Homeಕರ್ನಾಟಕ‘ನನ್ನ ರಾಜಕೀಯದ ಬ್ರ್ಯಾಂಡ್ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ’: ಡಿ.ಕೆ. ಶಿವಕುಮಾರ್ 

‘ನನ್ನ ರಾಜಕೀಯದ ಬ್ರ್ಯಾಂಡ್ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ’: ಡಿ.ಕೆ. ಶಿವಕುಮಾರ್ 

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿನ ಕದನ ವಿರಾಮದ ನಂತರ ಸಿಎಂ ಜೊತೆಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನನ್ನ ಇತಿಮಿತಿ ತಿಳಿದಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಮತ್ತು ಮುಖ್ಯಮಂತ್ರಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ಅಧ್ಯಕ್ಷನಾಗಿ, ನನ್ನ ಇತಿಮಿತಿ ಗೊತ್ತಿದೆ. ಸಿಎಂ ಜೊತೆಗಿನ ಭಿನ್ನಾಭಿಪ್ರಾಯ ಕುರಿತು ಎಲ್ಲಿಯೂ, ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಅಥವಾ ಭಿನ್ನಾಭಿಪ್ರಾಯ ವ್ಯಕ್ತಪಡಿಸಿಲ್ಲ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಕರ್ನಾಟಕದ ಜನರ ಬಹಳಷ್ಟು ಆಕಾಂಕ್ಷೆಗಳಿವೆ. ಅವರಿಗಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ. ನಮ್ಮ ಗುರಿ 2028 ಮತ್ತು 2029. ಸಿಎಂ ಮತ್ತು ನಾನು ಕಾರ್ಯತಂತ್ರ ರೂಪಿಸುತ್ತೇವೆ ಎಂದು ಹೇಳಿದರು

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ದೂರವಾಣಿ ಮೂಲಕ ಕರೆ ಮಾಡಿ ಸಿದ್ದರಾಮಯ್ಯ ಅವರೊಂದಿಗೆ ಉಪಾಹಾರ ಸಭೆ ನಡೆಸುವಂತೆ ಸಲಹೆ ನೀಡಿದ್ದರು ಎನ್ನಲಾಗಿದೆ. ಸಭೆಯಲ್ಲಿ ಏನಾಯಿತು ಎಂಬುದನ್ನು ಬಹಿರಂಗಪಡಿಸಲು ನಿರಾಕರಿಸಿದ ಶಿವಕುಮಾರ್, ನಾನು ಎಲ್ಲರೊಂದಿಗೆ ಚರ್ಚಿಸಿದ್ದೇನೆ. ಸಭೆಯಲ್ಲಿ ಏನಾಯಿತು ಎಂಬುದರ ಕುರಿತು ನಾನು ಚರ್ಚಿಸುವುದಿಲ್ಲ” ಎಂದು ಅವರು ಹೇಳಿದರು.

ನೀವು ಗಮನಿಸಿದಂತೆ ನಾನು ಏಕಾಂಗಿಯಾಗಿ ದೆಹಲಿಗೆ ಹೋಗುತ್ತೇನೆ. 8-10 ಶಾಸಕರನ್ನು ನನ್ನೊಂದಿಗೆ ಕರೆದುಕೊಂಡು ಹೋಗಬಹುದು, ಆದರೆ ನಾನು ಹಾಗೆ ಮಾಡುವುದಿಲ್ಲ. ಕೆಪಿಸಿಸಿ ಅಧ್ಯಕ್ಷನಾಗಿ ಎಲ್ಲರನ್ನೂ ನನ್ನೊಂದಿಗೆ ಕರೆದುಕೊಂಡು ಹೋಗಬೇಕು. ಎಲ್ಲಾ 140 ಶಾಸಕರು ನಮ್ಮ ನಾಯಕರು. ಎಚ್‌ಡಿ ಕುಮಾರಸ್ವಾಮಿ ಸರ್ಕಾರದ ಭಾಗವಾಗಿದ್ದಾಗಲೂ ನಾನು ಪ್ರಾಮಾಣಿಕನಾಗಿದ್ದೆ. ಕುಮಾರಸ್ವಾಮಿ ಅವರ ತಂದೆ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರಿಗೆ ತಮ್ಮ ಮಗನ ಸರ್ಕಾರವನ್ನು ಉಳಿಸಲು ನಾನು ಎಷ್ಟು ಪ್ರಯತ್ನ ಮಾಡಿದ್ದೇನೆಂದು ತಿಳಿದಿದೆ. ನನ್ನ ರಾಜಕೀಯದ ಬ್ರ್ಯಾಂಡ್ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ ಎಂದರು.

ಆರ್‌ಡಿಪಿಆರ್ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ದೆಹಲಿಯಲ್ಲಿ ತಮ್ಮ ತಂದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, “ಒಬ್ಬ ಮಗ ತನ್ನ ತಂದೆಯೊಂದಿಗೆ ಮಾತನಾಡಲು ಅರ್ಜಿ ಸಲ್ಲಿಸಬೇಕೇ? ತಂದೆ ಮತ್ತು ಮಗ ಭೇಟಿಯಾಗುವುದು ರಾಜಕೀಯವಲ್ಲ” ಎಂದು ಟೀಕಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...