Homeಮುಖಪುಟತಮಿಳುನಾಡು | ಎಸ್‌ಐಆರ್‌ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ, ವಿಸಿಕೆ ಪಕ್ಷಗಳು

ತಮಿಳುನಾಡು | ಎಸ್‌ಐಆರ್‌ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ, ವಿಸಿಕೆ ಪಕ್ಷಗಳು

- Advertisement -
- Advertisement -

ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಮತ್ತು ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಅಧ್ಯಕ್ಷ ಹಾಗೂ ಸಂಸದ ಥೋಲ್ ತಿರುಮಾವಲವನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಸೋಮವಾರ (ನ.24) ಲೈವ್ ಲಾ ವರದಿ ಮಾಡಿದೆ.

ತಮಿಳುನಾಡು ಸೇರಿದಂತೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನವೆಂಬರ್ 4ರಂದು ಚುನಾವಣಾ ಆಯೋಗ ಎಸ್‌ಐಆರ್‌ ಪ್ರಕ್ರಿಯೆಯ ಮೊದಲ ಹಂತವಾದ ಮನೆ ಮನೆ ಎಣಿಕೆ ಪ್ರಾರಂಭಿಸಿದೆ.

ಡಿಸೆಂಬರ್ 9ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಡಿಸೆಂಬರ್ 9ರಿಂದ ಜನವರಿ 8 ರವರೆಗೆ ಮತದಾರರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಜನವರಿ 31ರವರೆಗೆ ವಿಚಾರಣೆಗಳು ನಡೆಯಲಿವೆ. ಫೆಬ್ರವರಿ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.

ಟಿವಿಕೆ ತನ್ನ ಅರ್ಜಿಯಲ್ಲಿ, ಎಸ್‌ಐಆರ್ ಕಾನೂನಿನ ಮುಂದೆ ಸಮಾನತೆ ಮತ್ತು ಬದುಕುವ ಹಕ್ಕಿನ ತತ್ವಗಳನ್ನು ಉಲ್ಲಂಘಿಸುತ್ತದೆ ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಗೆ ವಿರುದ್ಧವಾಗಿದೆ ಎಂದು ವಾದಿಸಿದೆ.

ಈ ಪ್ರಕ್ರಿಯೆ ಯಾವುದೇ ದಾಖಲಿತ ಕಾರಣಗಳು ಅಥವಾ ಸಮರ್ಥನೆಗಳಿಲ್ಲದೆ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸುವುದಕ್ಕೆ ಸಮನಾಗಿರುತ್ತದೆ ಎಂದು ಟಿವಿಕೆ ಹೇಳಿದೆ.

ಎಸ್‌ಐಆರ್ ಪ್ರಕ್ರಿಯೆಯು ಸೂಚನೆ ಅಥವಾ ವಿಚಾರಣೆಯಿಲ್ಲದೆ ಹೆಸರುಗಳನ್ನು ಅಳಿಸಲು ಅನುಮತಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ನಿರಂತರತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಸುಪ್ರೀಂ ಕೋರ್ಟ್‌ನ ಪೂರ್ವನಿದರ್ಶನಗಳು ಮತ್ತು ಮತದಾರರ ನೋಂದಣಿ ನಿಯಮಗಳು, 1960 ರ ಅಡಿಯಲ್ಲಿ ಶಾಸನಬದ್ಧ ಸುರಕ್ಷತೆಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ವಾದಿಸಿದೆ.

ಎಸ್‌ಐಆರ್ ಪ್ರಕ್ರಿಯೆಯ ಸಮಯದಲ್ಲಿ ಉಂಟಾಗಬಹುದಾದ ಕಾರ್ಯವಿಧಾನದ ತೊಂದರೆಗಳನ್ನು ಕೂಡ ಟಿವಿಕೆ ಉಲ್ಲೇಖಿಸಿದೆ.

ಎಸ್‌ಐಆರ್‌ ಪ್ರಕ್ರಿಯೆಯನ್ನು ಮಳೆಗಾಲಕ್ಕೆ ಇಟ್ಟಿದ್ದಾರೆ. ಆ ಸಮಯದಲ್ಲಿ ಪ್ರವಾಹ ಬಂದರೆ ಸರ್ಕಾರಿ ಅಧಿಕಾರಿಗಳು ಮತ್ತು ಬೂತ್ ಮಟ್ಟದ ಸಿಬ್ಬಂದಿಯನ್ನು ಎಲ್ಲಾ ಪ್ರವಾಹ ಪರಿಹಾರ ಕೆಲಸಕ್ಕೆ ಕಳುಹಿಸಬೇಕಾಗುತ್ತದೆ. ಆಗ ಮತದಾರರ ಪಟ್ಟಿ ಸರಿಪಡಿಸುವ ಕೆಲಸಕ್ಕೆ ಯಾರೂ ಇರುವುದಿಲ್ಲ ಎಂದು ಹೇಳಿದೆ.

