Homeಮುಖಪುಟಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ 'ಬೀಫ್‌ ಕರಿ' ಲೇಬಲ್‌'; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

- Advertisement -
- Advertisement -

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ ‘ಬೀಫ್‌ ಕರಿ’ ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ ಗೊಂದಲದಲ್ಲಿ ಕೊನೆಗೊಂಡಿತು.

ಭೀಪ್‌ ವಿಚಾಅರಕ್ಕೆ ಆರಂಭವಾದ ಗಲಾಟೆ ಪೊಲೀಸರ ಹಸ್ತಕ್ಷೇಪಕ್ಕೆ ಕಾರಣವಾಯಿತು. “ಬೀಫ್‌” ಎಂಬ ಪದವನ್ನು ಸಾಮಾನ್ಯವಾಗಿ ಈ ಪ್ರದೇಶದಲ್ಲಿ ಎಮ್ಮೆ ಮಾಂಸಕ್ಕೆ ಬಳಸಲಾಗುತ್ತದೆ, ರಾಜ್ಯದಲ್ಲಿ ಕಾನೂನುಬದ್ಧವಾಗಿದ್ದು, ಹಸುವಿನ ಮಾಂಸವನ್ನು ನಿಷೇಧಿಸಲಾಗಿದೆ.

ಆರತಕ್ಷತೆಗೆ ಆಗಮಿಸಿದ್ದ ಅತಿಥಿಗಳಾದ ಆಕಾಶ್ ಮತ್ತು ಗೌರವ್ ಕುಮಾರ್, ಬೀಫ್‌ ಲೇಬಲ್ ಅನ್ನು ಗಮನಿಸಿ ವೀಡಿಯೊ ರೆಕಾರ್ಡ್ ಮಾಡಲು ಪ್ರಾರಂಭಿಸಿದಾಗ ತೊಂದರೆ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಚಟುವಟಿಕೆಗಳು ವಾಗ್ವಾದಕ್ಕೆ ಕಾರಣವಾಗಿ ಶೀಘ್ರದಲ್ಲೇ ಉಲ್ಬಣಗೊಂಡಿತು. ಪೊಲೀಸ್ ತಂಡ, ಆಹಾರ ಮತ್ತು ಔಷಧ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ತಲುಪಿ ವಿಧಿವಿಜ್ಞಾನ ಪರೀಕ್ಷೆಗಾಗಿ ಆಹಾರ ಮಾದರಿಗಳನ್ನು ಸಂಗ್ರಹಿಸಿದರು.

ಜಗಳದಲ್ಲಿ ಭಾಗಿಯಾಗಿರುವ ಮೂವರನ್ನು, ಅಡುಗೆ ಭಟ್ಟರು ಮತ್ತು ಇತರ ಇಬ್ಬರನ್ನು ವಿಚಾರಣೆಗಾಗಿ ಬಂಧಿಸಲಾಗಿತ್ತು. ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಸರ್ಕಲ್‌ ಇನ್‌ಸ್ಪೆಕ್ಟರ್ ಸರ್ವಂ ಸಿಂಗ್ ಹೇಳಿದ್ದಾರೆ. “ಯಾವ ರೀತಿಯ ಮಾಂಸ ಬಡಿಸಲಾಗಿದೆ ಎಂದು ವಿಧಿವಿಜ್ಞಾನ ವರದಿಯು ದೃಢಪಡಿಸಿದ ನಂತರವೇ ಕ್ರಮ ಕೈಗೊಳ್ಳಲಾಗುವುದು. ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಅವರು ಹೇಳಿದರು.

ಗೌರವ್ ಕುಮಾರ್ ಕೂಡ ಲಿಖಿತ ದೂರು ಸಲ್ಲಿಸಿದ್ದು, ಅಡುಗೆ ಒದಗಿಸುವವರು ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. “ಬೀಫ್‌” ಎಂಬ ಪದದ ಬಗ್ಗೆ ತಪ್ಪು ತಿಳುವಳಿಕೆ ಹೆಚ್ಚಾಗಿ ಈ ಪ್ರದೇಶದಲ್ಲಿ ಉದ್ವಿಗ್ನತೆಗೆ ಕಾರಣವಾಗುತ್ತದೆ ಎಂದು ಪೊಲೀಸರು ಪುನರುಚ್ಚರಿಸಿದ್ದಾರೆ.

ಘಟನೆ ಬಹಿರಂಗವಾಗುತ್ತಿದ್ದಂತೆ, ಬಿಜೆಪಿ ಕಾರ್ಯಕರ್ತರು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಜಮಾಯಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಬಿಎಸ್‌ಪಿ ನಾಯಕ ಸಲ್ಮಾನ್ ಶಾಹಿದ್ ಕೂಡ ಸ್ಥಳಕ್ಕೆ ಆಗಮಿಸಿ ಬಿಜೆಪಿ ಕಾರ್ಯಕರ್ತರನ್ನು ‘ಉಗ್ರ ವರ್ತನೆ’ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವರದಿಗಳ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ 'ಸಂಚಾರ್ ಸಾಥಿ' ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...

ಪೋಕ್ಸೊ ಪ್ರಕರಣ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಎಫ್‌ಟಿಎಸ್‌ ವಿಶೇಷ ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್‌ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬದ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಿದ ಇಡಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊಸ ಎಫ್‌ಐಆರ್‌ ದಾಖಲಿಸಿದೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು,...

‘ಸಂಚಾರ ಸಾಥಿ’ ಆ್ಯಪ್‌ ಕಡ್ಡಾಯ: ಬಿಜೆಪಿ ದೇಶವನ್ನು ಸರ್ವಾಧಿಕಾರ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿದೆ ಎಂದ ಪ್ರಿಯಾಂಕಾ ಗಾಂಧಿ 

ಮೊಬೈಲ್ ಫೋನ್ ತಯಾರಕರು ಹೊಸ ಹ್ಯಾಂಡ್‌ಸೆಟ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಮೊದಲೇ ಸ್ಥಾಪಿಸುವಂತೆ ಟೆಲಿಕಾಂ ಇಲಾಖೆ ಕೇಳಿಕೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಇದನ್ನು "ಗೂಢಚಾರಿ ಅಪ್ಲಿಕೇಶನ್" ಎಂದು ಕರೆದಿದ್ದಾರೆ....