Homeಮುಖಪುಟ"ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ" : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

“ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ” : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ದೆಹಲಿಯ ವಾಯು ಮಾಲಿನ್ಯದಂತಹ ನಿರ್ಣಾಯಕ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದು ನಾಟಕವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ಕೊಟ್ಟಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳ ಮುಂದೆ ಮಾತನಾಡಿದ್ದ ಪ್ರಧಾನಿ ಮೋದಿ, ಪ್ರತಿಪಕ್ಷಗಳನ್ನು ಟೀಕಿಸಿ “ವಿಷಯಗಳು ಸ್ಪಷ್ಟವಾಗಿರಬೇಕು, ಸಂಸತ್ತು ನಾಟಕದ ವೇದಿಕೆಯಲ್ಲ” ಎಂದಿದ್ದರು.

ಪ್ರಧಾನಿಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, “ಚುನಾವಣಾ ಪರಿಸ್ಥಿತಿ, ಎಸ್‌ಐಆರ್ ಮತ್ತು ಮಾಲಿನ್ಯ ದೊಡ್ಡ ಸಮಸ್ಯೆಗಳು, ನಾವು ಅವುಗಳ ಬಗ್ಗೆ ಚರ್ಚಿಸೋಣ. ಸಂಸತ್ತು ಇರುವುದು ಏತಕ್ಕೆ? ಈ ವಿಷಯಗಳೆಲ್ಲ ನಾಟಕವಲ್ಲ. ಸಮಸ್ಯೆಗಳನ್ನು ಪ್ರಸ್ತಾಪಿಸಿ ಅವುಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ. ಜನರಿಗೆ ಸಂಬಂಧಿಸಿದ ಮುಖ್ಯವಾದ ವಿಷಯಗಳ ಬಗ್ಗೆ ಪ್ರಜಾಸತ್ತಾತ್ಮಕ ಚರ್ಚೆಗಳಿಗೆ ಅವಕಾಶ ನೀಡದಿರುವುದು ನಾಟಕ” ಎಂದು ಹೇಳಿದ್ದಾರೆ.

ಅಧಿವೇಶನಕ್ಕೂ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಚಳಿಗಾಲದ ಅಧಿವೇಶನವನ್ನು ನಾಟಕೀಯ ವೇದಿಕೆಯನ್ನಾಗಿ ಪರಿವರ್ತಿಸಬೇಡಿ. ತಮ್ಮ ಅಧಿಕೃತ ಜವಾಬ್ದಾರಿಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡಬಹುದು ಎಂದು ಹೇಳುವ ಮೂಲಕ ಪ್ರತಿಪಕ್ಷಗಳನ್ನು ಕೆಣಕಿದ್ದರು.

ಈ ಹಿಂದೆ ಕಲಾಪಗಳಿಗೆ ಅಡ್ಡಿಪಡಿಸಲು ಪ್ರತಿಪಕ್ಷಗಳು ಮಾಡಿದ್ದ ತಂತ್ರಗಳನ್ನು ಟೀಕಿಸಿದ್ದ ಮೋದಿ, ಸಂಸದರು ಈಗ ತಮ್ಮ ತಂತ್ರವನ್ನು ಬದಲಾಯಿಸಿಕೊಳ್ಳಬೇಕು ಎಂದು ವ್ಯಂಗ್ಯವಾಡಿದ್ದರು.

ಕಳೆದ 10 ವರ್ಷಗಳಿಂದ ವಿರೋಧ ಪಕ್ಷಗಳು ಆಡುತ್ತಿರುವ ಆಟ ಇನ್ನು ಮುಂದೆ ಜನರ ಮುಂದೆ ನಡೆಯುವುದಿಲ್ಲ. ಅವರು ತಮ್ಮ ತಂತ್ರವನ್ನು ಬದಲಾಯಿಸಿಕೊಳ್ಳಬೇಕು. ನಾನು ಅವರಿಗೆ ಕೆಲವು ಸಲಹೆಗಳನ್ನು ನೀಡಲು ಸಿದ್ಧನಿದ್ದೇನೆ ಎಂದು ಹೇಳಿದ್ದರು.

ನಾಟಕ ಮಾಡಲು ಬಯಸುವವರು ಮಾಡಬಹುದು. ಆದರೆ, ಇಲ್ಲಿ ಸ್ಪಷ್ಟತೆ ಇರಬೇಕು, ನಾಟಕವಲ್ಲ. ನೀತಿ ನಿಯಮಗಳಿಗೆ ಒತ್ತು ನೀಡಬೇಕು, ಘೋಷಣೆಗಳಿಗಲ್ಲ. ಮೊದಲ ಬಾರಿಗೆ ಸಂಸದರಾದವರು ತಮ್ಮ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆಗಳ ಬಗ್ಗೆ ಮಾತನಾಡಲು ಅವಕಾಶ ಸಿಗದ ಕಾರಣ ನಿರಾಶೆಗೊಳ್ಳುತ್ತಿದ್ದಾರೆ ಎಂದಿದ್ದರು.

ಮೊದಲ ಬಾರಿಗೆ ಸಂಸದರಾದವರಿಗೆ, ಅವರ ಪಕ್ಷ ಯಾವುದೇ ಆಗಿರಲಿ ಅವಕಾಶ ನೀಡಬೇಕು. ನಾವು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ನಾಟಕ ಮಾಡಲು ಹಲವು ಸ್ಥಳಗಳಿವೆ, ಸಂಸತ್ತು ಅದಕ್ಕೆ ವೇದಿಕೆಯಲ್ಲ ಎಂದು ಹೇಳಿದ್ದರು.

ಈ ಬಾರಿ ಕಡಿಮೆ ಅವಧಿಯ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಸರ್ಕಾರ 14 ಮಸೂದೆಗಳ ಮಂಡನೆ ಸೇರಿದಂತೆ ದೊಡ್ಡ ಮಟ್ಟದ ಶಾಸಕಾಂಗ ಕಾರ್ಯಸೂಚಿಯನ್ನು ರೂಪಿಸಿದೆ.

ನವೆಂಬರ್ 10ರ ದೆಹಲಿ ಭಯೋತ್ಪಾದಕ ದಾಳಿಯ ನಂತರದ ರಾಷ್ಟ್ರೀಯ ಭದ್ರತಾ ಕಾಳಜಿಗಳು, ವಿಶೇಷವಾಗಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಹಲವಾರು ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಆತ್ಮಹತ್ಯೆಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸಿವೆ.

ಈ ಬಾರಿ ಚಳಿಗಾಲದ ಅಧಿವೇಶನದಲ್ಲಿ 15 ಕಲಾಪಗಳು ನಡೆಯಲಿವೆ. ಸಾಮಾನ್ಯ 20 ಕಲಾಪಗಳು ನಡೆಯಬೇಕು. ಆದರೆ, ಈ ಬಾರಿ ಅಧಿವೇಶನದ ಸಮಯ ಕಡಿತಗೊಳಿಸಲಾಗಿದೆ.

ಸರ್ಕಾರ ಸಂಸತ್ತಿನ ಹಳಿತಪ್ಪಿಸುತ್ತದೆ ಮತ್ತು ಅಧಿವೇಶನದ ಅವಧಿಯನ್ನು ಕಡಿಮೆ ಮಾಡುವ ಮೂಲಕ ಶಾಸಕಾಂಗವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...