Homeಮುಖಪುಟಅಸ್ಸಾಂ ಸರ್ಕಾರದಿಂದ ಮತ್ತೆ ತೆರವು ಕಾರ್ಯಾಚರಣೆ : ನೆಲೆ ಕಳೆದುಕೊಂಡ 1,500 ಮುಸ್ಲಿಂ ಕುಟುಂಬಗಳು

ಅಸ್ಸಾಂ ಸರ್ಕಾರದಿಂದ ಮತ್ತೆ ತೆರವು ಕಾರ್ಯಾಚರಣೆ : ನೆಲೆ ಕಳೆದುಕೊಂಡ 1,500 ಮುಸ್ಲಿಂ ಕುಟುಂಬಗಳು

- Advertisement -
- Advertisement -

ಅಸ್ಸಾಂನ ನಾಗಾಂವ್ ಜಿಲ್ಲೆಯ ಲುಟಿಮರಿ ಪ್ರದೇಶದ 795 ಹೆಕ್ಟೇರ್ ಮೀಸಲು ಅರಣ್ಯ ಭೂಮಿಯ ಒತ್ತುವರಿ ತೆರವು ಕಾರ್ಯಾಚರಣೆ ಶನಿವಾರ (ನ.29) ಪ್ರಾರಂಭಗೊಂಡಿದ್ದು, ಇದರಿಂದ ಈ ಪ್ರದೇಶದಲ್ಲಿದ್ದ ಸುಮಾರು 1,500 ಬಂಗಾಳಿ ಮಾತನಾಡುವ ಮುಸ್ಲಿಂ ಕುಟುಂಬಗಳು ನೆಲೆ ಕಳೆದುಕೊಂಡಿದೆ.

“ಮೂರು ತಿಂಗಳ ಹಿಂದೆಯೇ ಮನೆಗಳನ್ನು ಖಾಲಿ ಮಾಡುವಂತೆ ಇಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಲಾಗಿತ್ತು. ಅವರು ಹೆಚ್ಚುವರಿ ಸಮಯ ಕೇಳಿದ್ದರು. ಅದರಂತೆ ಅವರಿಗೆ ಹೆಚ್ಚುವರಿ ಸಮಯ ನೀಡಲಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ scroll.in ವರದಿ ಮಾಡಿದೆ.

ಶನಿವಾರ ತೆರವು ಕಾರ್ಯಾಚರಣೆ ಪ್ರಾರಂಭಿಸುವಾಗ 1,100ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮನೆಗಳನ್ನು ಕೆಡವಿ ಸಾಮಗ್ರಿಗಳೊಂದಿಗೆ ತೆರಳಿದ್ದರು. ಉಳಿದ ಮನೆಗಳನ್ನು ಕಾರ್ಯಾಚರಣೆ ವೇಳೆ ಕೆಡವಲಾಯಿತು ವರದಿ ಹೇಳಿದೆ.

“ತೆರವು ಕಾರ್ಯಾಚರಣೆಯ ನಂತರ ನಮಗೆ ಉಳಿಯಲು ಸ್ಥಳವಿಲ್ಲದಂತಾಗಿದೆ. ಸರ್ಕಾರ ನಮಗೆ ಒಂದು ಸ್ಥಳ ಒದಗಿಸಿದ್ದರೆ ಒಳ್ಳೆಯದಿತ್ತು. ನಾವು ಜಿಲ್ಲಾಡಳಿತದ ಆದೇಶ ಪಾಲಿಸಿ ಸ್ವಯಂ ಪ್ರೇರಣೆಯಿಂದ ಮನೆಗಳನ್ನು ತೊರೆದು ಬಂದಿದ್ದೇವೆ” ಎಂದು ಮನೆ ಕಳೆದುಕೊಂಡಿರುವ ವ್ಯಕ್ತಿಯೊಬ್ಬರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಸ್ಸಾಂ ಟ್ರಿಬ್ಯೂನ್ ವರದಿ ಮಾಡಿದೆ.

ಅತಿಕ್ರಮಣಗಳನ್ನು ತೆರವುಗೊಳಿಸುವುದರಿಂದ ಅರಣ್ಯ ಭೂಮಿಯಲ್ಲಿ ಮಾನವ-ಆನೆ ಸಂಘರ್ಷವನ್ನು ತಡೆಯಲು ಸಹಾಯವಾಗುತ್ತದೆ ಎಂದು ಅಸ್ಸಾಂ ಅರಣ್ಯ ಇಲಾಖೆಯ ವಿಶೇಷ ಮುಖ್ಯ ಕಾರ್ಯದರ್ಶಿ ಎಂ.ಕೆ. ಯಾದವ್ ಹೇಳಿದ್ದಾಗಿ ಅಸ್ಸಾಂ ಟ್ರಿಬ್ಯೂನ್ ತಿಳಿಸಿದೆ.

2016ರಲ್ಲಿ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಅತಿಕ್ರಮಣ ತೆರವು ಹೆಸರಿನಲ್ಲಿ ನಿರಂತರವಾಗಿ ಮನೆಗಳ ನೆಲಸಮ ಕಾರ್ಯ ನಡೆಯುತ್ತಿದೆ. ಹೆಚ್ಚಾಗಿ ಬಂಗಾಳಿ ಮಾತನಾಡುವ ಮುಸ್ಲಿಮರು ವಾಸಿಸುವ ಪ್ರದೇಶಗಳನ್ನು ಗುರಿಯಾಗಿಸಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮೇ 2021ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯನ್ನು ಅತಿಕ್ರಮಣಗಳಿಂದ ಮುಕ್ತಗೊಳಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಸ್ಥಳಾಂತರಗೊಂಡವರಲ್ಲಿ ಅನೇಕರು ತಮ್ಮ ಕುಟುಂಬಗಳು ದಶಕಗಳಿಂದ ಈ ಪ್ರದೇಶಗಳಲ್ಲಿ ವಾಸಿಸುತ್ತಿತ್ತು. ಬ್ರಹ್ಮಪುತ್ರ ನದಿಯ ಸವೆತದಿಂದಾಗಿ ನದಿ ತೀರದ ಪ್ರದೇಶಗಳಲ್ಲಿನ ತಮ್ಮ ಜಮೀನುಗಳು ಕೊಚ್ಚಿಹೋದ ನಂತರ ತಮ್ಮ ಪೂರ್ವಜರು ಈ ಪ್ರದೇಶಗಳಲ್ಲಿ ನೆಲೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...