Homeಮುಖಪುಟಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ 6 ಮಂದಿಯನ್ನು ವಾಪಸ್ ಕರೆತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ

ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ 6 ಮಂದಿಯನ್ನು ವಾಪಸ್ ಕರೆತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ವಿದೇಶಿಯರೆಂದು ಶಂಕಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿರುವ ಪಶ್ಚಿಮ ಬಂಗಾಳದ ಆರು ನಿವಾಸಿಗಳನ್ನು ತಾತ್ಕಾಲಿಕ ಕ್ರಮವಾಗಿ ವಾಪಸ್ ಕರೆತರುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ನವೆಂಬರ್ 25) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಗಡಿಪಾರು ಮಾಡುವಾಗ ತುಂಬು ಗರ್ಭಿಣಿಯಾಗಿದ್ದ ಸುನಾಲಿ ಖಾತೂನ್, ಆಕೆಯ ಗಂಡ ದಾನಿಷ್‌ ಶೇಖ್, ಮಗ ಶಬೀರ್ (ಇವರು ಪ್ರಕರಣದ ಅರ್ಜಿದಾರ ಭೋದು ಶೇಖ್ ಎಂಬವರ ಕುಟುಂಬಸ್ಥರು) ಮತ್ತು ಸ್ವೀಟಿ ಬೀಬಿ ಎಂಬ ಮಹಿಳೆ, ಆಕೆಯ ಇಬ್ಬರು ಮಕ್ಕಳಾದ ಕುರ್ಬಾನ್ ಶೇಖ್ ಮತ್ತು ಇಮಾಮ್ ದೇವಾನ್ ಇವರನ್ನು ವಾಪಸ್ ಕರೆತರಲು ಕೋರ್ಟ್ ನಿರ್ದೇಶಿಸಿದೆ.

ಗಡಿಪಾರಾದವರು ತಾವು ಭಾರತೀಯ ನಾಗರಿಕರು ಎಂದು ಹೇಳಿಕೊಳ್ಳುತ್ತಿದ್ದು, ಹಾಗಾಗಿ ಅವರು ತಮ್ಮಲ್ಲಿರುವ ದಾಖಲೆಗಳನ್ನು ಸಲ್ಲಿಸಿ ಸಂಬಂಧಿತ ಅಧಿಕಾರಿಗಳ ಮುಂದೆ ತಮ್ಮ ವಾದ ಮಂಡಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ಸರ್ಕಾರ ಮಧ್ಯಂತರ ಕ್ರಮವಾಗಿ ಅವರನ್ನು ಮರಳಿ ಕರೆತಂದು ವಿಚಾರಣೆಗೆ ಅವಕಾಶ ನೀಡಬೇಕು ಎಂದು ಹೇಳಿದೆ. ಸರ್ಕಾರಿ ಸಂಸ್ಥೆಗಳು ಗಡಿಪಾರು ಮಾಡಿದವರ ದಾಖಲೆಗಳ ನೈಜತೆಯನ್ನು ಪರಿಶೀಲಿಸಬಹುದು ಎಂದಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಪ್ರಕರಣ ವಿಚಾರಣೆ ನಡೆಸಿದೆ. ಕೇಂದ್ರ ಸರ್ಕಾರದ ಪರ ಹಾಜರಿದ್ದ ವಕೀಲರಿಗೆ ನ್ಯಾಯಾಲಯ ಸೂಚನೆ ನೀಡಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಸಂಜಯ್ ಹೆಗ್ಡೆ ಹಾಜರಾಗಿದ್ದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಸಂಜಯ್ ಹೆಗ್ಡೆ, “ಗಡಿಪಾರು ಮಾಡಿದವರನ್ನು ವಾಪಸ್ ಕರೆ ತರುವಂತೆ ಕಲ್ಕತ್ತಾ ಹೈಕೋರ್ಟ್ ಆದೇಶ ನೀಡಿದ ಸುಮಾರು ಒಂದು ತಿಂಗಳ ನಂತರ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅರ್ಜಿದಾರರು ನ್ಯಾಯಾಂಗ ನಿಂದನೆ ಆರೋಪ ಮಾಡಿದ ಬಳಿಕವಷ್ಟೇ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಈ ನಡುವೆ ಪ್ರಕರಣ ಗೊಂದಲ ಸ್ಥಿತಿಯಲ್ಲಿ ಇತ್ತು. ಅರ್ಜಿದಾರರು ಭಾರತೀಯ ನಾಗರಿಕರು, ಅವರನ್ನು ಗಡಿಯಾಚೆಗೆ ತಳ್ಳಲಾಗಿದೆ” ಎಂದು ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿ ಮತ್ತು ದಾಖಲೆಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಕಾಂತ್ ಅವರು, ಈಗ ದಾಖಲೆಗಳಲ್ಲಿ ಬಹಳಷ್ಟು ವಿಷಯಗಳು ಬರುತ್ತಿವೆ, ಜನನ ಪ್ರಮಾಣಪತ್ರ, ಸನಿಹ ಕುಟುಂಬ ಸದಸ್ಯರ ಜಮೀನು ದಾಖಲೆಗಳು ಇವೆಲ್ಲವೂ ಸಾಕ್ಷ್ಯಗಳೇ ಆಗಿವೆ, ಸಾಧ್ಯತೆಯ ಸಾಕ್ಷ್ಯಗಳು (evidence of probability). ಇಷ್ಟು ದಾಖಲೆಗಳಿದ್ದರೂ ನಿಮಗೇನು ತಡೆಯಿದೆ? ಎಂದು ಕೇಂದ್ರ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ್ದಾರೆ.

