Homeಅಂತರಾಷ್ಟ್ರೀಯದಿತ್ವಾ ಚಂಡಮಾರುತ : ಶ್ರೀಲಂಕಾದಲ್ಲಿ 123 ಸಾವು, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ

ದಿತ್ವಾ ಚಂಡಮಾರುತ : ಶ್ರೀಲಂಕಾದಲ್ಲಿ 123 ಸಾವು, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ದಿತ್ವಾ ಚಂಡಮಾರುತದಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ಶ್ರೀಲಂಕಾದಲ್ಲಿ ಕನಿಷ್ಠ 123 ಜನರು ಸಾವನ್ನಪ್ಪಿದ್ದಾರೆ ಮತ್ತು 130ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ದೇಶದ ವಿಪತ್ತು ನಿರ್ವಹಣಾ ಕೇಂದ್ರವನ್ನು ಉಲ್ಲೇಖಿಸಿ ಸುದ್ದಿ ಎಎಫ್‌ಪಿ ಶನಿವಾರ (ನ.29) ವರದಿ ಮಾಡಿದೆ.

ಶ್ರೀಲಂಕಾ ಸರ್ಕಾರ ಶನಿವಾರ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ.

ಪ್ರಸ್ತುತ ಚಂಡಮಾರುತವು ಶ್ರೀಲಂಕಾ ತೊರೆದು ದಕ್ಷಿಣ ಭಾರತದ ಕರಾವಳಿಯ ಕಡೆಗೆ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ದಿತ್ವಾ ಚಂಡಮಾರುತವು ಶ್ರೀಲಂಕಾದ ಉತ್ತರ ಭಾಗಗಳು ಮತ್ತು ನೈಋತ್ಯ ಬಂಗಾಳಕೊಲ್ಲಿಯ ಪಕ್ಕದ ಭಾಗಗಳ ಮೇಲೆ ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು.

ನಂತರ ಸಂಜೆ 4.46ಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಚಂಡಮಾರುತವು ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುತ್ತಿದ್ದು, ಭಾನುವಾರ ಮುಂಜಾನೆ ಉತ್ತರ ತಮಿಳುನಾಡು-ಪುದುಚೇರಿ-ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿತ್ತು.

ಭಾನುವಾರದ (ನ.30) ವರದಿಗಳ ಪ್ರಕಾರ, ದಿತ್ವಾ ಚಂಡಮಾರುತ ಭಾರತದ ಕರಾವಳಿಗೆ ನೇರವಾಗಿ ತಲುಪಿಲ್ಲ. ಅದು ಇನ್ನೂ ಬಂಗಾಳ ಕೊಲ್ಲಿಯ ದಕ್ಷಿಣ ಪಶ್ಚಿಮ ಭಾಗದಲ್ಲಿ ಸುಮಾರು 90 ಕಿ.ಮೀ. ದೂರದಲ್ಲಿ ಕರಾವಳಿಯ ಸಮೀಪದಲ್ಲಿದ್ದು, ಉತ್ತರ ದಿಕ್ಕಿನಲ್ಲಿ 5 ಕಿ.ಮೀ./ಗಂಟೆ ವೇಗದಲ್ಲಿ ಸಾಗುತ್ತಿದೆ. ಆದರೆ, ಚಂಡಮಾರುತದ ಪರಿಣಾಮ ತಮಿಳುನಾಡು, ಆಂಧ್ರ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿ ಶುರುವಾಗಿದೆ.

ಚಂಡುಮಾರುತದ ಹಿನ್ನೆಲೆ ತಮಿಳುನಾಡಿನ ಕರಾವಳಿ ಪ್ರದೇಶದ ಜನರು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ಮನೆಯೊಳಗೆ ಇರಲು ಸೂಚಿಸಲಾಗಿದೆ.

ತಮಿಳುನಾಡಿನ ಚೆಂಗಲ್ಪಟ್ಟು, ವಿಲುಪ್ಪುರಂ, ಕಡಲೂರು, ಮೈಲಾಡುತುರೈ ಮತ್ತು ನಾಗಪಟ್ಟಣಂ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದ ಐಎಂಡಿ, ಶನಿವಾರ ರೆಡ್ ಅಲರ್ಟ್ ಘೋಷಿಸಿತ್ತು.

ಮುಂದಿನ ಎರಡು ದಿನಗಳವರೆಗೆ ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ದಿತ್ವಾ ಚಂಡಮಾರುತದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಾದ್ಯಂತ ಸುಮಾರು 6,000 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್ಎಸ್ಆರ್ ರಾಮಚಂದ್ರನ್ ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಎರಡರ 28 ತಂಡಗಳನ್ನು ನಿಯೋಜಿಸಲಾಗಿದೆ. ನಾವು ಹೆಚ್ಚುವರಿಯಾಗಿ 10 ತಂಡಗಳನ್ನು ಕೇಳಿದ್ದೇವೆ. ಅವರು ವಿಮಾನದ ಮೂಲಕ ಬರುತ್ತಿದ್ದಾರೆ. ಯಾವುದೇ ವಿಪತ್ತು ಸಂಭವಿಸಿದಲ್ಲಿ ನಾವು ಕೋಸ್ಟ್ ಗಾರ್ಡ್‌ನ ಸಹಾಯವನ್ನು ಕೂಡ ಕೇಳಿದ್ದೇವೆ ಎಂದು ರಾಮಚಂದ್ರನ್ ಹೇಳಿದ್ದಾರೆ.

ಪ್ರತಿಕೂಲ ಹವಾಮಾನದ ಹಿನ್ನೆಲೆ, ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ 54 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಚೆನ್ನೈನಿಂದ ತೂತುಕುಡಿ, ಮಧುರೈ ಮತ್ತು ತಿರುಚ್ಚಿಗೆ ಹೋಗುವ ಹದಿನಾರು ವಿಮಾನಗಳ ಸಂಚಾರ ರದ್ದಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅದೇ ರೀತಿ, ತೂತುಕುಡಿ, ತಿರುಚ್ಚಿ ಮತ್ತು ಮಧುರೈನಿಂದ ಚೆನ್ನೈಗೆ ಹೋಗುವ 16 ವಿಮಾನಗಳ ಸಂಚಾರವನ್ನು ಸಹ ಸ್ಥಗಿತಗೊಳಿಸಲಾಗಿದೆ.

ಮಧುರೈ, ತಿರುಚ್ಚಿ ಮತ್ತು ಪುದುಚೇರಿಯಿಂದ ಬೆಂಗಳೂರು ಮತ್ತು ಹೈದರಾಬಾದ್‌ಗೆ ಹೋಗುವ 22 ವಿಮಾನಗಳ ಸಂಚಾರ ಕೂಡ ಸ್ಥಗಿತಗೊಂಡಿದೆ.

ಭಾರತೀಯ ವಾಯುಪಡೆಯ ವಿಮಾನವು ನಾಲ್ಕು ಸ್ನಿಫರ್ ನಾಯಿಗಳು ಸೇರಿದಂತೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ 80 ಸಿಬ್ಬಂದಿಯೊಂದಿಗೆ ಪರಿಹಾರ ಸಾಮಗ್ರಿಗಳು ಮತ್ತು ರಕ್ಷಣಾ ಸಾಧನಗಳೊಂದಿಗೆ ಶ್ರೀಲಂಕಾವನ್ನು ತಲುಪಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...