Homeಕರ್ನಾಟಕಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

- Advertisement -
- Advertisement -

ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲ ಅತ್ಯಾಚಾರ ಪ್ರಕರಣದಲ್ಲಿ ತನಗೆ ವಿಧಿಸಲಾದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ (ಡಿ.3) ತಿರಸ್ಕರಿಸಿದೆ.

ಅಪರಾಧಿಯ ವಿರುದ್ದ ಇರುವ ಎಲ್ಲಾ ದಾಖಲೆಗಳು, ಪ್ರಕರಣದ ಗಂಭೀರತೆ ಮತ್ತು ಆರೋಪಿಯ ವಿರುದ್ಧ ಇನ್ನೂ ಪ್ರಕರಣಗಳು ಬಾಕಿ ಇರುವುದನ್ನು ಗಮನದಲ್ಲಿಟ್ಟುಕೊಂಡು, ಅಪರಾಧಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಅದು ಇತರ ಪ್ರಕರಣಗಳ ಮೇಲೆ ಪರಿಣಾಮ ಬೀರಬಹುದು ಎಂದು ಪರಿಗಣಿಸಿ, ಈ ಪ್ರಕರಣದಲ್ಲಿ ಶಿಕ್ಷೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಜಾಮೀನು ನೀಡುವುದು ಯೋಗ್ಯವಲ್ಲ ಎಂದು ನ್ಯಾಯಮೂರ್ತಿಗಳಾದ ಕೆ ಎಸ್‌. ಮುದಗಲ್‌ ಮತ್ತು ಟಿ ವೆಂಕಟೇಶ್‌ ನಾಯಕ್‌ ಅವರ ವಿಭಾಗೀಯ ಪೀಠವು ಮುಕ್ತ ನ್ಯಾಯಾಲಯದಲ್ಲಿ ಅಭಿಪ್ರಾಯಪಟ್ಟಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು ಶಿಕ್ಷೆ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಪ್ರಜ್ವಲ್ ರೇವಣ್ಣ, ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಜಾಮೀನು ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮೇಲ್ಮನವಿಯ ಅಂತಿಮ ವಿಚಾರಣೆಯನ್ನು ಜನವರಿ 12ಕ್ಕೆ ನಿಗದಿಪಡಿಸಿದೆ.

ವಿಚಾರಣಾ ನ್ಯಾಯಾಲಯದಲ್ಲಿ ಈಗಾಗಲೇ ವಿಚಾರಣೆ ನಡೆದಿದ್ದು, ಮತ್ತೆ ಹೈಕೋರ್ಟ್‌ನಲ್ಲಿ ಸಾಕ್ಷಿಯ ವಿಚಾರಣೆ ನಡೆಸಲಾಗದು. ತೀರ್ಪಿನಲ್ಲಿರುವ ಸಣ್ಣಪುಟ್ಟ ಲೋಪಗಳನ್ನು ನೋಡಲಾಗದು. ಮೇಲ್ಮನವಿದಾರರ ಪರ ಹಿರಿಯ ವಕೀಲರು, ಪ್ರಜ್ವಲ್ ವಿರುದ್ಧ ರಾಜಕೀಯ ಪ್ರತೀಕಾರ, ದೂರು ದಾಖಲಿಸುವಲ್ಲಿ ವಿಳಂಬ, ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿನ ವ್ಯತ್ಯಾಸ, ಅಶ್ಲೀಲ ವಿಡಿಯೊಗಳ ಜಪ್ತಿಯಾಗದಿರುವುದು, ಗನ್ನಿಗಢ ತೋಟವು ಪ್ರಜ್ವಲ್‌ಗೆ ಸೇರಿಲ್ಲವಾದ್ದರಿಂದ ಅವರು ಅಲ್ಲಿಗೆ ಹೋಗಿಯೇ ಇಲ್ಲ, ಬಸವನಗುಡಿಯ ಮನೆಗೂ ಪ್ರಜ್ವಲ್ ಹೋಗಿಲ್ಲ, ಸಂತ್ರಸ್ತೆಯು ಗನ್ನಿಗಢ ತೋಟದಲ್ಲಿ ಕೆಲಸವನ್ನೇ ಮಾಡಿಲ್ಲ, ಆ ತೋಟವು ಭವಾನಿ ರೇವಣ್ಣ ಅವರ ಸಹೋದರ ಪ್ರಕಾಶ್ ಎಂಬವರಿಗೆ ಸೇರಿದೆ, ವಂಶವಾಹಿ ಪರೀಕ್ಷೆಯನ್ನು ಕಾನೂನಿಗೆ ಅನ್ವಯವಾಗಿ ನಡೆಸಿಲ್ಲ ಎಂಬಿತ್ಯಾದಿ ವಿಚಾರಗಳ ಕುರಿತು ವಾದ ಮಂಡಿಸಿದ್ದರು. ಈ ಎಲ್ಲ ವಿಚಾರಗಳನ್ನು ಪ್ರಕರಣದ ಅಂತಿಮ ವಿಚಾರಣೆಯ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಹಲವು ಹಳೆಯ ಮೇಲ್ಮನವಿಗಳು ಬಾಕಿ ಇದ್ದು, ಈ ಪ್ರಕರಣವನ್ನು ಆಲಿಸಲು ಸಮಯ ಬೇಕಾಗಬಹುದು. ಅಂತಿಮವಾಗಿ ಪ್ರಜ್ವಲ್ ಖುಲಾಸೆಗೊಳಿಸಿದರೆ ಅವರ ಸ್ವಾತಂತ್ರ್ಯವನ್ನು ಮರಳಿಸಲಾಗದು. ಆದ್ದರಿಂದ, ಶಿಕ್ಷೆ ಅಮಾನತಿನಲ್ಲಿರಿಸಿ, ಜಾಮೀನು ನೀಡಬೇಕು ಎಂಬ ಪ್ರಜ್ವಲ್ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಅವರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ವರದಕ್ಷಿಣೆಯಾಗಿ ಬೈಕ್‌ ಕೊಡಲಿಲ್ಲವೆಂದು ಪತ್ನಿಗೆ ‘ತಲಾಖ್’ ನೀಡಿದ ಪತಿ