ಗಡಿಪಾರು ಮಾಡಲಾದ ವ್ಯಕ್ತಿಗಳ ವಾದವನ್ನೇ ಆಲಿಸಿಲ್ಲ ಎಂಬುವುದು ಆರೋಪ. ಅವರ ಅಭಿಪ್ರಾಯ ಕೇಳದೆಯೇ ನೀವು ಅವರನ್ನು ದೇಶದಿಂದ ಹೊರಹಾಕಿಬಿಟ್ಟಿದ್ದೀರಿ. ಆದ್ದರಿಂದ, ಕನಿಷ್ಠ ತಾತ್ಕಾಲಿಕ ಕ್ರಮವಾಗಿಯಾದರೂ ನೀವು ಅವರನ್ನು ಮರಳಿ ತಂದು, ಅವರಿಗೆ ಸಮರ್ಥನೆ ಸಲ್ಲಿಸಿಕೊಳ್ಳಲು ಅವಕಾಶ ಕೊಡಿ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ, ಸಂಪೂರ್ಣವಾಗಿ ಎಲ್ಲ ಅಂಶಗಳನ್ನು ಪರಿಗಣಿಸಿ ನಂತರ ತೀರ್ಮಾನ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ.

ಗಡಿಪಾರಾದವರು ಭಾರತೀಯ ನಾಗರಿಕರು ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರಿಗೆ ಅಧಿಕಾರಿಗಳ ಮುಂದೆ ತಮ್ಮ ವಾದ ಮಂಡಿಸುವ ಹಕ್ಕಿದೆ ಎಂದು ಮುಖ್ಯ ನ್ಯಾಯಮೂರ್ತಿ ಒತ್ತಿ ಹೇಳಿದ್ದಾರೆ. ಗಡಿಪಾರು ಮಾಡಲ್ಪಟ್ಟವರು ಬಾಂಗ್ಲಾದೇಶದ ಅಕ್ರಮ ವಲಸಿಗರಾದರೆ ನಿಮ್ಮ ಕ್ರಮ ಶೇಕಡ 100ರಷ್ಟು ಸಮರ್ಥನೀಯ. ಅದನ್ನು ಯಾರೂ ವಿವಾದ ಮಾಡುವುದಿಲ್ಲ. ಆದರೆ, ಗಡಿಪಾರಾದವರು ನಾವು ಭಾರತೀಯ ಪ್ರಜೆಗಳು ಎಂದು ಹೇಳುತ್ತಿದ್ದಾರೆ. ನಾವು ಭಾರತಕ್ಕೆ ಸೇರಿದವರು, ಇಲ್ಲೇ ಹುಟ್ಟಿ ಬೆಳೆದವರು ಎನ್ನುತ್ತಿದ್ದಾರೆ. ಅವರು ಏನೋ ದಾಖಲೆ ತೋರಿಸುತ್ತಿರಬೇಕಾದರೆ ಅವರಿಗೆ ತಮ್ಮ ವಾದ ಮಂಡಿಸುವ ಹಕ್ಕಿದೆ ಎಂದಿದ್ದಾರೆ.

