Homeಮುಖಪುಟಗುರುದ್ವಾರ ಪ್ರವೇಶಕ್ಕೆ ನಿರಾಕರಣೆ; ಕ್ರಿಶ್ಚಿಯನ್ ಸೇನಾಧಿಕಾರಿ ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ಗುರುದ್ವಾರ ಪ್ರವೇಶಕ್ಕೆ ನಿರಾಕರಣೆ; ಕ್ರಿಶ್ಚಿಯನ್ ಸೇನಾಧಿಕಾರಿ ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಗುರುದ್ವಾರ ಪ್ರವೇಶಿಸಲು ನಿರಾಕರಿಸಿದ ಕ್ರಿಶ್ಚಿಯನ್ ಸೇನಾ ಅಧಿಕಾರಿಯ ವಜಾಗೊಳಿಸುವಿಕೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಸೈನ್ಯವು ಒಂದು ಸಂಸ್ಥೆಯಾಗಿ ಜಾತ್ಯತೀತವಾಗಿದೆ ಮತ್ತು ಅದರ ಶಿಸ್ತಿನಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದೆ.

ಗುರುದ್ವಾರ ಪ್ರವೇಶಿಸಲು ಒತ್ತಾಯಿಸುವುದು ಅವರ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂಬ ವಾದವನ್ನು ಮುಂದಿಟ್ಟುಕೊಂಡು ಅಧಿಕಾರಿ ಅಮಾನತು ಕ್ರಮವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಆದರೆ ನ್ಯಾಯಾಲಯವು ಅವರ ನಡವಳಿಕೆಯು ಕಾನೂನುಬದ್ಧ ಆದೇಶದ ಅವಿಧೇಯತೆಗೆ ಸಮನಾಗಿರುತ್ತದೆ ಎಂದು ತೀರ್ಪು ನೀಡಿದೆ. 

ಅವರು ಯಾವ ರೀತಿಯ ಸಂದೇಶವನ್ನು ರವಾನಿಸುತ್ತಿದ್ದಾರೆ? ಸೇನಾ ಅಧಿಕಾರಿಯೊಬ್ಬರು ಅಶಿಸ್ತು ತೋರಿಸುತ್ತಿದ್ದಾರೆ. ಅವರನ್ನು ವಜಾಗೊಳಿಸಬೇಕಿತ್ತು. ಈ ರೀತಿಯ ಹಿಂಸಾತ್ಮಕ ವ್ಯಕ್ತಿಗಳು ಮಿಲಿಟರಿಯಲ್ಲಿರಲು ಅರ್ಹರೇ?” ಎಂದು ನೂತನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠ ಸ್ಯಾಮ್ಯುಯೆಲ್ ಕಮಲೇಶನ್ ಅವರ ಅರ್ಜಿಯನ್ನು ವಜಾಗೊಳಿಸಿರುವುದಾಗಿ ಹೇಳಿತು.

ಅವರು ಅತ್ಯುತ್ತಮ ಅಧಿಕಾರಿಯಾಗಿರಬಹುದು ಆದರೆ ಅವರು ಭಾರತೀಯ ಸೈನ್ಯಕ್ಕೆ ಸೂಕ್ತವಲ್ಲ. ಈ ಸಮಯದಲ್ಲಿ ನಮ್ಮ ಪಡೆಗಳು ಹೊಂದಿರುವ ಜವಾಬ್ದಾರಿಗಳ ಪ್ರಮಾಣ… ಇದು ನಾವು ನಿರ್ವಹಿಸಲು ಬಯಸುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.

3 ನೇ ​​ಕ್ಯಾವಲ್ರಿ ರೆಜಿಮೆಂಟ್‌ನಲ್ಲಿ ಈ ಹಿಂದೆ ಲೆಫ್ಟಿನೆಂಟ್ ಆಗಿದ್ದ ಕಮಲೇಶನ್ ಅವರನ್ನು ಮಿಲಿಟರಿ ಶಿಸ್ತನ್ನು ಧಿಕ್ಕರಿಸಿದ್ದಕ್ಕಾಗಿ ವಜಾಗೊಳಿಸಲಾಗಿದೆ. ಪೂಜೆ ನಡೆಸಲು ದೇವಾಲಯದ ಗರ್ಭಗುಡಿ ಪ್ರವೇಶಿಸಲು ಅವರು ತಮ್ಮ ಉನ್ನತ ಅಧಿಕಾರಿಯ ಆದೇಶವನ್ನು ನಿರಾಕರಿಸಿದ್ದರು. ಇದು ಅವರ ಏಕದೇವತಾವಾದಿ ಕ್ರಿಶ್ಚಿಯನ್ ನಂಬಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದ್ದರು.

ಮೇ ತಿಂಗಳಲ್ಲಿ ದೆಹಲಿ ಹೈಕೋರ್ಟ್ ಕಮಲೇಶನ್ “ತನ್ನ ಮೇಲಧಿಕಾರಿಯ ಕಾನೂನುಬದ್ಧ ಆದೇಶಕ್ಕೆ ಕ್ಯಾರೆ ಎನ್ನದೇ ತನ್ನ ಧರ್ಮವನ್ನು ಉಳಿಸಿಕೊಂಡಿದ್ದಾರೆ ಎಂಬ ಸೇನೆಯ ನಿರ್ಧಾರವನ್ನು ಮರು ದೃಢಪಡಿಸಿತ್ತು. ಇದು ಸ್ಪಷ್ಟವಾಗಿ ಅಶಿಸ್ತಿನ ಕೃತ್ಯ ಎಂದು ತೀರ್ಪು ನೀಡಿತು. ಕಮಲೇಶನ್ ಅವರ ನಡೆಯನ್ನು ಮಿಲಿಟರಿ ನೀತಿಯ” ಉಲ್ಲಂಘನೆ ಎಂದು ನ್ಯಾಯಾಲಯ ಕರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...