Homeಮುಖಪುಟನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

- Advertisement -
- Advertisement -

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಸಚಿವರು ಪ್ರತಿಪಕ್ಷ ನಾಯಕರಲ್ಲಿ ಮನವಿ ಮಾಡಿದ್ದಾರೆ.

ಸಂಸತ್ ಕಲಾಪ ಸ್ಥಗಿತಗೊಳ್ಳಬಾರದು. ಅದು ಸುಗಮವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದೆ ಎಂದು ಸರ್ವಪಕ್ಷ ಸಭೆಯ ಬಳಿಕ ಕಿರಣ್ ರಿಜಿಜು ಹೇಳಿದ್ದಾರೆ.

ಎಸ್‌ಐಆರ್ ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಅಂಗೀಕರಿಸಲಾಗಿದೆಯೇ? ಎಂದು ಕೇಳಿದಾಗ, ಇಂದು ಸಂಜೆ ಸಭೆ ಸೇರಲಿರುವ ಸಂಸತ್ತಿನ ಕಾರ್ಯ ಕಲಾಪಗಳ ಸಲಹಾ ಸಮಿತಿ (ಬಿಎಸಿ) ಅಧಿವೇಶನದ ಕಾರ್ಯಸೂಚಿಯನ್ನು ನಿರ್ಧರಿಸುತ್ತದೆ ಎಂದು ರಿಜಿಜು ಪ್ರತಿಕ್ರಿಯಿಸಿದ್ದಾರೆ.

ಆಡಳಿತ ತಮ್ಮ ಪಕ್ಷ ವಿರೋಧ ಪಕ್ಷಗಳೊಂದಿಗೆ ಸಹಕರಿಸಿದರೆ ಸುಗಮವಾಗಿ ಕಲಾಪ ನಡೆಸಲು ನಮ್ಮ ಪಕ್ಷ ಸಹಕರಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

“ಸರ್ಕಾರವು ಎಸ್‌ಐಆರ್‌ನಂತಹ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು. ಎಸ್‌ಐಆರ್ ಪ್ರಕ್ರಿಯೆ ವೇಳೆ 40 ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಕಲ್ಯಾಣ್ ಬ್ಯಾನರ್ಜಿ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಎಸ್‌ಐಆರ್ ಕುರಿತು ಚರ್ಚೆಗೆ ಒತ್ತಾಯಿಸುವ ವಿಷಯದಲ್ಲಿ ಎಲ್ಲಾ ವಿರೋಧ ಪಕ್ಷಗಳು ಒಮ್ಮತದ ನಿರ್ಧಾರಕ್ಕೆ ಬಂದಿವೆ ಎಂದು ಡಿಎಂಕೆಯ ತಿರುಚಿ ಶಿವ ಹೇಳಿದ್ದಾರೆ.

ಎಸ್‌ಐಆರ್ ಕುರಿತು ಚರ್ಚೆಗೆ ಅವಕಾಶ ನೀಡದಿದ್ದರೆ ಸಂಸತ್ ಕಲಾಪ ನಡೆಯಲು ಅವಕಾಶ ಕೊಡುವುದಿಲ್ಲ ಎಂದು ಸಮಾಜವಾದಿ ಪಕ್ಷ ಹೇಳಿದೆ.

“ಸಮಾಜವಾದಿ ಪಕ್ಷವು ಎಸ್‌ಐಆರ್ ವಿಷಯವನ್ನು ಮುಂದಿಟ್ಟಿದೆ. ಏಕೆಂದರೆ, ಎಸ್‌ಐಆರ್‌ನಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿರುವುದನ್ನು ನಾವು ನೋಡಿದ್ದೇವೆ. ಮೊದಲು, ನಾವು ಕೇಳುತ್ತಿದ್ದೆವು, ಆದರೆ ಈಗ ಜನರ ಹೆಸರು ತೆಗೆದು ಹಾಕುತ್ತಿರುವುದನ್ನು ನೋಡುತ್ತಿದ್ದೇವೆ. ಬಿಹಾರದಲ್ಲಿ, ದುಷ್ಕೃತ್ಯಗಳು ನಡೆದಿವೆ. ನಾವು ಅದರ ಬಗ್ಗೆ ಚರ್ಚೆಗೆ ಒತ್ತಾಯಿಸಿದ್ದೇವೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ. ಚುನಾವಣಾ ಆಯೋಗ ಎಸ್‌ಐಆರ್ ಅಕ್ರಮಗಳಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

