Homeಮುಖಪುಟಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ...

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ ಬಂಡಿ ಸಂಜಯ್ ಆಮಿಷ

- Advertisement -
- Advertisement -

ತೆಲಂಗಾಣದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರೆ, ತಮ್ಮ ಕರೀಂನಗರ ಲೋಕಸಭಾ ಕ್ಷೇತ್ರದ ಗ್ರಾಮಗಳಿಗೆ ತಲಾ 10 ಲಕ್ಷ ರೂ.ಗಳ ಹಣಕಾಸು ನೆರವು ನೀಡುವುದಾಗಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಮಂಗಳವಾರ (ನವೆಂಬರ್ 25) ಹೇಳಿದ್ದಾರೆ.

ಸಂಸದರ ನಿಧಿ, ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ಹಣ ಲಭ್ಯವಿದೆ ಎಂದು ಬಂಡಿ ಸಂಜಯ್ ತಿಳಿಸಿದ್ದಾರೆ. ಈ ಯೋಜನೆಯಡಿಯಲ್ಲಿ, ಪ್ರತಿಯೊಬ್ಬ ಸಂಸದರು ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ವರ್ಷಕ್ಕೆ 5 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಶಿಫಾರಸು ಮಾಡುವ ಹಕ್ಕನ್ನು ಹೊಂದಿರುತ್ತಾರೆ.

ಸಿಎಸ್ಆರ್ ನಿಧಿಗಳ ಮೂಲಕ ನಾವು ಕೋಟ್ಯಂತರ ರೂಪಾಯಿಗಳನ್ನು ಹೇಗೆ ಗಳಿಸಿದ್ದೇವೆ ಮತ್ತು ಶಿಕ್ಷಣ, ಆರೋಗ್ಯ ರಕ್ಷಣೆಯನ್ನು ಸುಧಾರಿಸುವಲ್ಲಿ ಹೇಗೆ ಹೂಡಿಕೆ ಮಾಡಿದ್ದೇವೆ ಎಂದು ನಿಮಗೆ ಈಗಾಗಲೇ ಗೊತ್ತಿದೆ ಎಂದು ಬಂಡಿ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಕೇಂದ್ರ ಸಚಿವನಾಗಿ ಪಂಚಾಯತ್ ಅಭಿವೃದ್ಧಿಯನ್ನು ಬಲಪಡಿಸಲು ನಾನು ಇನ್ನೂ ಹೆಚ್ಚಿನ ಕೇಂದ್ರ ನಿಧಿಗಳನ್ನು ತರುತ್ತೇನೆ ಎಂದಿದ್ದಾರೆ.

ಗ್ರಾಮಗಳ ಅಭಿವೃದ್ಧಿಗಾಗಿ ನಾನು ನೇರವಾಗಿ 10 ಲಕ್ಷ ರೂಪಾಯಿ ನೀಡುತ್ತೇನೆ. ಇದರಲ್ಲಿ ಯಾವುದೇ ವಿಳಂಬ ಮಾಡುವುದಿಲ್ಲ, ಯಾವುದೇ ನೆಪ ಹೇಳುವುದಿಲ್ಲ ಎಂದು ಬಿಜೆಪಿ ನಾಯಕ ಭರವಸೆ ನೀಡಿದ್ದಾರೆ.

ಡಿಸೆಂಬರ್ ಮಧ್ಯದಲ್ಲಿ ತೆಲಂಗಾಣದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದೆ.

ತೆಲಂಗಾಣದ ಈ ಹಿಂದಿನ ಆಡಳಿತ ಪಕ್ಷ ಬಿಆರ್‌ಎಸ್‌ ಸರ್ವಾನುಮತದಿಂದ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಪಂಚಾಯತ್‌ಗಳಿಗೆ 5 ಲಕ್ಷ ರೂ.ಗಳ ಭರವಸೆ ನೀಡಿತ್ತು ಎಂದು ಬಂಡಿ ಸಂಜಯ್ ನೆನಪಿಸಿದ್ದಾರೆ.

ಕರೀಂನಗರ ಲೋಕಸಭಾ ಕ್ಷೇತ್ರ ಪ್ರದೇಶದ ಸುಮಾರು 70 ಹಳ್ಳಿಗಳು ಬಿಆರ್‌ಎಸ್ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದವು. ಆದರೆ, ಅವರ ಸರ್ಕಾರ ಬಂದು ಐದು ವರ್ಷಗಳ ನಂತರವೂ ಕೆಸಿಆರ್ ಸರ್ಕಾರ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿರಲಿಲ್ಲ ಎಂದಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡ ಇದೇ ರೀತಿಯ ಭರವಸೆಗಳನ್ನು ನೀಡಿತ್ತು. ಸರ್ವಾನುಮತದ ಆಯ್ಕೆಯ ಹೆಸರಿನಲ್ಲಿ ಜನರನ್ನು ವಂಚಿಸಿದೆ ಎಂದು ಬಂಡಿ ಸಂಜಯ್ ದೂರಿದ್ದಾರೆ.

ಕಾಂಗ್ರೆಸ್ ಮತ್ತು ಬಿಆರ್‌ಎಸ್ ಅನ್ನು ನಂಬಿದವರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದರು. ಎರಡೂ ಪಕ್ಷಗಳು ಈಗ ಅದೇ ವಂಚನೆಯನ್ನು ಪುನರಾವರ್ತಿಸಲು ತಯಾರಿ ನಡೆಸುತ್ತಿವೆ. ಬಿಜೆಪಿ ಮಾತ್ರ ಕೊಟ್ಟ ಭರವಸೆಯಂತೆ ಹಣ ತರಲಿದೆ. ಕಾಂಗ್ರೆಸ್ ಅಥವಾ ಬಿಆರ್‌ಎಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದರೆ, ಹೊಸ ನಿಧಿಗಳು ಬರುವುದಿಲ್ಲ ಮತ್ತು ಕೇಂದ್ರದ ನಿಧಿಗಳು ಕೂಡ ಬೇರೆಡೆಗೆ ಹೋಗಬಹುದು. ಆದ್ದರಿಂದ ಅವರ ತಂತ್ರ, ಪ್ರಚೋದನೆಗಳಿಗೆ ಬಲಿಯಾಗಬೇಡಿ ಎಂದು ಬಂಡಿ ಸಂಜಯ್ ಹೇಳಿದ್ದಾರೆ.

ಡಿಸೆಂಬರ್ 2ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಸಿಪಿ ಅಭ್ಯರ್ಥಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಮಾತ್ರ ಈ ಪ್ರದೇಶದ ಅಭಿವೃದ್ದಿಗೆ ಹಣ ಸಿಗಲಿದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಶುಕ್ರವಾರ (ನವೆಂಬರ್ 21) ಮಾಲೆಗಾಂವ್‌ನಲ್ಲಿ ಮತದಾರರಿಗೆ ಹೇಳಿದ್ದರು. ಈ ಬೆನ್ನಲ್ಲೇ ತೆಲಂಗಾಣದ ಬಿಜೆಪಿ ನಾಯಕ ಅದೇ ರೀತಿಯ ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...