ಅಂತಿಮವಾಗಿ, ಸೋಮವಾರದವರೆಗೆ ಸೂಚನೆಗಳನ್ನು ಪಡೆಯಲು ಕೇಂದ್ರ ಸರ್ಕಾರಕ್ಕೆ ಸಮಯ ನೀಡಿದ ನ್ಯಾಯಪೀಠ, ಕೇಂದ್ರ ಸರ್ಕಾರ ತಾತ್ಕಾಲಿಕ ಕ್ರಮವಾಗಿ ಗಡಿಪಾರು ಮಾಡಿದವರನ್ನು ಮರಳಿ ಭಾರತಕ್ಕೆ ಕರೆತರಬಹುದು ಮತ್ತು ತನಿಖಾ ಸಂಸ್ಥೆಗಳ ಮೂಲಕ ಅವರ ಸಲ್ಲಿಸಿರುವ ದಾಖಲೆಗಳು (ಜನ್ಮ ಪತ್ರ, ಜಮೀನು ದಾಖಲೆಗಳು ಇತ್ಯಾದಿ) ನಿಜವಾದವುಗಳೇ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು ಎಂದು ಹೇಳಿದೆ.

ಗಡಿಪಾರು ಮಾಡಿದವರನ್ನು ವಾಪಸ್ ಕರೆ ತರುವಂತೆ ಸೆಪ್ಟೆಂಬರ್‌ನಲ್ಲಿ ಕಲ್ಕತ್ತಾ ಹೈಕೋರ್ಟ್ ಆದೇಶಿಸಿತ್ತು. ಅವರನ್ನು ಗಡಿಯಾಚೆಗೆ ಕಳುಹಿಸುವಾಗ ಸರಿಯಾದ ರೀತಿಯಲ್ಲಿ ವಿಚಾರಣೆ ಮಾಡಿಲ್ಲ, ತಪ್ಪು ಮಾಡಿದ್ದೀರಿ ಎಂದಿತ್ತು. ಅವರು ಭಾರತೀಯರೇ ಆಗಿರಬಹುದು, ಹಾಗಾಗಿ 4 ವಾರದೊಳಗೆ ಅವರನ್ನು ಮತ್ತೆ ಭಾರತಕ್ಕೆ ಕರೆತನ್ನಿ ಎಂದು ಸೂಚಿಸಿತ್ತು. ಅವರ ನಾಗರಿಕತ್ವ ಏನು ಎಂಬುದನ್ನು ಇನ್ನಷ್ಟು ದಾಖಲೆಗಳನ್ನು ನೋಡಿ, ಸರಿಯಾಗಿ ವಿಚಾರಣೆ ಮಾಡಿ ನಿರ್ಧಾರ ಮಾಡಿ ಎಂದು ಹೇಳಿತ್ತು. ಈ ಆದೇಶವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಭೋದು ಶೇಖ್ ಎಂಬುವವರು ಕಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದರು. ನನ್ನ ಮಗಳು, ಅಳಿಯ ಮತ್ತು ಮೊಮ್ಮಗನನ್ನು ಸುಳ್ಳು ಆರೋಪದ ಮೇಲೆ ಬಂಧಿಸಿ ಗಡಿಪಾರು ಮಾಡಿದ್ದಾರೆ. ದಯಮಾಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂದು ಕೇಳಿಕೊಂಡಿದ್ದರು. ನಾನು ಪಶ್ಚಿಮ ಬಂಗಾಳದಲ್ಲಿ ಖಾಯಂ ನಿವಾಸಿ. ನನ್ನ ಮಗಳು, ಅಳಿಯನೂ ಭಾರತದಲ್ಲಿ ಹುಟ್ಟಿ ಬೆಳೆದ ಭಾರತೀಯ ನಾಗರಿಕರು. ನಮ್ಮ ಕುಟುಂಬ ತಲೆತಲಾಂತರದಿಂದ ಪಶ್ಚಿಮ ಬಂಗಾಳದಲ್ಲೇ ಇದೆ. ಕೆಲಸಕ್ಕಾಗಿ ಮಾತ್ರ ಮಗಳು, ಅಳಿಯ ದೆಹಲಿಗೆ ಹೋಗಿದ್ದರು ಎಂದು ಭೋದು ಶೇಖ್ ಹೇಳಿದ್ದರು.

