Homeಕರ್ನಾಟಕಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು 

ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. 

ನವೆಂಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ಸಹಯೋಗದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ:

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. 1882 ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ, ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ ಎಂದರು. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದು ಹೇಳಿದರು.  

ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ:

ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣಗೌಡರು ನನಗೆ ಪರಿಚಿತರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದರು. 

ಇದೇ ವೇಳೆ ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ 50 ಲಕ್ಷ ರೂಪಾಯಿ ಬೇಡಿಕೆಯನ್ನು ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. 

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು: ಭರವಸೆ

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. 

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಡಾಧಾರ, ಯು. ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ  ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು. 

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಭೈರತಿ ಸುರೇಶ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ಅಂತರಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಅರೆಭಾಷೆ  ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯತ್ರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...