“ತಪ್ಪು ನಡೆಯುತ್ತಿರುವಾಗ ಚರ್ಚೆ ಏಕೆ ಮಾಡಬಾರದು? ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ತೆಗೆದು ಹಾಕಿದರೆ ಚರ್ಚೆ ನಡೆಯುವುದಿಲ್ಲವೇ?” ಎಂದು ಯಾದವ್ ಪ್ರಶ್ನಿಸಿದ್ದಾರೆ.

“ನಾನು ಅನೇಕ ಸ್ಥಳಗಳಿಗೆ ಹೋಗಿದ್ದೇನೆ, ಇನ್ನೂ ಹೋಗುತ್ತಿದ್ದೇನೆ. ನಾನು 1967ರಿಂದ ಮತದಾರನಾಗಿದ್ದೇನೆ. ಇಟಾವಾ ಜಿಲ್ಲೆಯಲ್ಲಿ ನಮ್ಮೆಲ್ಲರನ್ನೂ ಸಿ ವರ್ಗಕ್ಕೆ ಸೇರಿಸಲಾಗಿದೆ. ಇಡೀ ಜಿಲ್ಲೆಯ ಪ್ರತಿಯೊಬ್ಬರನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ. ನಮ್ಮ ಜಿಲ್ಲೆಯಿಂದ ಸಂಸತ್ತಿನ ಎರಡೂ ಸದನಗಳಲ್ಲಿ ಏಳು ಸಂಸದರು ಮತ್ತು ಮೂವರು ಶಾಸಕರಿದ್ದಾರೆ ಮತ್ತು ಅವರಲ್ಲಿ ಪ್ರತಿಯೊಬ್ಬರನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ ಎಂದು ಯಾದವ್ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಇದು ಕೇವಲ ಫಾರ್ಮಾಲಿಟಿಗೆ ನಡೆಸಿದ ಸಭೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರತಿಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಅಲ್ಪಾವಧಿಯ ಚರ್ಚೆಗೆ ವಿಷಯವನ್ನು ಪಟ್ಟಿ ಮಾಡುವ ಮೂಲಕ ತನ್ನ ಉದ್ದೇಶಗಳನ್ನು ಸ್ಪಷ್ಟಪಡಿಸಿದೆ ಎಂದಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದ ಕಾರ್ಯಸೂಚಿಯನ್ನು ಚರ್ಚಿಸಲು ಮೋದಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ಕೇವಲ ಫಾರ್ಮಾಲಿಟಿ ಮಾತ್ರ ಎಂದು ಜೈರಾಮ್ ರಮೇಶ್ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

15 ದಿನಗಳ ಈ ಅಧಿವೇಶನವು ಸಂಸತ್ತಿನ ಇತಿಹಾಸದಲ್ಲಿ ಅತ್ಯಂತ ಕಡಿಮೆ ಅವಧಿಯದ್ದಾಗಿರಲಿದೆ. ಮೋದಿ ಸರ್ಕಾರವು 13 ಮಸೂದೆಗಳನ್ನು ಅಂಗೀಕಾರಕ್ಕಾಗಿ ಪಟ್ಟಿ ಮಾಡಿದೆ. ಇವುಗಳಲ್ಲಿ ಒಂದು ಸುಗ್ರೀವಾಜ್ಞೆಯನ್ನು ಬದಲಾಯಿಸುತ್ತದೆ ಮತ್ತು ಎರಡು ಲೋಕಸಭೆಯ ಸಮಿತಿಯ ಮೂಲಕ ಹೋಗಿವೆ. ಇನ್ನುಳಿದ ಹತ್ತು ಮಸೂದೆಗಳನ್ನು ಸಂಬಂಧಪಟ್ಟ ಸ್ಥಾಯಿ ಸಮಿತಿ ಪರಿಶೀಲಿಸಿಲ್ಲ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಸಹಜವಾಗಿಯೇ, ಪ್ರಸ್ತುತ ಪಟ್ಟಿ ಮಾಡದ ಮಸೂದೆಯನ್ನು ಅಲ್ಪಾವಧಿಯ ಅಧಿವೇಶನದ ನಂತರದ ಭಾಗದಲ್ಲಿ ಇದ್ದಕ್ಕಿದ್ದಂತೆ ಮಂಡಿಸುವ ಸಾಧ್ಯತೆಯಿದೆ ಎಂದು ರಮೇಶ್ ಹೇಳಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 15 ಕಲಾಪಗಳು ನಡೆಯಲಿವೆ. ಸಂಸತ್ತಿನ ಅಧಿವೇಶನಗಳು ಸಾಮಾನ್ಯವಾಗಿ 20 ಕಲಾಪಗಳನ್ನು ಹೊಂದಿರುತ್ತವೆ.