‘ಗುರುತು ಪರಿಶೀಲನೆ ಅಭಿಯಾನ’ ಎಂಬ ಹೆಸರಿನಲ್ಲಿ ಪೊಲೀಸರು ಬಂದು ನನ್ನ ಮಗಳು, ಅಳಿಯ ಮತ್ತು ಮೊಮ್ಮಗನನ್ನು ಬಂಧಿಸಿದ್ದರು. ನಂತರ ಅವರನ್ನು ಕಸ್ಟಡಿಯಲ್ಲಿಟ್ಟು, ಸರಿಯಾದ ವಿಚಾರಣೆ ನಡೆಸದೆ 2025ರ ಜೂನ್ 26ರಂದು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ್ದಾರೆ. ಗಡಿಪಾರು ಮಾಡುವ ವೇಳೆ ನನ್ನ ಮಗಳು ತುಂಬು ಗರ್ಭಿಣಿಯಾಗಿದ್ದಳು. ಅದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಆಕೆಯನ್ನು ಗಡಿಯಾಚೆಗೆ ತಳ್ಳಲಾಗಿದೆ ಎಂದು ಭೋದು ಶೇಖ್ ಅಳಲು ತೋಡಿಕೊಂಡಿದ್ದರು.

ದೆಹಲಿಯಲ್ಲಿರುವ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಅಧಿಕಾರಿಗಳು, ಗೃಹ ಇಲಾಖೆಯಿಂದ ಬಂದ 2025ರ ಮೇ 2ರಂದು ನೀಡಿದ ಆದೇಶದ ಪ್ರಕಾರ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಗಡಿಪಾರು ಮಾಡುತ್ತಿದ್ದಾರೆ. ಆದರೆ, ಆ ಆದೇಶದಲ್ಲೇ ಹೇಳಿರುವಂತೆ ಯಾವುದೇ ರೀತಿಯ ತನಿಖೆ-ವಿಚಾರಣೆ ಮಾಡುತ್ತಿಲ್ಲ. ನನ್ನ ಮಗಳು, ಅಳಿಯನನ್ನು ಬಂಧಿಸಿದ ಕೇವಲ 2 ದಿನಗಳಲ್ಲೇ ಗಡಿಯಾಚೆಗೆ ತಳ್ಳಿದ್ದಾರೆ ಎಂದು ವಿವರಿಸಿದ್ದರು.

ಬಂಧಿತರು ತಾವು ಬಾಂಗ್ಲಾದೇಶದ ನಿವಾಸಿಗಳು ಎಂದು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ತಮ್ಮ ಆಧಾರ್ ಕಾರ್ಡ್‌ಗಳು, ಪಡಿತರ ಚೀಟಿಗಳು, ಮತದಾರರ ಗುರುತಿನ ಚೀಟಿಗಳು ಅಥವಾ ತಾವು ಭಾರತದ ನಾಗರಿಕರು ಎಂದು ಸಾಬೀತುಪಡಿಸುವ ಯಾವುದೇ ಇತರ ದಾಖಲೆಗಳನ್ನು ತೋರಿಸಲು ವಿಫಲರಾಗಿದ್ದಾರೆ ಎಂದು ಅಧಿಕಾರಿಗಳು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್, ಬಂಧಿತರು ದೆಹಲಿ ಪೊಲೀಸರ ಮುಂದೆ ಬಾಂಗ್ಲಾದೇಶದ ನಾಗರಿಕರು ಎಂದು ಒಪ್ಪಿಕೊಂಡರೂ ಕೂಡ, ಪೊಲೀಸರು ಒತ್ತಡ ಹಾಕಿ, ಬೆದರಿಸಿ ಆ ಹೇಳಿಕೆಯನ್ನು ಪಡೆದಿರಬಹುದು ಎಂದಿತ್ತು. ಅದು ಸ್ವಯಂಪ್ರೇರಿತ ಹೇಳಿಕೆ ಆಗಿರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ನಾಲ್ಕು ವಾರಗಳಲ್ಲಿ ಗಡಿಪಾರು ಮಾಡಿದವರನ್ನು ವಾಪಸ್ ಕರೆತರಲು ಆದೇಶಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...