ತಮಿಳುನಾಡಿನಲ್ಲಿ ಎಸ್‌ಐಆರ್‌ ನಡೆಸುವ ಚುನಾವಣಾ ಆಯೋಗದ ಅಕ್ಟೋಬರ್ 27ರ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ತಿರುಮಾವಲವನ್ ಅವರು ಆರ್ಟಿಕಲ್ 32ರ ಅಡಿಯಲ್ಲಿ ಸಲ್ಲಿಸಿರುವ ಪ್ರತ್ಯೇಕ ಅರ್ಜಿಯಲ್ಲಿ ಕೋರಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಎಸ್‌ಐಆರ್‌ ಅನಿಯಂತ್ರಿತ, ಅಪಾರದರ್ಶಕ ಮತ್ತು ಅಸಂವಿಧಾನಿಕ ಎಂದು ಅವರು ಬಣ್ಣಿಸಿದ್ದು, ಇದು ಸಮಾನತೆ, ಘನತೆ ಮತ್ತು ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಒಂದು ವರ್ಷಕ್ಕಿಂತ ಕಡಿಮೆ ಸಮಯ ಇರುವಾಗ ತೀವ್ರವಾದ ಪರಿಷ್ಕರಣೆಯನ್ನು ಪ್ರಾರಂಭಿಸುವುದರಿಂದ, ವಿಶೇಷವಾಗಿ ಅಂಚಿನಲ್ಲಿರುವ ಗುಂಪುಗಳಲ್ಲಿ ದೊಡ್ಡ ಪ್ರಮಾಣದ ಅಳಿಸುವಿಕೆಗಳ ಅಪಾಯ ಹೆಚ್ಚಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಎಸ್‌ಐಆರ್ ಪ್ರಕ್ರಿಯೆಯ ವಿನ್ಯಾಸ ಮತ್ತು ಸಮಯವು ದಲಿತರು, ಆದಿವಾಸಿಗಳು, ವಲಸೆ ಕಾರ್ಮಿಕರು, ಮದುವೆಯ ನಂತರ ಸ್ಥಳಾಂತರಗೊಳ್ಳುವ ಮಹಿಳೆಯರು, ಕಾರ್ಮಿಕ ವರ್ಗ, ಅಂಗವಿಕಲರು ಮತ್ತು ಸ್ಥಿರ ದಾಖಲೆಗಳು ಅಥವಾ ಡಿಜಿಟಲ್ ಪ್ರವೇಶವಿಲ್ಲದವರ ಮೇಲೆ ಅಸಮಾನವಾಗಿ ಹೊರೆಯಾಗುತ್ತದೆ ಎಂದು ತಿರುಮಾವಲವನ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ತಮಿಳುನಾಡು 2024ರ ಅಕ್ಟೋಬರ್ ಮತ್ತು ಜನವರಿ ನಡುವೆ ವಿಶೇಷ ಸಾರಾಂಶ ಪರಿಷ್ಕರಣೆಯನ್ನು ಪೂರ್ಣಗೊಳಿಸಿದೆ, ಜನವರಿ 6 ರಂದು ನವೀಕರಿಸಿದ ಪಟ್ಟಿಗಳನ್ನು ಪ್ರಕಟಿಸಲಾಗಿದೆ. ಅಂದಿನಿಂದ ನಿರಂತರವಾಗಿ ನಿರ್ವಹಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯಾದ್ಯಂತ ಹೊಸದಾಗಿ ತೀವ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ಚುನಾವಣಾ ಆಯೋಗವು ಯಾವುದೇ ಸಮರ್ಥನೆಯನ್ನು ನೀಡಿಲ್ಲ ಎಂದು ತಿರುಮಾವಲವನ್ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ, ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ಎಸ್‌ಐಆರ್‌ ಪ್ರಕ್ರಿಯೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಇದನ್ನು ‘ಸಾಂವಿಧಾನಿಕ ಅತಿಕ್ರಮಣ’ ಎಂದು ಹೇಳಿದೆ.

ಎಸ್‌ಐಆರ್‌ನಿಂದ ಮತದಾರರು ದೊಡ್ಡ ಪ್ರಮಾಣದಲ್ಲಿ ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು ಎಂದು ಡಿಎಂಕೆ ಅರ್ಜಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...