೆಯುವ ಯಾವುದೇ ಆದಾಯವನ್ನು ಒಟ್ಟು ಆದಾಯದ ಲೆಕ್ಕಾಚಾರದಿಂದ ವಿನಾಯಿತಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...