Homeಮುಖಪುಟಜಾತಿ ಕಾರಣಕ್ಕೆ ಪ್ರೇಮಿಯ ಮರ್ಯಾದೆಗೇಡು ಹತ್ಯೆ; ಶವವನ್ನೇ ಮದುವೆಯಾದ ಯುವತಿ

ಜಾತಿ ಕಾರಣಕ್ಕೆ ಪ್ರೇಮಿಯ ಮರ್ಯಾದೆಗೇಡು ಹತ್ಯೆ; ಶವವನ್ನೇ ಮದುವೆಯಾದ ಯುವತಿ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನಲ್ಲಿ 20 ವರ್ಷದ ವ್ಯಕ್ತಿಯೊಬ್ಬನನ್ನು ಥಳಿಸಿ, ಗುಂಡು ಹಾರಿಸಿ, ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಲಾಗಿದೆ. ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಆತನ ಗೆಳತಿ, ಹಣೆಯ ಮೇಲೆ ಸಿಂಧೂರ ಹಚ್ಚಿಕೊಂಡು, ಆತನ ಮನೆಯಲ್ಲಿ ಸೊಸೆಯಾಗಿ ವಾಸಿಸುವುದಾಗಿ ಪ್ರತಿಜ್ಞೆ ಮಾಡಿದಳು.

ಯುವತಿ ಆಂಚಲ್‌ನ ಪ್ರಿಯಕರ, ಸಕ್ಷಾಮ್ ಟೇಟ್ ಅವರನ್ನು ಗುರುವಾರ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಥಳಿಸಿ, ತಲೆಗೆ ಗುಂಡು ಹಾರಿಸಿ, ನಂತರ ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಯಿತು.

ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಅಂಚಲ್, ಯುವಕನ ಹಣೆಗೆ ಸಿಂಧೂರವನ್ನು ಇಟ್ಟು ಪ್ರತಿಜ್ಞೆ ಮಾಡಿದ್ದಾಳೆ.

ಆಂಚಲ್ ತನ್ನ ಸಹೋದರರ ಮೂಲಕ ಪರಿಚಯವಾದ ಯುವಕನನ್ನು ಪ್ರೀತಿಸುತ್ತಿದ್ದಳು. ನಂತರ ಆಗಾಗ್ಗೆ ಅವನ ಮನೆಗೆ ಭೇಟಿ ನೀಡುತ್ತಿದ್ದಳು. ತಮ್ಮ ಪ್ರೇಮ ಸಂಬಂಧದ ಮೂರು ವರ್ಷಗಳಲ್ಲಿ, ಕಾರಣಕ್ಕೆ ಅವರು ತಮ್ಮ ಕುಟುಂಬದಿಂದ ಒತ್ತಡ ಎದುರಿಸಿದರು. ಆದರೂ ಅವರು ಪರಸ್ಪರ ಸಿಗುತ್ತಿದ್ದರು.

ಆಂಚಲ್‌ನ ಸಹೋದರರು ಮತ್ತು ತಂದೆ, ಸಕ್ಷಾಮ್ ಟೇಟ್ ಅವರನ್ನು ಥಳಿಸಿ ತಲೆಗೆ ಗುಂಡು ಹಾರಿಸಿ, ಕಲ್ಲಿನಿಂದ ತಲೆಗೆ ಹಲ್ಲೆ ಮಾಡಿ ಕೊಂದರು.

ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಆಂಚಲ್, ಯುವಕನ ದೇಹಕ್ಕೆ ಅರಿಶಿನ ಮತ್ತು ಹಣೆಗೆ ಸಿಂಧೂರ ಹಚ್ಚಿ, ಪ್ರೇಮಿಯ ಮೃತದೇಹವನ್ನೇ ಮದುವೆಯಾದರು. ತನ್ನ ಉಳಿದ ಜೀವನವನ್ನು ಪ್ರೇಮಿಯ ಮನೆಯಲ್ಲಿ ಆತನ ಪತ್ನಿಯಾಗಿ ಬದುಕಲು ನಿರ್ಧರಿಸಿದರು.

ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸುತ್ತಾ, ‘”ಸಾಕ್ಷಮ್ ಸಾವಿನಲ್ಲೂ ನಮ್ಮ ಪ್ರೀತಿ ಗೆದ್ದಿತು, ನನ್ನ ತಂದೆ ಮತ್ತು ಸಹೋದರರು ಸೋತರು. ಟೇಟ್ ಸತ್ತಿದ್ದರೂ, ಅವರ ಪ್ರೀತಿ ಇನ್ನೂ ಜೀವಂತವಾಗಿದೆ” ಎಂದು ಅವರು ಹೇಳಿದರು.

ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...