ಭಾರತೀಯ ಕಾನೂನಿನಡಿಯಲ್ಲಿ ಕ್ರಿಮಿನಲ್ ಅಪರಾಧವಾಗಿದ್ದರೂ, ವರದಕ್ಷಿಣೆಯಾಗಿ ಮೋಟಾರ್ ಸೈಕಲ್ (ಬೈಕ್‌) ಕೊಡದ ಕಾರಣ ತನ್ನ ಪತ್ನಿಗೆ 'ತ್ರಿವಳಿ ತಲಾಖ್' ನೀಡಿದ ಆರೋಪದ ಮೇಲೆ ಮಹಾರಾಷ್ಟ್ರದ ಭಿವಂಡಿಯ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಥಾಣೆ...

ದೆಹಲಿ ಮಹಾನಗರ ಪಾಲಿಕೆ ಉಪಚುನಾವಣೆ: 7 ವಾರ್ಡ್‌ಗಳಲ್ಲಿ ಬಿಜೆಪಿ, ಮೂರರಲ್ಲಿ ಆಪ್‌ಗೆ ಗೆಲುವು

ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಉಪಚುನಾವಣೆಯ ಮತಗಳ ಎಣಿಕೆ ಬುಧವಾರ (ಡಿಸೆಂಬರ್ 1) ನಡೆಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ) 12 ವಾರ್ಡ್‌ಗಳಲ್ಲಿ ಏಳು ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ....

ಪಶ್ಚಿಮ ಬಂಗಾಳದಲ್ಲಿ ನಾವು ಬಂಧನ ಕೇಂದ್ರಗಳನ್ನು ಸ್ಥಾಪಿಸುವುದಿಲ್ಲ : ಮಮತಾ ಬ್ಯಾನರ್ಜಿ

"ನಾನು ಸಂವಿಧಾನವನ್ನು ಅನುಸರಿಸುತ್ತೇನೆ, ಜಾತ್ಯತೀತ ರಾಜಕೀಯ ಮಾಡುತ್ತೇನೆ. ನಮ್ಮ ಸರ್ಕಾರ ರಾಜ್ಯದಲ್ಲಿ ಬಂಧನ ಕೇಂದ್ರಗಳನ್ನು ಸ್ಥಾಪಿಸುವುದಿಲ್ಲ" ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿ.2) ಹೇಳಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ...

ಸಂಸತ್ ಚಳಿಗಾಲದ ಅಧಿವೇಶನ : ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರತಿಪಕ್ಷಗಳಿಂದ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ, ಇಂಡಿಯಾ ಒಕ್ಕೂಟ ಬುಧವಾರ (ಡಿ.3) ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ದ ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿತು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಉತ್ತರ ಪ್ರದೇಶ| ಮೇಲ್ವಿಚಾರಕರ ಕಿರುಕುಳದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಎಲ್‌ಒ; ಸಹೋದ್ಯೋಗಿಗಳಿಂದ ಪ್ರತಿಭಟನೆ

ತೀವ್ರ ಕಳವಳಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಮೀರತ್‌ನಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯದಲ್ಲಿ ತೊಡಗಿದ್ದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುರಳಿಪುರ ನಿವಾಸಿ 25...

ಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ ಸುನಾಲಿ ಖಾತೂನ್ ಮತ್ತು ಅವರ 8 ವರ್ಷದ ಮಗ ಸಬೀರ್ ಅವರನ್ನು ಮಾನವೀಯ ನೆಲೆಯಲ್ಲಿ ಭಾರತಕ್ಕೆ ಮರಳಿ ಕರೆತರುವುದಾಗಿ ಕೇಂದ್ರ ಸರ್ಕಾರ ಬುಧವಾರ (ಡಿ.3) ಸುಪ್ರೀಂ...

ಮುಟ್ಟಿನ ರಜೆ : ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೋಟೆಲ್ ಸಂಘ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ...

ಹೈದರಾಬಾದ್| ರದ್ದಾದ ನೋಟುಗಳ ದುರುಪಯೋಗ; ಅಂಚೆ ಸಿಬ್ಬಂದಿಗೆ 2 ವರ್ಷ ಜೈಲು ಶಿಕ್ಷೆ

ನೋಟು ರದ್ದತಿಯ ಸಂದರ್ಭದಲ್ಲಿ 27.27 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಶೇಷ ಸಿಬಿಐ ನ್ಯಾಯಾಲಯವು ಅಂಚೆ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 65,000 ರೂ.ಗಳ ದಂಡದೊಂದಿಗೆ ಎರಡು ವರ್ಷಗಳ ಕಠಿಣ ಜೈಲು...

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...