ರಾಷ್ಟ್ರೀಯ ಭದ್ರತೆ, ವಾಯು ಮಾಲಿನ್ಯ, ಮತದಾರರ ಪಟ್ಟಿಯ ಪರಿಷ್ಕರಣೆ, ರೈತರ ಸಮಸ್ಯೆಗಳು ಮತ್ತು ವಿದೇಶಾಂಗ ನೀತಿಯ ಕುರಿತು ಚರ್ಚೆ ನಡೆಸಬೇಕೆಂದು ತಮ್ಮ ಪಕ್ಷ ಒತ್ತಾಯಿಸಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್ ಹೇಳಿದ್ದಾರೆ.

ಪ್ರಧಾನಿ ಮತ್ತು ಗೃಹ ಸಚಿವರ ನೇತೃತ್ವದಲ್ಲಿ ಸರ್ಕಾರವು ಭಾರತದ ಪ್ರಜಾಪ್ರಭುತ್ವ ಮತ್ತು ಸಂಸದೀಯ ಸಂಪ್ರದಾಯಗಳನ್ನು ಕೊನೆಗೊಳಿಸಲು ನೋಡುತ್ತಿರುವಂತೆ ತೋರುತ್ತಿದೆ ಎಂದು ಸರ್ವಪಕ್ಷ ಸಭೆಯ ನಂತರ ಗೊಗೊಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೆಹಲಿ ಸ್ಫೋಟದ ನಂತರ ರಾಷ್ಟ್ರೀಯ ಭದ್ರತೆಯ ಬಗ್ಗೆ ಚರ್ಚೆ ನಡೆಯಬೇಕೆಂದು ನಮ್ಮ ಪಕ್ಷ ಒತ್ತಾಯಿಸಿದೆ. ರಾಷ್ಟ್ರೀಯ ಭದ್ರತೆಯ ಬಗ್ಗೆ ಅಲ್ಪಾವಧಿಯ ಚರ್ಚೆಯನ್ನೂ ಸರ್ಕಾರ ಬಯಸುವುದಿಲ್ಲ ಎಂದು ತೋರುತ್ತದೆ. ಎರಡನೆಯದ್ದು ಪ್ರಜಾಪ್ರಭುತ್ವದ ಭದ್ರತೆ. ಚುನಾವಣೆಯ ಮೊದಲು, ಚುನಾವಣೆಯ ಸಂದರ್ಭ ಮತ್ತು ನಂತರ ಚುನಾವಣಾ ಆಯೋಗವು ಪಕ್ಷಪಾತದಿಂದ ವರ್ತಿಸುತ್ತಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯ ಬಗ್ಗೆ ಚರ್ಚೆ ನಡೆಯಬೇಕು ಎಂದು ಗೊಗೊಯ್ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್‌ನ ಪ್ರಮೋದ್ ತಿವಾರಿ, ಡಿಎಂಕೆಯ ಟಿ.ಆರ್ ಬಾಲು, ಟಿಎಂಸಿಯ ಡೆರೆಕ್ ಒ’ಬ್ರಿಯಾನ್ ಮತ್ತು ಐಯುಎಂಎಲ್‌ನ ಇ.ಟಿ ಮೊಹಮ್ಮದ್ ಬಶೀರ್ ಭಾಗವಹಿಸಿದ್ದರು. ಸರ್ಕಾರ ಕಡೆಯಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...